AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Osmania University ಅಜ್ಜಿಯ ಜೋಶ್ ನೋಡಿ.. 93ನೇ ವಯಸ್ಸಿನಲ್ಲಿ ಪಿಎಚ್ ಡಿ ಪದವಿ ಗಳಿಸಿದ್ದಾರೆ! ಅಜ್ಜಿಯ ಸ್ಪೂರ್ತಿದಾಯಕ ಪಯಣ ಹೀಗಿದೆ

ಉಸ್ಮಾನಿಯಾ ವಿಶ್ವವಿದ್ಯಾಲಯದ 83ನೇ ಘಟಿಕೋತ್ಸವ ಹೈದರಾಬಾದಿನ ಟ್ಯಾಗೋರ್ ಕಲಾಕ್ಷೇತ್ರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ, 93 ವರ್ಷದ ಅಜ್ಜಿ ತಮ್ಮ ಪಿಎಚ್‌ಡಿ ಪದವಿಯನ್ನು ಪಡೆದು, ಸ್ಫೂರ್ತಿಯಾದರು. ಓದು, ಕಲಿಕೆಗೆ ವಯಸ್ಸು ಅಡ್ಡಿಯಾಗುವುದಿಲ್ಲ ಎನ್ನುವುದಕ್ಕೆ ರೇವತಿ ತಂಗವೇಲು ಅವರ ಸ್ಪೂರ್ತಿದಾಯಕ ಪಯಣವೇ ಸಾಕ್ಷಿ.

Osmania University ಅಜ್ಜಿಯ ಜೋಶ್ ನೋಡಿ.. 93ನೇ ವಯಸ್ಸಿನಲ್ಲಿ ಪಿಎಚ್ ಡಿ ಪದವಿ ಗಳಿಸಿದ್ದಾರೆ! ಅಜ್ಜಿಯ ಸ್ಪೂರ್ತಿದಾಯಕ ಪಯಣ ಹೀಗಿದೆ
ಶಿಕ್ಷಕಿಯಾಗಿ ನಿವೃತ್ತಿಯಾದ ಮೇಲೆ ನಿಂತ ನೀರಾಗಲು ಬಯಸದ ಹಿರಿಯ ಜೀವ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 01, 2023 | 1:53 PM

Share

ಹೈದರಾಬಾದ್, ನವೆಂಬರ್ 1: ನಿನ್ನೆಯಷ್ಟೇ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ 83ನೇ ಪದವಿ ಪ್ರದಾನ ಸಮಾರಂಭ ನಡೆದಿದ್ದು ಗೊತ್ತೇ ಇದೆ. ಕುತೂಹಲಕಾರಿ ಸಂಗತಿಯೆಂದರೆ 93 ವರ್ಷದ ಅಜ್ಜಿಯೊಬ್ಬರು ಈ ಕಾರ್ಯಕ್ರಮದಲ್ಲಿ ಪಿಎಚ್‌ಡಿ ಪದವಿ (PhD) ಪಡೆದು ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ವಿದ್ಯಾಭ್ಯಾಸಕ್ಕೆ ವಯಸ್ಸು ಅಡ್ಡಿಯಲ್ಲ, ಕಲಿಯುವ ಕುತೂಹಲ ಇರಬೇಕಷ್ಟೇ, ವಯಸ್ಸು ಒಂದು ಅಂಕೆಯಲ್ಲ ಎಂಬುದನ್ನು ಈ ಅಜ್ಜಿ ( retired lady teacher) ಮತ್ತೊಮ್ಮೆ ಸಾಬೀತು ಮಾಡಿದರು. ಇನ್ನು ವಿವರಗಳನ್ನು ನೋಡುವುದಾದರೆ…

ಡಾ. ರೇವತಿ ತಂಗವೇಲು ಯಾರು..? ಶಿಕ್ಷಕಿಯಾಗಿ ನಿವೃತ್ತಿಯಾದ ಮೇಲೆ ನಿಂತ ನೀರಾಗಲು ಬಯಸಲಿಲ್ಲ ಅವರು

ತೆಲಂಗಾಣ ರಾಜಧಾನಿ ಹೈದರಾಬಾದ್ ಮೂಲದ ರೇವತಿ ತಂಗವೇಲು ಅವರು ಶಿಕ್ಷಕಿಯಾಗಿ ಸೇವೆ ಸಲ್ಲಿಸಿ 1990ರಲ್ಲಿ ನಿವೃತ್ತರಾಗಿದ್ದರು. ನಿವೃತ್ತಿಯ ನಂತರ ಅವರು ಅಲ್ಲಿಗೇ ನಿಂತ ನೀರಾಗಲು ಬಯಸಲಿಲ್ಲ. ತಮ್ಮ ಅಧ್ಯಯನವನ್ನು ಮುಂದುವರೆಸಿದರು. ಅವರು ಇಂಗ್ಲಿಷ್‌ನಲ್ಲಿ ಪಿಎಚ್‌ಡಿ ಮಾಡಲು ಬಯಸಿದರು. ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪ್ರವೇಶವನ್ನೂ ಪಡೆದರು. ರೇವತಿ ತಂಗವೇಲು ಅವರು ಇಂಗ್ಲಿಷ್ ವ್ಯಾಕರಣ, ವರ್ಣಮಾಲೆ ಮತ್ತು ಪದ ಸಂಯೋಜನೆಯಂತಹ ವಿಷಯಗಳ ಬಗ್ಗೆ ಸಂಶೋಧನೆ ಮಾಡಿದ್ದಾರೆ! ಪಿಎಚ್‌ಡಿ ಪದವಿಯನ್ನು ಯಶಸ್ವಿಯಾಗಿ ಪೂರೈಸಿರುವ ರೇವತಿ ತಂಗವೇಲು ಅವರು ಇದೀಗ ಉಸ್ಮಾನಿಯಾ ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭದಲ್ಲಿ ಪಿಎಚ್‌ಡಿ ಪದವಿ ಪಡೆದರು.

ಇದನ್ನೂ ಓದಿ: ನಮ್ಮ ಮೆಟ್ರೋ ಹೆಸರು ಬದಲಾವಣೆ: ಜಾಲತಾಣದಲ್ಲಿ ಪರ ವಿರೋಧ ಚರ್ಚೆ ಜೋರು, ಬೆಂಗಳೂರಿಗರಿಗೆ ಭಾವನಾತ್ಮಕ ವಿಷಯ ಎಂದ ನೆಟ್ಟಿಗರು

ಉಸ್ಮಾನಿಯಾ ವಿಶ್ವವಿದ್ಯಾಲಯದ 83ನೇ ಘಟಿಕೋತ್ಸವ ಮಂಗಳವಾರ ಹೈದರಾಬಾದಿನ ಟ್ಯಾಗೋರ್ ಕಲಾಕ್ಷೇತ್ರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ, 93 ವರ್ಷದ ಅಜ್ಜಿ ತಮ್ಮ ಪಿಎಚ್‌ಡಿ ಪದವಿಯನ್ನು ಪಡೆದರು ಮತ್ತು ಅನೇಕ ಜನರಿಗೆ ಸ್ಫೂರ್ತಿಯಾದರು. ಓದು, ಕಲಿಕೆಗೆ ವಯಸ್ಸು ಅಡ್ಡಿಯಾಗುವುದಿಲ್ಲ ಎನ್ನುವುದಕ್ಕೆ ರೇವತಿ ತಂಗವೇಲು ಅವರ ಸ್ಪೂರ್ತಿದಾಯಕ ಪಯಣವೇ ಸಾಕ್ಷಿ. ಪ್ರಸ್ತುತ, ಅವರು ಕೀಸ್ ಎಜುಕೇಷನಲ್ ಸೊಸೈಟಿ, ಸಿಕಂದರಾಬಾದ್‌ನಲ್ಲಿ ಪ್ರಮುಖ ಹುದ್ದೆಗಳನ್ನು ನಿಭಾಯಿಸುತ್ತಿದ್ದಾರೆ.

ಕಾರ್ಯಕ್ರಮದ ವಿಶೇಷ ಅತಿಥಿಯಾಗಿದ್ದ ಶಾಂತನು ನಾರಾಯಣ ಅವರಿಗೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಉಸ್ಮಾನಿಯಾ ವಿಶ್ವವಿದ್ಯಾಲಯದ ಇತಿಹಾಸದಲ್ಲಿ ಇದುವರೆಗೆ 1,024 ಮಂದಿ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಓಯು (Osmania University) ವ್ಯಾಪ್ತಿಯಲ್ಲಿ ತಮ್ಮ ವಿಭಾಗಗಳಲ್ಲಿ ಅತ್ಯುತ್ತಮ ಪ್ರತಿಭೆ ತೋರಿದ 58 ಮಂದಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!