Farm Laws Repeal ಮೂರು ಕೃಷಿ ಕಾಯ್ದೆ ರದ್ದುಗೊಳಿಸುವ ಮಸೂದೆಗೆ ಕೇಂದ್ರ ಸಂಪುಟ ಅಸ್ತು

ಕಳೆದ ವಾರ ಪ್ರಧಾನಿ  ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದು ಪ್ರತಿಭಟನಾನಿರತ ರೈತರನ್ನು ತಮ್ಮ ಮನೆಗಳಿಗೆ ಮರಳುವಂತೆ ಒತ್ತಾಯಿಸಿದರು.

Farm Laws Repeal ಮೂರು ಕೃಷಿ ಕಾಯ್ದೆ ರದ್ದುಗೊಳಿಸುವ ಮಸೂದೆಗೆ ಕೇಂದ್ರ ಸಂಪುಟ ಅಸ್ತು
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Nov 24, 2021 | 1:42 PM

ದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು(farm laws) ಹಿಂಪಡೆಯುವ ಮಸೂದೆಯನ್ನು ನರೇಂದ್ರ ಮೋದಿ(Narendra Modi) ಸಂಪುಟ ಅಂಗೀಕರಿಸಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ವಾರ ಪ್ರಧಾನಿ  ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದು ಪ್ರತಿಭಟನಾನಿರತ ರೈತರನ್ನು ತಮ್ಮ ಮನೆಗಳಿಗೆ ಮರಳುವಂತೆ ಒತ್ತಾಯಿಸಿದರು. ಸುಮಾರು ಒಂದು ವರ್ಷದಿಂದ ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸತ್ತಿನಲ್ಲಿ ಕಾನೂನುಗಳನ್ನು ಔಪಚಾರಿಕವಾಗಿ ರದ್ದುಪಡಿಸುವವರೆಗೂ ಅವರು ಪ್ರತಿಭಟನಾ ಸ್ಥಳಗಳನ್ನು ಖಾಲಿ ಮಾಡುವುದಿಲ್ಲ ಎಂದು ಅವರು ಪಟ್ಟುಹಿಡಿದಿದ್ದಾರೆ. ಕೃಷಿ ಕಾನೂನುಗಳ ರದ್ದತಿ ಮಸೂದೆ, 2021 ಜತೆ 26 ಹೊಸ ಮಸೂದೆಗಳನ್ನು ಅನುಮೋದಿಸಲಾಗಿದೆ. ಸರ್ಕಾರವು ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನೆ ಮತ್ತು ಸೌಲಭ್ಯ) ಕಾಯಿದೆ, 2020, ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಒಪ್ಪಂದ, ಕೃಷಿ ಸೇವೆಗಳ ಕಾಯಿದೆ 2020ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯಿದೆ, 2020 ಅನ್ನು ರದ್ದುಗೊಳಿಸಿದೆ. ಈ 27 ಹೊಸ ಮಸೂದೆಗಳನ್ನು ಈಗ ನವೆಂಬರ್ 29 ರಿಂದ ಪ್ರಾರಂಭವಾಗುವ ಸಂಸತ್ತಿನ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಪರಿಚಯಿಸಲಾಗುವುದು.

“ಈ ತಿಂಗಳ ಕೊನೆಗೆ ಪ್ರಾರಂಭವಾಗುವ ಸಂಸತ್ತಿನ ಅಧಿವೇಶನದಲ್ಲಿ, ನಾವು ಮೂರು ಕಾನೂನುಗಳನ್ನು ರದ್ದುಗೊಳಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ” ಎಂದು ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದರು. “ನಾನೇನು ಮಾಡಿದ್ದೇನೆ ಅದು ರೈತರಿಗಾಗಿ, ನಾನು ಮಾಡುತ್ತಿರುವುದು ದೇಶಕ್ಕಾಗಿ ಎಂದು ಅವರು ಹೇಳಿದ್ದರು.

ಸುಮಾರು ಒಂದು ವರ್ಷದಿಂದ ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನವೆಂಬರ್ 29 ರಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕಾನೂನುಗಳನ್ನು ಔಪಚಾರಿಕವಾಗಿ  ರದ್ದುಗೊಳಿಸುವವರೆಗೆ ಪ್ರತಿಭಟನಾಕಾರರು ಕಾಯುತ್ತಾರೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಮೂರು ಕೃಷಿ ಮಸೂದೆಗಳು ಯಾವುವು?  1. ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ, 2020- Farmers’ Produce Trade and Commerce (Promotion and Facilitation) Act, 2020 2. ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಖಾತ್ರಿ ಮತ್ತು ಕೃಷಿ ಸೇವೆಗಳ ಒಪ್ಪಂದ ಮಸೂದೆ, 2020 -Farmers (Empowerment and Protection) Agreement on Price Assurance and Farm Services Act, 2020 3. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ, 2020 – Essential Commodities (Amendment) Act, 2020

ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ 2020

ಹೊಸ ಕಾಯ್ದೆಯು ರೈತರು ಮತ್ತು ವ್ಯಾಪಾರಿಗಳಿಗೆ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಖರೀದಿಯ ಸ್ವಾತಂತ್ರ್ಯವನ್ನು ನೀಡುವ ವ್ಯವಸ್ಥೆಯನ್ನು ಸೃಷ್ಟಿಸುತ್ತದೆ. ಈ ಕಾಯ್ದೆಯು ರಾಜ್ಯ ಕೃಷಿ ಉತ್ಪಾದನಾ ಮಾರುಕಟ್ಟೆ ಕಾಯ್ದೆಗಳ (APMC) ಅಡಿಯಲ್ಲಿ ಅಧಿಸೂಚಿಸಲ್ಪಟ್ಟ ಮಾರುಕಟ್ಟೆಗಳ ಭೌತಿಕ ಆವರಣದ ಹೊರಗೆ ಜಿಲ್ಲೆ ಮತ್ತು ರಾಜ್ಯಗಳ ನಿರ್ಬಂಧವಿಲ್ಲದ ವ್ಯಾಪಾರ ಮತ್ತು ವಾಣಿಜ್ಯವನ್ನು ಉತ್ತೇಜಿಸುತ್ತದೆ.

ರೈತರಿಗೆ ತಮ್ಮ ವಾಣಿಜ್ಯ ವಲಯಗಳಿಂದ ಹೊರಗೆ ಅಂದರೆ ಫಾರ್ಮ್‌ಗೇಟ್, ಕೋಲ್ಡ್ ಸ್ಟೋರೇಜ್, ಗೋದಾಮು, ಸಂಸ್ಕರಣಾ ಘಟಕಗಳಲ್ಲಿ ವ್ಯಾಪಾರ ಮಾಡುವ ಸ್ವಾತಂತ್ರ್ಯ ದೊರೆಯುತ್ತದೆ. ಈ ಹಿಂದೆ ಎಪಿಎಂಸಿ ಯಾರ್ಡ್ ಅಥವಾ ಮಂಡಿಗಳಲ್ಲಿ ಮಾತ್ರ ರೈತರಿಗೆ ಮಾರಾಟ ಮಾಡಲು ಸಾಧ್ಯವಾಗುತ್ತಿತ್ತು. ಪರ್ಯಾಯ ವಾಣಿಜ್ಯ ಮಾರ್ಗದ ಮೂಲಕ ರೈತರಿಗೆ ಇದು ಲಾಭದಾಯಕ ಬೆಲೆಯನ್ನು ಒದಗಿಸುತ್ತದೆ. ಅಂದರೆ ಅಂತರ ರಾಜ್ಯ ಮತ್ತು ಅಂತರ್ ರಾಜ್ಯ ಕೃಷಿ ಉತ್ಪನ್ನಗಳ ಮಾರಾಟವನ್ನು ಇದು ಉತ್ತೇಜಿಸುತ್ತದೆ.

ನಿಗದಿತ ವ್ಯಾಪಾರ ಪ್ರದೇಶದಲ್ಲಿ ನಿಗದಿತ ರೈತರ ಉತ್ಪನ್ನಗಳ ಎಲೆಕ್ಟ್ರಾನಿಕ್ ವ್ಯಾಪಾರವನ್ನು (ಯಾವುದೇ ರಾಜ್ಯ ಎಪಿಎಂಸಿ ಕಾಯ್ದೆಯಡಿ ನಿಯಂತ್ರಿಸಲಾಗುವ ಕೃಷಿ ಉತ್ಪನ್ನಗಳನ್ನು) ಇದು ಅನುಮತಿಸುತ್ತದೆ. ಎಲೆಕ್ಟ್ರಾನಿಕ್ ಸಾಧನಗಳು ಮತ್ತು ಅಂತರ್ಜಾಲದ ಮೂಲಕ ಕೃಷಿ ಉತ್ಪನ್ನಗಳನ್ನು ನೇರ ಮತ್ತು ಆನ್‌ಲೈನ್ ಖರೀದಿಸಲು ಮತ್ತು ಮಾರಾಟ ಮಾಡಲು ಸಹ ಇದು ಅನುಕೂಲವಾಗಲಿದೆ. ಈ ಕಾಯ್ದೆ ಪ್ರಕಾರ ರೈತರು, ವ್ಯಾಪಾರಿಗಳು ಮತ್ತು ಎಲೆಕ್ಟ್ರಾನಿಕ್ ವ್ಯಾಪಾರ ವೇದಿಕೆಗಳಿಗೆ ರಾಜ್ಯ ಸರ್ಕಾರಗಳು ಯಾವುದೇ ಮಾರುಕಟ್ಟೆ ಶುಲ್ಕ ಅಥವಾ ಸೆಸ್ ವಿಧಿಸುವಂತಿಲ್ಲ.

ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಒಪ್ಪಂದ ಮಸೂದೆ, 2020

ಯಾವುದೇ ಜಮೀನಿನ ಉತ್ಪಾದನೆ ಅಥವಾ ಪಾಲನೆಯ ಮೊದಲು ರೈತ ಮತ್ತು ಖರೀದಿದಾರರ ನಡುವಿನ ಒಪ್ಪಂದದ ಮೂಲಕ ಗುತ್ತಿಗೆ ಕೃಷಿಗೆ ಇದು ರಾಷ್ಟ್ರೀಯ ಚೌಕಟ್ಟನ್ನು ನೀಡುತ್ತದೆ.

ಈ ಕಾಯ್ದೆಯಲ್ಲಿ ಬಳಕೆಯಾಗಿರುವ ಪಾರಿಭಾಷಿಕ ಪದಗಳ ಅರ್ಥವಿವರಣೆ ಇದು..

1) ಕೃಷಿ ಒಪ್ಪಂದ: ಈ ಕಾಯ್ದೆ ಯಾವುದೇ ಉತ್ಪನ್ನವನ್ನು ರೈತ ಉತ್ಪಾದನೆ ಮಾಡುವ ಮುನ್ನ ಅಥವಾ ಬೆಳೆಯುವ ಮುನ್ನ ರೈತರು ಮತ್ತು ವ್ಯಾಪಾರಿಗಳ ನಡುವಿನ ಒಪ್ಪಂದಕ್ಕೆ ಅನುಮತಿ ನೀಡುತ್ತದೆ. 2) ಕೃಷಿ ಒಪ್ಪಂದದ ಕನಿಷ್ಠ ಅವಧಿ: ಕೃಷಿ ಒಪ್ಪಂದದ ಕನಿಷ್ಠ ಕಾಲಾವಧಿಯು ಒಂದು ಬೆಳೆ ಬೆಳೆಯುವ ಅವಧಿ ಅಥವಾ ಉತ್ಪಾದನೆಯ ಕಾಲಾವಧಿಯಾಗಿದೆ. 3) ಕೃಷಿ ಉತ್ಪನ್ನದ ಬೆಲೆ: ಕೃಷಿ ಉತ್ಪನ್ನಗಳ ಬೆಲೆ ಮತ್ತು ಬೆಲೆ ನಿರ್ಧರಿಸುವ ಪ್ರಕ್ರಿಯೆಯನ್ನು ಒಪ್ಪಂದದಲ್ಲಿ ನಮೂದಿಸಬೇಕು. ಉತ್ಪನ್ನಗಳಿಗೆ ಖಾತರಿಪಡಿಸಿದ ಬೆಲೆ ಮತ್ತು ಖಾತರಿಪಡಿಸಿದ ಬೆಲೆಗಿಂತ ಹೆಚ್ಚಿನ ಮೊತ್ತದ ಸ್ಪಷ್ಟ ಉಲ್ಲೇಖವನ್ನು ಒಪ್ಪಂದದಲ್ಲಿ ನಿರ್ದಿಷ್ಟಪಡಿಸಬೇಕು. 4) ವಿವಾದದ ಇತ್ಯರ್ಥ: ಈ ಕಾಯ್ದೆಯು ಮೂರು ಹಂತದ ವಿವಾದ ಇತ್ಯರ್ಥ ವ್ಯವಸ್ಥೆಯನ್ನು ಒದಗಿಸುತ್ತದೆ – ಸಂಧಾನ ಮಂಡಳಿ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಮತ್ತು ಮೇಲ್ಮನವಿ ಪ್ರಾಧಿಕಾರ.

ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ, 2020

ಕೆಲವು ಸರಕುಗಳು ಅಥವಾ ಉತ್ಪನ್ನಗಳ ವಿತರಣೆಯನ್ನು ಖಚಿತಪಡಿಸಿಕೊಳ್ಳಲು 1955ರಲ್ಲಿ ಸಂಸತ್ತು ಈ ಕಾಯ್ದೆಯನ್ನು ಜಾರಿ ಮಾಡಿತ್ತು. ಉತ್ಪನ್ನಗಳ ವಿತರಣೆಗೆ ಅಕ್ರಮ ದಾಸ್ತಾನು ಅಥವಾ ಬ್ಲಾಕ್​ ಮಾರ್ಕೆಟ್​ನಿಂದ ಅಡಚಣೆಯಾದರೆ ಅದು ಜನರ ಸಾಮಾನ್ಯ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಆಹಾರ ಪದಾರ್ಥಗಳು, ಔಷಧಗಳು, ಇಂಧನ (ಪೆಟ್ರೋಲಿಯಂ ಉತ್ಪನ್ನಗಳು) ಸೇರಿದಂತೆ ಕೆಲ ಜೀವನಾವಶ್ಯಕ ವಸ್ತುಗಳು ಈ ಕಾಯ್ದೆಯ ವ್ಯಾಪ್ತಿಗೆ ಬರುತ್ತವೆ.

ಈ ಕಾಯ್ದೆಯಡಿ ಕೇಂದ್ರ ಸರ್ಕಾರವು ಅತ್ಯವಶ್ಯಕ ವಸ್ತುಗಳೆಂದು ಪರಿಗಣಿಸಿದ ಉತ್ಪನ್ನಗಳ ಉತ್ಪಾದನೆ, ಸರಬರಾಜು ಮತ್ತು ವಿತರಣೆಯನ್ನು ನಿಯಂತ್ರಿಸುವ ಮೂಲಕ ಗ್ರಾಹಕರಿಗೆ ಯೋಗ್ಯ ಬೆಲೆಯಲ್ಲಿ ಲಭ್ಯವಾಗುವಂತೆ ಮಾಡುತ್ತದೆ. ಅತ್ಯವಶ್ಯಕ ಉತ್ಪನ್ನ ಎಂದು ಪರಿಗಣಿಸಿರುವ ಪ್ಯಾಕೇಜ್ಡ್ ಉತ್ಪನ್ನಕ್ಕೆ ಸರ್ಕಾರ ಎಂಆರ್​ಪಿ ನಿಗದಿಪಡಿಸಬಹುದಾಗಿದೆ. ಯಾವುದೇ ಉತ್ಪನ್ನಗಳಿಗೆ ಅವಶ್ಯಕತೆ ಹೆಚ್ಚಾದಾಗ ಅವುಗಳನ್ನು ಅವಶ್ಯಕ ಉತ್ಪನ್ನಗಳ ಪಟ್ಟಿಗೆ ಸೇರಿಸಬಹುದು. ಅವಶ್ಯಕತೆ ಕಡಿಮೆಯಾದಾಗ ಅದನ್ನು ಪಟ್ಟಿಯಿಂದ ತೆಗೆಯಬಹುದು. ಯಾವುದಾದರೊಂದು ಸರಕುಗಳ ಕೊರತೆ ಕಂಡು ಬಂದು ಅದರ ಬೆಲೆ ಏರಿಕೆಯಾಗುತ್ತಿದ್ದರೆ ಸರ್ಕಾರವು ನಿರ್ದಿಷ್ಟ ಅವಧಿವರೆಗೆ ಆ ಸರಕುಗಳ ಮೇಲೆ ಸಂಗ್ರಹ ಮಿತಿ ಹೇರಬಹುದಾಗಿದೆ.

ಕೇಂದ್ರ ಸರ್ಕಾರದ ನಿಬಂಧನೆಗಳ ಹೇರಿಕೆ ಬೇಕೋ ಬೇಡವೋ ಎಂಬುದನ್ನು ನಿರ್ಧರಿಸುವ ಸ್ವಾತಂತ್ರ್ಯ ರಾಜ್ಯ ಸರ್ಕಾರಗಳಿಗೆ ಇರುತ್ತದೆ. ಒಂದು ವೇಳೆ ಈ ನಿರ್ಬಂಧಗಳನ್ನು ಹೇರಿದರೆ, ವ್ಯಾಪಾರಿಗಳು ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಸರಕು ಸಂಗ್ರಹ ಮಾಡಿಟ್ಟಿದ್ದರೆ ತಕ್ಷಣವೇ ಅದನ್ನು ಮಾರುಕಟ್ಟೆಗೆ ಮಾರಲೇಬೇಕಾದ ಒತ್ತಡವನ್ನು ಸರ್ಕಾರ ಹೇರುತ್ತದೆ. ಹೀಗೆ ಮಾಡುವ ಮೂಲಕ ಸರಕುಗಳ ಪೂರೈಕೆ ಹೆಚ್ಚಿಸಿ ಬೆಲೆಯನ್ನು ಕಡಿಮೆ ಮಾಡಬಹುದು.

ಯುದ್ಧ, ಬರಗಾಲ, ಹೆಚ್ಚಿನ ಬೆಲೆ ಏರಿಕೆ ಅಥವಾ ನೈಸರ್ಗಿಕ ವಿಕೋಪಗಳ ಹೊತ್ತಿನಲ್ಲಿ ಮಾತ್ರ ಕೇಂದ್ರ ಸರ್ಕಾರ ಪಟ್ಟಿಯಲ್ಲಿರುವ ನಿರ್ದಿಷ್ಟ ಸರಕುಗಳನ್ನು ಪೂರೈಕೆ ಮತ್ತು ಬೆಲೆಯನ್ನು ನಿಯಂತ್ರಿಸುತ್ತದೆ. ಆಹಾರ ಪದಾರ್ಥಗಳು, ಕಾಳು, ಧಾನ್ಯಗಳು, ಆಲೂಗೆಡ್ಡೆ, ಈರುಳ್ಳಿ, ಎಣ್ಣೆ ಬೀಜಗಳು ಮತ್ತು ಎಣ್ಣೆ ಇವು ನಿಯಂತ್ರಣಕ್ಕೊಳಪಡುವುದಿಲ್ಲ.

ತಿದ್ದುಪಡಿಯ ಪ್ರಕಾರ ಯಾವುದೇ ಕೃಷಿ ಉತ್ಪನ್ನದ ಸಂಗ್ರಹ ಮಿತಿ ಮೇಲಿನ ನಿರ್ಬಂಧವು ಆ ಉತ್ಪನ್ನದ ಬೆಲೆ ಏರಿಕೆಯನ್ನು ಆಧರಿಸಿರುತ್ತದೆ. ತೋಟಗಾರಿಕೆ ಕೃಷಿ ಉತ್ಪನ್ನಗಳ ಚಿಲ್ಲರೆ ಮಾರಾಟ ಬೆಲೆಯಲ್ಲಿ ಶೇ.100 ಏರಿಕೆಯಾದರೆ ಮತ್ತು ಕೊಳೆಯದ ಆಹಾರ ವಸ್ತುಗಳ ಚಿಲ್ಲರೆ ಮಾರುಕಟ್ಟೆ ಬೆಲೆಯು ಶೇ. 50 ಏರಿಕೆ ಆದರೆ ಮಾತ್ರ ಈ ನಿರ್ಬಂಧಗಳನ್ನು ವಿಧಿಸಲಾಗುತ್ತದೆ. 12 ತಿಂಗಳಿನಿಂದ ಚಾಲ್ತಿಯಲ್ಲಿರುವ ಬೆಲೆ ಅಥವಾ ಕಳೆದ ಐದು ವರ್ಷಗಳಲ್ಲಿನ ಚಿಲ್ಲರೆ ಮಾರುಕಟ್ಟೆ ಬೆೆಲೆಯ ಸರಾಸರಿಯಲ್ಲಿ ಯಾವುದು ಕಡಿಮೆ ಇರುತ್ತದೋ ಅದನ್ನು ಆಧರಿಸಿ ಬೆಲೆ ಏರಿಕೆಯನ್ನು ಲೆಕ್ಕಹಾಕಲಾಗುತ್ತದೆ.

ದೇಶದಲ್ಲಿ ಸಾರ್ವಜನಿಕ ವಿತರಣೆಗಾಗಿ ಸಂಗ್ರಹಿಸಿರುವ ಆಹಾರ ಉತ್ಪನ್ನಗಳಿಗೆ ಈ ನಿರ್ಬಂಧಗಳು ಅನ್ವಯಿಸುವುದಿಲ್ಲ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ ಮಸೂದೆಯನ್ನು ಚಳಿಗಾಲದ ಅಧಿವೇಶನದ ಕಾರ್ಯಸೂಚಿಯಲ್ಲಿ ಸೇರಿಸಿದ ಕೇಂದ್ರ ಸರ್ಕಾರ

ಇದನ್ನೂ ಓದಿ: Farmers Laws ಕೃಷಿ ಮಸೂದೆ 2020: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳ ಸಾಧಕ ಬಾಧಕಗಳೇನು?

Published On - 1:14 pm, Wed, 24 November 21

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್