ನಮಾಜ್‌ಗಾಗಿ ಬಸ್ ನಿಲ್ಲಿಸಿದ್ದಕ್ಕೆ ಕೆಲಸದಿಂದ ವಜಾಗೊಂಡಿದ್ದ ಉತ್ತರ ಪ್ರದೇಶದ ಕಂಡಕ್ಟರ್ ಆತ್ಮಹತ್ಯೆ

ಉತ್ತರ ಪ್ರದೇಶ ಸಾರಿಗೆ ಇಲಾಖೆ ತನ್ನ ಪತಿ ಹೇಳುತ್ತಿರುವುದನ್ನು ಕೇಳದೆಯೇ ಅವರನ್ನು ಕೆಲಸದಿಂದ ವಜಾ ಮಾಡಿತ್ತು ಎಂದು ಮೋಹಿತ್ ಯಾದವ್ ಪತ್ನಿ ರಿಂಕಿ ಯಾದವ್ ಆರೋಪಿಸಿದ್ದಾರೆ. ಆಕೆಯ ಪತಿ ಬರೇಲಿಯಲ್ಲಿರುವ ಪ್ರಾದೇಶಿಕ ವ್ಯವಸ್ಥಾಪಕರನ್ನು ಆಗಾಗ್ಗೆ ಭೇಟಿ ಮಾಡುತ್ತಿದ್ದರು, ಆದರೆ ಅವರು  ನನ್ನ ಪತಿಯ ಮಾತನ್ನು ಕೇಳಲಿಲ್ಲ.

ನಮಾಜ್‌ಗಾಗಿ ಬಸ್ ನಿಲ್ಲಿಸಿದ್ದಕ್ಕೆ ಕೆಲಸದಿಂದ ವಜಾಗೊಂಡಿದ್ದ ಉತ್ತರ ಪ್ರದೇಶದ ಕಂಡಕ್ಟರ್ ಆತ್ಮಹತ್ಯೆ
ಉತ್ತರ ಪ್ರದೇಶದ ಬಸ್
Follow us
|

Updated on: Aug 30, 2023 | 8:55 PM

ದೆಹಲಿ ಆಗಸ್ಟ್ 30: ಒಂದೆರಡು ಪ್ರಯಾಣಿಕರಿಗೆ ನಮಾಜ್ ಮಾಡುವುದಕ್ಕಾಗಿ ಅವಕಾಶ ಮಾಡಿಕೊಡಲು ರಾಜ್ಯ ಸಾರಿಗೆ ಬಸ್ ಅನ್ನು ನಿಲ್ಲಿಸಿದ ನಂತರ ವಜಾಗೊಂಡ ಉತ್ತರ ಪ್ರದೇಶದ(Uttar Pradesh) ಬಸ್ ಕಂಡಕ್ಟರ್ (Bus Conductor) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನವೀಯತೆಗೆ ಅವರು ಬೆಲೆ ತೆರಬೇಕಾಯಿತು ಎಂದು ಕಂಡಕ್ಟರ್ ಕುಟುಂಬ ಕಣ್ಣೀರು ಹಾಕಿದೆ. ಮೋಹಿತ್ ಯಾದವ್ ಎಂಬ ಬಸ್ ಕಂಡೆಕ್ಟರ್ ಅವರು ಬರೇಲಿ-ದೆಹಲಿ ಜನರತ್ ಬಸ್ ಅನ್ನು ಹೆದ್ದಾರಿಯಲ್ಲಿ ನಿಲ್ಲಿಸಿದ ನಂತರ ಜೂನ್‌ನಲ್ಲಿ ಅವರ ಒಪ್ಪಂದವನ್ನು (ಗುತ್ತಿಗೆ ಕೆಲಸ) ರದ್ದುಗೊಳಿಸಲಾಯಿತು. ಸೋಮವಾರ, ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದ ಅವರು ಮೈನ್‌ಪುರಿಯಲ್ಲಿ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮೋಹಿತ್ ಯಾದವ್ ಹಿರಿಯರಾಗಿದ್ದು, ಎಂಟು ಮಂದಿ ಇರುವ ಅವರ ಕುಟುಂಬವು ಗುತ್ತಿಗೆ ಕೆಲಸಗಾರನಾಗಿ ಸಿಗುತ್ತಿದ್ದ ₹ 17,000 ಸಂಬಳದಲ್ಲಿ ಬದುಕು ಸಾಗಿಸುತ್ತಿತ್ತು. ಕೆಲಸದಿಂದ ವಜಾಗೊಂಡ ಬಳಿಕ ಹಲವೆಡೆ ಅರ್ಜಿ ಸಲ್ಲಿಸಿದ್ದರೂ ಅವರಿಗೆ ಕೆಲಸ ಸಿಕ್ಕಿರಲಿಲ್ಲ.

ಉತ್ತರ ಪ್ರದೇಶ ಸಾರಿಗೆ ಇಲಾಖೆ ತನ್ನ ಪತಿ ಹೇಳುತ್ತಿರುವುದನ್ನು ಕೇಳದೆಯೇ ಅವರನ್ನು ಕೆಲಸದಿಂದ ವಜಾ ಮಾಡಿತ್ತು ಎಂದು ಮೋಹಿತ್ ಯಾದವ್ ಪತ್ನಿ ರಿಂಕಿ ಯಾದವ್ ಆರೋಪಿಸಿದ್ದಾರೆ. ಆಕೆಯ ಪತಿ ಬರೇಲಿಯಲ್ಲಿರುವ ಪ್ರಾದೇಶಿಕ ವ್ಯವಸ್ಥಾಪಕರನ್ನು ಆಗಾಗ್ಗೆ ಭೇಟಿ ಮಾಡುತ್ತಿದ್ದರು, ಆದರೆ ಅವರು  ನನ್ನ ಪತಿಯ ಮಾತನ್ನು ಕೇಳಲಿಲ್ಲ.

ಅವರ ಮಾತನ್ನೂ ಕೇಳದೆ ಒಪ್ಪಂದವನ್ನು ರದ್ದುಗೊಳಿಸಲಾಗಿದೆ. ಈ ಖಿನ್ನತೆಗೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಪತಿ ಮಾನವೀಯತೆಗೆ ಬೆಲೆ ತೆತ್ತಿದ್ದಾರೆ ಎಂದು ಮಾಧ್ಯಮದವರಲ್ಲಿ ಮಾತನಾಡಿದ ರಿಂಕಿ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ ಹೆಣ್ಮಕ್ಕಳಿಗೆ ‘ಮುಖ್ಯಮಂತ್ರಿ ಕನ್ಯಾ ಸುಮಂಗಲಾ ಯೋಜನೆ’ ಮೂಲಕ ಭರ್ಜರಿ ಗಿಫ್ಟ್ ನೀಡಿದ ಸಿಎಂ ಯೋಗಿ ಆದಿತ್ಯನಾಥ್

ಮೋಹಿತ್ ಯಾದವ್ ಬಸ್ ನಿಲ್ಲಿಸುವ ಮೊದಲು ಪ್ರಯಾಣಿಕರೊಂದಿಗೆ ತರ್ಕಿಸುತ್ತಿರುವ ವಿಡಿಯೊ ಜೂನ್ ತಿಂಗಳಲ್ಲಿ ವೈರಲ್ ಆಗಿತ್ತು. ‘ನಾವೂ ಹಿಂದೂಗಳೇ… ಹಿಂದು-ಮುಸ್ಲಿಂ ಎಂಬ ಸಮಸ್ಯೆ ಇಲ್ಲ… ಎರಡು ನಿಮಿಷ ಬಸ್ ನಿಲ್ಲಿಸಿದರೆ ಏನಾಗುತ್ತದೆ ಎಂದು ಅವರು ಪ್ರಯಾಣಿಕರಿಗೆ ಹೇಳಿದ್ದರು.

ಪ್ರಯಾಣಿಕರೊಬ್ಬರು ಚಿತ್ರೀಕರಿಸಿದ ವಿಡಿಯೋ ವ್ಯಾಪಕವಾಗಿ ಪ್ರಸಾರವಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಮೋಹಿತ್ ಯಾದವ್ ಮತ್ತು ಬಸ್ ಚಾಲಕನನ್ನು ಯುಪಿ ಸಾರಿಗೆ ಇಲಾಖೆ ಯಾವುದೇ ಸೂಚನೆ ನೀಡದೆ ಅಮಾನತುಗೊಳಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ