AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ನೋ: ಶಾಲೆಯಲ್ಲಿ ಆಟವಾಡುತ್ತಿದ್ದ 9 ವರ್ಷದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಬಾಲಕಿಯ ಮನೆಯವರು ಆಕೆಯನ್ನು ಚಂದನ್ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಹೃದಯಾಘಾತದಿಂದ ಸಾವಿಗೀಡಾಗಿರುವುದಾಗಿ ತಿಳಿಸಿದ್ದಾರೆ ಎಂದು ಪ್ರಾಂಶುಪಾಲರು ಹೇಳಿದ್ದಾರೆ.  ಈ ವಿಷಯ ಪೊಲೀಸರ ಗಮನಕ್ಕೂ ಬಂದಿದ್ದು, ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಬಾಲಕಿಯ ಮನೆಯವರು ಹೇಳಿದ್ದಾರೆ. ಬಾಲಕಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಶುಕ್ರವಾರ ಶಾಲೆಗೆ ರಜೆ ಘೋಷಿಸಲಾಗಿತ್ತು

ಲಕ್ನೋ: ಶಾಲೆಯಲ್ಲಿ ಆಟವಾಡುತ್ತಿದ್ದ 9 ವರ್ಷದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Sep 14, 2024 | 9:33 PM

Share

ಲಕ್ನೋ ಸೆಪ್ಟೆಂಬರ್ 14: ಇಲ್ಲಿನ ಮಾಂಟ್‌ಫೋರ್ಟ್ ಶಾಲೆಯ 9 ವರ್ಷದ ವಿದ್ಯಾರ್ಥಿನಿ ಆವರಣದಲ್ಲಿ ಆಟವಾಡುತ್ತಿದ್ದಾಗ ಹೃದಯಾಘಾತದಿಂದ ಸಾವಿಗೀಡಾಗಿದ್ದಾಳಶೆ ಎಂದು ಶಾಲೆಯ ಪ್ರಾಂಶುಪಾಲರು ಶನಿವಾರ ತಿಳಿಸಿದ್ದಾರೆ. ಗುರುವಾರ ಶಾಲೆಯ ಪ್ರಾಂಶುಪಾಲರು ನೀಡಿದ ಹೇಳಿಕೆಯ ಪ್ರಕಾರ, 3 ನೇ ತರಗತಿಯ ವಿದ್ಯಾರ್ಥಿನಿ ಮಾನ್ವಿ ಸಿಂಗ್ ಆಟದ ಮೈದಾನದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾಳೆ ಎಂಬ ಮಾಹಿತಿ ಪಡೆದ ನಂತರ ಆಕೆಯನ್ನು ಹತ್ತಿರದ ಫಾತಿಮಾ ಆಸ್ಪತ್ರೆಗೆ ಸಾಗಿಸಲಾಯಿತು.

ಬಾಲಕಿಯ ಮನೆಯವರು ಆಕೆಯನ್ನು ಚಂದನ್ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಹೃದಯಾಘಾತದಿಂದ ಸಾವಿಗೀಡಾಗಿರುವುದಾಗಿ ತಿಳಿಸಿದ್ದಾರೆ ಎಂದು ಪ್ರಾಂಶುಪಾಲರು ಹೇಳಿದ್ದಾರೆ.  ಈ ವಿಷಯ ಪೊಲೀಸರ ಗಮನಕ್ಕೂ ಬಂದಿದ್ದು, ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಬಾಲಕಿಯ ಮನೆಯವರು ಹೇಳಿದ್ದಾರೆ. ಬಾಲಕಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಶುಕ್ರವಾರ ಶಾಲೆಗೆ ರಜೆ ಘೋಷಿಸಲಾಗಿತ್ತು.

ಕಡಪ ಜಿಲ್ಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಕಡಪ ಜಿಲ್ಲೆಯ ರಾಜುಪಾಲೆಂ ಮಂಡಲದ ಕೊರ್ರಪಾಡು ಗ್ರಾಮದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾರ್ಚ್ ತಿಂಗಳಲ್ಲಿ ವರದಿಯಾಗಿತ್ತು. 15ರ ಹರೆಯದ ವಿದ್ಯಾರ್ಥಿನಿ ಲಿಖಿತಾ ಮೊದಲ ದಿನದ ಪರೀಕ್ಷೆಗೆ ಹಾಜರಾಗಿದ್ದಳು. ಆಮೇಲೆ ವಸತಿ ಶಾಲೆಯಲ್ಲಿ ಊಟ ಮಾಡಿ ಮುಂದಿನ ಪರೀಕ್ಷೆಗೆ ತನ್ನ ಅಧ್ಯಯನವನ್ನು ಮುಂದುವರೆಸುತ್ತಿದ್ದಳು ಆಗ ಎದೆನೋವು ಕಾಣಿಸಿಕೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಸಹ ವಿದ್ಯಾರ್ಥಿಗಳು ಶಾಲಾ ಆಡಳಿತ ಮಂಡಳಿಗೆ ತಿಳಿಸಿದ್ದು,. ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಮೊದಲು ಪ್ರಾಥಮಿಕ ಆರೋಗ್ಯ ಸೇವೆಯನ್ನು ಒದಗಿಸಲಾಗಿತ್ತು.

ಇದನ್ನೂ ಓದಿ:  Viral Video: ಕಾರು ಹರಿದು 3 ವರ್ಷದ ಮಗು ಸಾವು; ಭೀಕರ ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ಸ್ಥಳೀಯ ಆಸ್ಪತ್ರೆಯ ವೈದ್ಯರು ವಿದ್ಯಾರ್ಥಿಯನ್ನು “ಕೊನೆಯುಸಿರೆಳೆದಿರುವುದಾಗಿ” ಎಂದು ಹೇಳಿದ್ದು ಬಾಲಕಿಗೆ ಹೃದಯಾಘಾತವಾಗಿದೆ ಎಂದು ನಂಬಲಾಗಿದೆ. “ಲಿಖಿತಾ ಶೈಕ್ಷಣಿಕ ಅಧ್ಯಯನದಲ್ಲಿ ಸಕ್ರಿಯರಾಗಿದ್ದರು ಆದರೆ ವಾರ್ಷಿಕ ಸಾರ್ವಜನಿಕ ಪರೀಕ್ಷೆಗಳಿಗೆ ಸಂಬಂಧಿಸಿದ ಆತಂಕ ಮತ್ತು ಒತ್ತಡವು ಅವಳಿಗೆ ಹಾನಿಯನ್ನುಂಟುಮಾಡಿರಬಹುದು. ಅವಳು ಶಾಲೆಯಲ್ಲಿದ್ದಾಗ ಯಾವುದೇ ಆರೋಗ್ಯ ಸಮಸ್ಯೆಯ ಬಗ್ಗೆ ಅವಳು ಎಂದಿಗೂ ದೂರು ನೀಡಲಿಲ್ಲ ”ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ