AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಮುಂಬೈ-ಆಗ್ರಾ ಹೆದ್ದಾರಿಯಲ್ಲಿರುವ ಹೋಟೆಲ್‌ಗೆ ಟ್ರಕ್ ಡಿಕ್ಕಿ, 9 ಸಾವು, ಹಲವರಿಗೆ ಗಾಯ

ಧುಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೋಟೆಲ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರು ಸಾವನ್ನಪ್ಪಿದ್ದು, ಅನೇಕರಿಗೆ ಗಾಯಗಳಾಗಿವೆ.

Maharashtra: ಮುಂಬೈ-ಆಗ್ರಾ ಹೆದ್ದಾರಿಯಲ್ಲಿರುವ ಹೋಟೆಲ್‌ಗೆ ಟ್ರಕ್ ಡಿಕ್ಕಿ, 9 ಸಾವು, ಹಲವರಿಗೆ ಗಾಯ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 04, 2023 | 3:36 PM

Share

ಮುಂಬೈ: ಮಹಾರಾಷ್ಟ್ರ(Maharashtra) ಧುಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೋಟೆಲ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರು ಸಾವನ್ನಪ್ಪಿದ್ದು, ಅನೇಕರಿಗೆ ಗಾಯಗಳಾಗಿವೆ. ಮಹಾರಾಷ್ಟ್ರದ ರಾಜಧಾನಿಯಿಂದ 300 ಕಿಮೀ ದೂರದಲ್ಲಿರುವ ಧುಲೆ ಜಿಲ್ಲೆಯ ಮುಂಬೈ-ಆಗ್ರಾ ಹೆದ್ದಾರಿಯ ಪಲಾಸ್ನೆರ್ ಗ್ರಾಮದ ಬಳಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟ್ರಕ್​​ನ ಬ್ರೇಕ್ ಫೈಲ್ ಆಗಿರುವ ಕಾರಣ ಡ್ರೈವರ್​​ನ ನಿಯಂತ್ರಣ ತಪ್ಪಿ ಟ್ರಕ್ ಎರಡು ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಹೆದ್ದಾರಿಯ ಬಸ್ ನಿಲ್ದಾಣದ ಬಳಿ ಇದ್ದ ಹೋಟೆಲ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Bengaluru Accident: ಬೆಂಗಳೂರಿನ ಜಾಲಹಳ್ಳಿ ಕ್ರಾಸ್​​ನಲ್ಲಿ ಬಸ್, ಸ್ಕೂಟರ್ ಅಪಘಾತ; ಪಿಯು ವಿದ್ಯಾರ್ಥಿನಿ ಸಾವು

ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೊಟೇಲ್​​ಗೆ ಡಿಕ್ಕಿ ಹೊಡೆಯುವಮುನ್ನ ಒಂದು ಬಿಳಿ ಕಾರಿಗೆ ಡಿಕ್ಕಿ ಹೊಡೆಯುವುದನ್ನು ಈ ದೃಶ್ಯದಲ್ಲಿ ಕಾಣಬಹುದು. ಡಿಕ್ಕಿಯ ರಭಸಕ್ಕೆ ರಸ್ತೆ ಬದಿ ನಿಂತಿದ್ದ ಕೆಲವರಿಗೆ ಪೆಟ್ಟಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಾಳುಗಳನ್ನು ಶಿರ್‌ಪುರ ಮತ್ತು ಧುಲೆ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:45 pm, Tue, 4 July 23