India Coronavirus Update: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 93,249 ಜನರಿಗೆ ಕೊರೊನಾ ಸೋಂಕು, 513 ಬಲಿ

ಕಳೆದ 24 ಗಂಟೆಯಲ್ಲಿ ಕೊರೊನಾಗೆ 513 ಜನರು ಬಲಿಯಾಗಿದ್ದಾರೆ. ಈ ಮೂಲಕ ಈವರೆಗೆ ಕೊರೊನಾ ಸೋಂಕು ತಗುಲಿ ಮೃತಪಟ್ಟ ಭಾರತೀಯರ ಸಂಖ್ಯೆ 1,64,623ನ್ನು ತಲುಪಿದೆ.

India Coronavirus Update: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 93,249 ಜನರಿಗೆ ಕೊರೊನಾ ಸೋಂಕು, 513 ಬಲಿ
ಪ್ರಾತಿನಿಧಿಕ ಚಿತ್ರ
Follow us
guruganesh bhat
| Updated By: shruti hegde

Updated on: Apr 04, 2021 | 11:01 AM

ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 93,249 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 1,24,85,509ಕ್ಕೆ ಏರಿಕೆಯಾದಂತಾಗಿದೆ. ಕಳೆದ 24 ಗಂಟೆಯಲ್ಲಿ ಕೊರೊನಾಗೆ 513 ಜನರು ಬಲಿಯಾಗಿದ್ದಾರೆ. ಈ ಮೂಲಕ ಈವರೆಗೆ ಕೊರೊನಾ ಸೋಂಕು ತಗುಲಿ ಮೃತಪಟ್ಟ ಭಾರತೀಯರ ಸಂಖ್ಯೆ 1,64,623ನ್ನು ತಲುಪಿದೆ. ಕೊವಿಡ್​ನಿಂದ 1,16,29,289 ಜನರು ಹುಷಾರಾಗಿದ್ದು, ಸದ್ಯ ದೇಶದಲ್ಲಿ ಇರುವ ಸಕ್ರಿಯ ಪ್ರಕರಣಗಳ ಸಂಖ್ಯೆ 6,91,597. ಕೊವಿಡ್ ಲಸಿಕೆ ವಿತರಣೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಭಾರತದಲ್ಲಿ ಈವರೆಗೆ 7,59,79,651 ಜನರಿಗೆ ಕೊವಿಡ್ ಲಸಿಕೆ ನೀಡಲಾಗಿದೆ.

2020ರ ಸೆಪ್ಟೆಂಬರ್​ ನಂತರ ಕಳೆದ 24 ಗಂಟೆಯಲ್ಲಿ ಹೆಚ್ಚಳವಾದ ಕೊರೊನಾ ಸೋಂಕಿತರ ಸಂಖ್ಯೆಯೇ ಈವರೆಗೆ ಒಂದೇ ದಿನದಲ್ಲಿ ಹೆಚ್ಚು ಸೋಂಕಿತರು ಪತ್ತೆಯಾದ ದಿನವಾಗಿದೆ. ಅಲ್ಲದೇ 2020ರ ಅಕ್ಟೋಬರ್ ನಂತರ ಅತಿ ಹೆಚ್ಚು ಜನರು ಕೊರೊನಾಕ್ಕೆ ಬಲಿಯಾದ ದಿನವೂ ನಿನ್ನೆಯೇ ಆಗಿದೆ. ಕೊರೊನಾದಿಂದ ಗುಣಮುಖರಾಗುವ ರಾಷ್ಟ್ರೀಯ ಶೇಕಡಾ ಪ್ರಮಾಣ 93.14ಕ್ಕೆ ಕುಸಿದಿದೆ. ದೇಶದ 8 ರಾಜ್ಯಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ತೀವ್ರಗತಿಯಲ್ಲಿ ಏರುತ್ತಿದ್ದು ಅವುಗಳ ಪೈಕಿ ಕರ್ನಾಟಕವೂ ಇದೆ ಎಂಬುದು ಕಳವಳದ ಸಂಗತಿಯಾಗಿದೆ. ಕೊರೊನಾ ಹೆಚ್ಚುತ್ತಿರುವ ಇನ್ನುಳಿದ ರಾಜ್ಯಗಳಲ್ಲಿ ಮಹಾರಾಷ್ಟ್ರ, ತಮಿಳುನಾಡು,ಚತ್ತೀಸ್​ಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಂಜಾಬ್ ರಾಜ್ಯಗಳು ಸೇರಿವೆ.

ಫ್ರಂಟ್​ಲೈನ್​ ವಾರಿಯರ್ಸ್​ ಅಲ್ಲದಿದ್ದರೂ ಕೊವಿಡ್​ ಲಸಿಕೆಗೆ ಹೆಸರು ನೋಂದಣಿ; ಪ್ರಕ್ರಿಯೆಯನ್ನೇ ತಡೆಹಿಡಿಯಲು ರಾಜ್ಯಸರ್ಕಾರಗಳಿಗೆ ಸೂಚನೆ ಕೊವಿಡ್ ಲಸಿಕೆ ಪಡೆಯಲು ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್‌ಲೈನ್ ವಾರಿಯರ್ಸ್‌ ಹೆಸರು ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಆರೋಗ್ಯ, ಕುಟುಂಬ ಕಲ್ಯಾಣ ಸಚಿವಾಲಯದಿಂದ ರಾಜ್ಯ ಸರ್ಕಾರಗಳಿಗೆ ಸೂಚನೆ ಬಂದಿದೆ. ಇದರಿಂದಾಗಿ ಸದ್ಯ ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್​ಲೈನ್​ ವಾರಿಯರ್ಸ್​ಗಳಿಗೆ ಲಸಿಕೆ ಪಡೆಯಲು ಅವಕಾಶ ಸಿಗುವುದಿಲ್ಲ ಎನ್ನಲಾಗುತ್ತಿದೆ. ಫ್ರಂಟ್​ಲೈನ್​ ವಾರಿಯರ್ಸ್​ ಹೆಸರಲ್ಲಿ ಬೇರೆಯವರು ಹೆಸರು ನೋಂದಣಿ ಮಾಡಿಕೊಳ್ಳುತ್ತಿದ್ದ ಕಾರಣ ಪ್ರಕ್ರಿಯೆಯನ್ನು ತಡೆಯಲಾಗಿದೆ ಎಂಬ ಮಾಹಿತಿ ಲಭಿಸಿದೆ.

ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್‌ಲೈನ್ ವಾರಿಯರ್ಸ್ ಹೆಸರಿನಲ್ಲಿ ಜನರು ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳುತ್ತಿದ್ದ ಪರಿಣಾಮ ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಆರೋಗ್ಯ, ಕುಟುಂಬ ಕಲ್ಯಾಣ ಸಚಿವಾಲಯದಿಂದ ರಾಜ್ಯ ಸರ್ಕಾರಗಳಿಗೆ ಬಂದಿರುವ ಸೂಚನೆಯ ಅನುಸಾರ ಮುಂದಿನ ತೀರ್ಮಾನ ಕೈಗೊಳ್ಳುವ ತನಕವೂ ಲಸಿಕೆಗೆ ಹೆಸರು ನೋಂದಣಿ ಮಾಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: IPL 2021: ಆರ್​ಸಿಬಿಗೆ ಆಘಾತ! ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಕೊರೊನಾ ಸೋಂಕು.. ಮೊದಲೆರಡು ಪಂದ್ಯಗಳಲ್ಲಿ ಆಡುವುದು ಡೌಟ್!

ಕೊವಿಡ್ ಹಾವಳಿ ಶಾಂತವಾದ ನಂತರ ಹುಟ್ಟಿಕೊಳ್ಳಲಿವೆಯೇ ಸೂಪರ್ ಬ್ಯಾಕ್ಟೀರಿಯಾಗಳು?

(93 249 new Covid 19 cases reported in last 24 hours in India)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ