ಜಮ್ಮು ಮತ್ತು ಕಾಶ್ಮೀರದ ಪೂಂಛ್ನ ದೇವಸ್ಥಾನದ ಬಳಿಯ ಬಸ್ ನಿಲ್ದಾಣದಲ್ಲಿ ಸ್ಫೋಟ
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸ್ಫೋಟ ಸಂಭವಿಸಿದೆ. ಪೂಂಛ್ ದೇವಸ್ಥಾನವೊಂದರ ಸಮೀಪ ಸುರನ್‌ಕೋಟೆ ಬಸ್ ನಿಲ್ದಾಣದ ಬಳಿ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಸ್ಫೋಟದ ನಂತರ, ಬಸ್ ನಿಲ್ದಾಣದ ಸಮೀಪವಿರುವ ದೇವಾಲಯದ ಗೋಡೆಗಳ ಮೇಲೆ ಚೂರುಗಳು ಕಂಡುಬಂದಿವೆ.

ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸ್ಫೋಟ ಸಂಭವಿಸಿದೆ. ಪೂಂಛ್ನ ದೇವಸ್ಥಾನವೊಂದರ ಸಮೀಪ ಸುರನ್‌ಕೋಟೆ ಬಸ್ ನಿಲ್ದಾಣದ ಬಳಿ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಸ್ಫೋಟದ ನಂತರ, ಬಸ್ ನಿಲ್ದಾಣದ ಸಮೀಪವಿರುವ ದೇವಾಲಯದ ಗೋಡೆಗಳ ಮೇಲೆ ಚೂರುಗಳು ಕಂಡುಬಂದಿವೆ.
ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಫೋರೆನ್ಸಿಕ್ ತಂಡವನ್ನು ಕರೆಸಲಾಗಿದೆ ಮತ್ತು ಸ್ಫೋಟದ ಸ್ಥಳದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ.
ನಾವು ಸ್ಫೋಟದ ಶಬ್ದವನ್ನು ಕೇಳಿದ್ದೇವೆ ಮತ್ತು ತಕ್ಷಣ ಸ್ಥಳ ತಲುಪಿದ್ದೆವು, ಭದ್ರತಾ ಪಡೆಗಳು ಕೂಡ ತಕ್ಷಣವೇ ಸ್ಥಳಕ್ಕೆ ಬಂದವು ಎಂದು ಸ್ಥಳೀಯ ನಿವಾಸಿ ಸಂಜಯ್ ಕುಮಾರ್ ಅವರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಮತ್ತಷ್ಟು ಓದಿ: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನೆಲಬಾಂಬ್ ಸ್ಫೋಟ, ಯೋಧರಿಗೆ ಗಾಯ
ಸ್ಫೋಟದ ಹಿಂದೆ ಯಾರ ಕೈವಾಡವಿದೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ, ಇದು ಬಹುಶಃ ಗ್ರೆನೇಡ್ ದಾಳಿಯಾಗಿರಬಹುದು ಎಂದು ಮೂಲಗಳು ತಿಳಿಸಿವೆ. ಭದ್ರತಾ ಏಜೆನ್ಸಿಗಳು ತನಿಖೆ ಆರಂಭಿಸಿವೆ.
ಸ್ಫೋಟ ಸಂಭವಿಸಿದ ಪ್ರದೇಶದ ಸಲೈನ್ ಗ್ರಾಮದಲ್ಲಿ ಮೂವರನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಪಿಸ್ತೂಲ್‌ಗಳು, ನಾಲ್ಕು ಮ್ಯಾಗಜೀನ್‌ಗಳು, ಆರು ಮೊಬೈಲ್ ಫೋನ್‌ಗಳು ಮತ್ತು 2.5 ಲಕ್ಷ ರೂಪಾಯಿ ಮೌಲ್ಯದ ನಗದು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡು ಮೂವರನ್ನೂ ವಿಚಾರಣೆ ನಡೆಸಲಾಗುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:36 am, Thu, 16 November 23