AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಮೆಹ್ಸಾನಾದಲ್ಲಿ ನಿರ್ಮಾಣ ಸ್ಥಳದಲ್ಲಿ ಗೋಡೆ ಕುಸಿದು 9 ಕಾರ್ಮಿಕರು ಸಾವು, ಒಬ್ಬರಿಗೆ ಗಾಯ

ಮೆಹ್ಸಾನಾ ಜಿಲ್ಲಾ ಕೇಂದ್ರದಿಂದ ಸುಮಾರು 37 ಕಿಮೀ ದೂರದಲ್ಲಿರುವ ಕಡಿ ಪಟ್ಟಣದ ಬಳಿ ಈ ಘಟನೆ ನಡೆದಿದೆ. ಜಸಲ್‌ಪುರ ಗ್ರಾಮದಲ್ಲಿ ಕಾರ್ಖಾನೆಯೊಂದಕ್ಕೆ ಭೂಗತ ಟ್ಯಾಂಕ್‌ಗಾಗಿ ಹಲವಾರು ಕಾರ್ಮಿಕರು ಹೊಂಡವನ್ನು ಅಗೆಯುತ್ತಿದ್ದಾಗ ಸಡಿಲವಾದ ಮಣ್ಣು ಕುಸಿದು ಅವರನ್ನು  ಜೀವಂತವಾಗಿ ಹೂತುಹಾಕಿದೆ ಎಂದು ಕಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪ್ರಹ್ಲಾದಸಿಂಹ ವಘೇಲಾ ತಿಳಿಸಿದ್ದಾರೆ.

ಗುಜರಾತ್: ಮೆಹ್ಸಾನಾದಲ್ಲಿ ನಿರ್ಮಾಣ ಸ್ಥಳದಲ್ಲಿ ಗೋಡೆ ಕುಸಿದು 9 ಕಾರ್ಮಿಕರು ಸಾವು, ಒಬ್ಬರಿಗೆ ಗಾಯ
ಗೋಡೆ ಕುಸಿದು 9 ಮಂದಿ ಸಾವು
ರಶ್ಮಿ ಕಲ್ಲಕಟ್ಟ
|

Updated on: Oct 12, 2024 | 7:02 PM

Share

ಮೆಹ್ಸಾನಾ ಅಕ್ಟೋಬರ್ 12: ಗುಜರಾತ್‌ನ (Gujarat) ಮೆಹ್ಸಾನಾ ಜಿಲ್ಲೆಯ ಕಡಿ ತಾಲೂಕಿನ ಜಸಾಲ್‌ಪುರ ಗ್ರಾಮದ ಬಳಿ ಖಾಸಗಿ ನಿರ್ಮಾಣ ಸ್ಥಳದಲ್ಲಿ ಗೋಡೆ ಕುಸಿದು ಒಂಬತ್ತು ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ಕಿಬಿದ್ದವರ ನೆರವಿಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ರಕ್ಷಣಾ ತಂಡಗಳು ಒಂಬತ್ತು ಶವಗಳನ್ನು ಹೊರತೆಗೆದಿವೆ ಎಂದು ಪಿಟಿಐ ವರದಿ ಮಾಡಿದೆ. ಶನಿವಾರ ಮಧ್ಯಾಹ್ನ 1:45 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಮೆಹ್ಸಾನಾ ಡಿಡಿಒ ಕಚೇರಿ ಖಚಿತಪಡಿಸಿದೆ.

ಇದು ನಿರ್ಮಾಣ ಹಂತದಲ್ಲಿದ್ದ ಖಾಸಗಿ ಕಂಪನಿ. ಘಟನೆ ಮಧ್ಯಾಹ್ನ 1.45 ರ ಸುಮಾರಿಗೆ ನಡೆದಿದೆ. ನಮ್ಮ ಮಾಹಿತಿಯಂತೆ 9-10 ಜನರು ಸಿಕ್ಕಿಬಿದ್ದಿದ್ದಾರೆ, ಅದರಲ್ಲಿ 6 ಮಂದಿ 19 ವರ್ಷದ ಯುವಕನನ್ನು ರಕ್ಷಿಸಲಾಗಿದೆಯ 8-9 ಜನರು ಇಲ್ಲಿ ಕೆಲಸ ಮಾಡುತ್ತಿದ್ದಾರೆ, ನಾವು ಅವರನ್ನು ಜೀವಂತವಾಗಿ ರಕ್ಷಿಸಬೇಕೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ ಎಂದು ಮೆಹ್ಸಾನಾ ಜಿಲ್ಲಾ ಅಭಿವೃದ್ಧಿ ಅಧಿಕಾರಿ (ಡಿಡಿಒ) ಡಾ. ಹಸರತ್ ಜಾಸ್ಮಿನ್ ಹೇಳಿದ್ದಾರೆ.

ಮೆಹ್ಸಾನಾ ಜಿಲ್ಲಾ ಕೇಂದ್ರದಿಂದ ಸುಮಾರು 37 ಕಿಮೀ ದೂರದಲ್ಲಿರುವ ಕಡಿ ಪಟ್ಟಣದ ಬಳಿ ಈ ಘಟನೆ ನಡೆದಿದೆ. ಜಸಲ್‌ಪುರ ಗ್ರಾಮದಲ್ಲಿ ಕಾರ್ಖಾನೆಯೊಂದಕ್ಕೆ ಭೂಗತ ಟ್ಯಾಂಕ್‌ಗಾಗಿ ಹಲವಾರು ಕಾರ್ಮಿಕರು ಹೊಂಡವನ್ನು ಅಗೆಯುತ್ತಿದ್ದಾಗ ಸಡಿಲವಾದ ಮಣ್ಣು ಕುಸಿದು ಅವರನ್ನು  ಜೀವಂತವಾಗಿ ಹೂತುಹಾಕಿದೆ ಎಂದು ಕಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪ್ರಹ್ಲಾದಸಿಂಹ ವಘೇಲಾ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ವೇಳೆ ದಾಳಿ; ಕಳವಳ ವ್ಯಕ್ತಪಡಿಸಿದ ಭಾರತ

ಘಟನೆಯ ಬಗ್ಗೆ ಆಡಳಿತವು ತ್ವರಿತವಾಗಿ ಪ್ರತಿಕ್ರಿಯಿಸಿತು, ಆದರೆ ಮಣ್ಣಿನಲ್ಲಿ ಸಿಕ್ಕಿಬಿದ್ದ ಹತ್ತು ಕಾರ್ಮಿಕರಲ್ಲಿ ಒಬ್ಬರು ಮಾತ್ರ ಬದುಕುಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತ ಮತ್ತು ಗೋಡೆ ಕುಸಿದು ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. “ಗುಜರಾತ್‌ನ ಮೆಹ್ಸಾನಾದಲ್ಲಿ ಗೋಡೆ ಕುಸಿತದಿಂದ ಉಂಟಾದ ಅಪಘಾತ ಅತ್ಯಂತ ದುಃಖಕರವಾಗಿದೆ. ಇದರಲ್ಲಿ ತಮ್ಮ ಆತ್ಮೀಯರನ್ನು ಕಳೆದುಕೊಂಡವರಿಗೆ ನನ್ನ ತೀವ್ರ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಲ್ಲಿ ತೊಡಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು