ವಿಐಪಿ ಸಂಸ್ಕೃತಿಗೆ ಅಂತ್ಯ ಹಾಡಿದ ರಾಜಸ್ಥಾನ ಸಿಎಂ ಭಜನ್​ ಲಾಲ್ ಶರ್ಮಾ

ಇನ್ನುಮುಂದೆ ರಾಜಸ್ಥಾನ ಮುಖ್ಯಮಂತ್ರಿ ಭಜನ್​ಲಾಲ್ ಶರ್ಮಾ ಸಾಮಾನ್ಯರಂತೆಯೇ ಸಂಚರಿಸಲಿದ್ದಾರೆ. ವಿಐಪಿ ಸಂಸ್ಕೃತಿಯನ್ನು ಬದಿಗಿಟ್ಟು ಸಾಮಾನ್ಯ ಜನರ ನಡುವೆ ಸಾಮಾನ್ಯ ಜನರಂತೆಯೇ ಇರಲು ನಿರ್ಧಾರ ಮಾಡಿದ್ದಾರೆ. ಇನ್ನುಮುಂದೆ ಅವರ ಬೆಂಗಾವಲು ವಾಹನವಾಗಲಿ ಅವರ ವಾಹನವಾಗಲಿ ಸಿಗ್ನಲ್​ನಲ್ಲಿ ನಿಲ್ಲಲಿದೆ.

ವಿಐಪಿ ಸಂಸ್ಕೃತಿಗೆ ಅಂತ್ಯ ಹಾಡಿದ ರಾಜಸ್ಥಾನ ಸಿಎಂ ಭಜನ್​ ಲಾಲ್ ಶರ್ಮಾ
ಭಜನ್​ಲಾಲ್ ಶರ್ಮಾImage Credit source: India Today
Follow us
ನಯನಾ ರಾಜೀವ್
|

Updated on:Feb 22, 2024 | 8:38 AM

ರಾಜಸ್ಥಾನ ಮುಖ್ಯಮಂತ್ರಿ ಭಜನ್​ ಲಾಲ್ ಶರ್ಮಾ(Bhajan Lal Sharma) ವಿಐಪಿ ಸಂಸ್ಕೃತಿ(VIP Culture)ಗೆ ಅಂತ್ಯ ಹಾಡಿದ್ದಾರೆ. ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿರುವ ಭಜನ್​ಲಾಲ್ ಇನ್ನುಮುಂದೆ ರಸ್ತೆಯಲ್ಲಿ ಸಾಮಾನ್ಯ ಜನರಂತೆ ಸಂಚರಿಸಲಿದ್ದಾರೆ. ಸಿಗ್ನಲ್​ಗಳಲ್ಲಿ ಅವರ ವಾಹನ ಹಾಗೂ ಬೆಂಗಾವಲು ವಾಹನಗಳು ಎಲ್ಲಾ ವಾಹನಗಳು ನಿಲ್ಲುವಂತೆಯೇ ನಿಲ್ಲಲಿದೆ. ಅವರಿಗಾಗಿ ಪ್ರತ್ಯೇಕ ಸಾಲು ಮಾಡಿ ಓಡಾಡುವ ಸಂಸ್ಕೃತಿಯಿಂದ ಹೊರಬಂದಿದ್ದಾರೆ. ಈ ನಿರ್ಧಾರವು ರಾಜಸ್ಥಾನ ಜನತೆಗೆ ಖುಷಿ ತಂದಿದೆ.

ಮುಖ್ಯಮಂತ್ರಿಗಳ ವಾಹನಗಳು ಬಂತೆಂದರೆ ತುರ್ತು ಅಗತ್ಯವಿದ್ದವರು ಕೂಡ ಸಿಗ್ನಲ್​ನಲ್ಲಿ ನಿಲ್ಲಬೇಕಿತ್ತು, ಹೀಗಾಗಿ ಜನರು ತುಂಬಾ ತೊಂದರೆ ಅನುಭವಿಸುತ್ತಿದ್ದರು. ಇನ್ನುಮುಂದೆ ಈ ಕಿರಿಕಿರಿ ಇರುವುದಿಲ್ಲ. ಭಜನ್​ಲಾಲ್ ಶರ್ಮಾ ಅವರು ಸಹೃದಯತೆ ಹಾಗೂ ಸೂಕ್ಷ್ಮತೆಯಿಂದ ಈ ವಿಚಾರವನ್ನು ಗಮನಿಸಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ.

ಭಜನ್​ ಲಾಲ್ ಶರ್ಮಾ 4 ಬಾರಿ ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದರು.ಆರ್​ಎಸ್​ಎಸ್​ ಹಾಗೂ ಎಬಿವಿಪಿ ಜತೆ ಸಂಬಂಧ ಹೊಂದಿದ್ದರು. ಶಾಸಕ ಅಶೋಕ್ ಲಾಹೋಟಿ ಅವರ ಟಿಕೆಟ್ ಕಡಿತಗೊಳಿಸಿ ಭಜನ್​ಲಾಲ್​ ಶರ್ಮಾ ಅವರನ್ನು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಮಾಡಲಾಗಿತ್ತು.

ಮತ್ತಷ್ಟು ಓದಿ: ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾಗೆ 8 ಖಾತೆ; ದಿಯಾ ಕುಮಾರಿ ಹಣಕಾಸು ಸಚಿವೆ

ವಿಧಾನಸಭೆ ಚುನಾವಣೆಯಲ್ಲಿ ಭಜರ್ರಿ ಗೆಲುವು ಸಾಧಿಸಿದ ನಂತರವೂ ಸಿಎಂ ಸ್ಥಾನಕ್ಕೆ ವಸುಂಧರಾ ರಾಜೇ ಹೆಸರೇ ಮುಂಚೂಣಿಯಲ್ಲಿತ್ತು. ಆದರೆ ಪಕ್ಷದ ಹೈಕಮಾಂಡ್ ಭಜನ್​ಲಾಲ್ ಶರ್ಮಾ ಅವರ ಹೆಸರನ್ನು ಅಂತಿಮಗೊಳಿಸಿತ್ತು. ಆಗ ಎಲ್ಲರಿಗೂ ಆಶ್ಚರ್ಯವಾಗಿತ್ತು. ಮುಖ್ಯಮಂತ್ರಿ ಅವರು ಬುಧವಾರ ಪೊಲೀಸ್ ಮಹಾನಿರ್ದೇಶಕ ಯುಆರ್ ಸಾಹೂ ಅವರಿಗೆ ನಿರ್ಧಾರದ ಕುರಿತು ಸೂಚನೆಗಳನ್ನು ನೀಡಿದರು.

ಮುಖ್ಯಮಂತ್ರಿಗಳಿಗೆ ಒದಗಿಸಲಾದ ಭದ್ರತೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ವಿಐಪಿ ಸಂಚಾರ ವ್ಯವಸ್ಥೆಗೆ ಸಂಬಂಧಿಸಿದಂತೆ ಸಾಮಾನ್ಯ ಜನರು ಮತ್ತು ರೋಗಿಗಳು ಎದುರಿಸುತ್ತಿರುವ ಟ್ರಾಫಿಕ್ ಸಮಸ್ಯೆಗಳನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಡಿಜಿಪಿ ಸಾಹೂ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:38 am, Thu, 22 February 24

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ