ಮಧ್ಯಪ್ರದೇಶ: 90 ವರ್ಷದ ವೃದ್ಧೆ ಮೇಲೆ ನಾಲ್ವರು ಮುಸುಕುಧಾರಿಗಳಿಂದ ಸಾಮೂಹಿಕ ಅತ್ಯಾಚಾರ

90 ವರ್ಷದ ವೃದ್ಧೆ ಮೇಲೆ ನಾಲ್ವರು ಮುಸುಕುಧಾರಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಈ ಘಟನೆ ನಡೆಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ಆರಂಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಸಮಯದಲ್ಲಿ ಗಾಯಗೊಂಡಿರುವ ಮಹಿಳೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆ ಅಪಾಯದಿಂದ ಪಾರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮಧ್ಯಪ್ರದೇಶ: 90 ವರ್ಷದ ವೃದ್ಧೆ ಮೇಲೆ ನಾಲ್ವರು ಮುಸುಕುಧಾರಿಗಳಿಂದ ಸಾಮೂಹಿಕ ಅತ್ಯಾಚಾರ
ಪೊಲೀಸ್

Updated on: Mar 08, 2026 | 11:02 AM

ಖಾಂಡ್ವಾ, ಮಾರ್ಚ್​ 08: 90 ವರ್ಷದ ವೃದ್ಧೆ ಮೇಲೆ ನಾಲ್ವರು ಮುಸುಕುಧಾರಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಈ ಘಟನೆ ನಡೆಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ಆರಂಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಸಮಯದಲ್ಲಿ ಗಾಯಗೊಂಡಿರುವ ಮಹಿಳೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆ ಅಪಾಯದಿಂದ ಪಾರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ತನ್ನ ಹಳ್ಳಿಯ ಕೃಷಿ ಹೊಲದಲ್ಲಿ ಗುರುವಾರ ಸಂಜೆ ಮಹಿಳೆ ಒಬ್ಬಂಟಿಯಾಗಿದ್ದಾಗ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ ಮಹಿಳೆ ಮರುದಿನ ಬೆಳಗ್ಗೆ ಬೇರೆ ಹಳ್ಳಿಯಲ್ಲಿ ವಾಸಿಸುವ ತನ್ನ ಮಗಳಿಗೆ ಘಟನೆಯ ಬಗ್ಗೆ ತಿಳಿಸಿದ್ದಾರೆ. ನಂತರ ಅವರು ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆಸ್ಪತ್ರೆ ಸಿಬ್ಬಂದಿ ಮಹಿಳೆ ಮತ್ತು ಅವರ ಮಗಳಿಗೆ ಪೊಲೀಸರನ್ನು ಸಂಪರ್ಕಿಸಲು ಸಲಹೆ ನೀಡಿದ್ದಾರೆ ಎಂದು ಖಾಂಡ್ವಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರೈ ಪಿಟಿಐಗೆ ತಿಳಿಸಿದ್ದಾರೆ. ದೂರು ಸ್ವೀಕರಿಸಿದ ನಂತರ, ಪೊಲೀಸರು ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 70 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ರೈ ಹೇಳಿದರು.

ಮತ್ತಷ್ಟು ಓದಿ: ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ ಜೈಲಿನಲ್ಲೇ ಕೊಳೆಯುವ ಶಿಕ್ಷೆ ವಿಧಿಸಿದ ಕೋರ್ಟ್

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಆರೋಪಿಗಳ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದವರಿಗೆ 10,000 ರೂ. ಬಹುಮಾನ ನೀಡುವುದಾಗಿಯೂ ಪೊಲೀಸರು ಘೋಷಿಸಿದ್ದಾರೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us