AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಪುಣೆಯಲ್ಲಿ ಮತ್ತೊಂದು ಭಯಾನಕ ಘಟನೆ

ಪುಣೆಯಲ್ಲಿ ಮತ್ತೊಂದು ಭಯಾನಕ ಘಟನೆಯೊಂದು ನಡೆದಿದೆ. ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ವೇಗವಾಗಿ ಬಂದ ವ್ಯಾಗನ್-ಆರ್ ಕಾರು ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ 10 ಅಡಿ ಎತ್ತರಕ್ಕೆ ಹಾರಿ ಕೆಳಗೆ ಬಿದ್ದಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ.

Video: ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಪುಣೆಯಲ್ಲಿ ಮತ್ತೊಂದು ಭಯಾನಕ ಘಟನೆ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Jun 14, 2024 | 11:21 AM

Share

ಮಹಾರಾಷ್ಟ್ರ, ಜೂ.14: ಮಹಾರಾಷ್ಟ್ರದ ಪಿಂಪ್ರಿ ಚಿಂಚ್‌ವಾಡ್ ನಗರದಲ್ಲಿ ವೇಗವಾಗಿ ಬಂದ ವ್ಯಾಗನ್-ಆರ್ ಕಾರು ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಕಾರಿನ ಬೋನೆಟ್​​ ಮೇಲೆ ಬಿದ್ದಿದ್ದಾರೆ. ಇದೀಗ ಈ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕ ಹಾಗೂ ಕಾರನ್ನು ಪೊಲೀಸರು ವಶಪಡೆದಿದ್ದಾರೆ.

ಜೂನ್ 12ರಂದು ಮಧ್ಯಾಹ್ನ ಸ್ವರಾಜ್ ಚೌಕ್​​​ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಹಿಳೆಯನ್ನು ಡಿಕ್ಕಿ ಹೊಡೆದ ಕಾರಿನ ಚಾಲಕನೇ ಆಸ್ಪತ್ರೆ ಸಾಗಿಸಿದ್ದಾರೆ. ರಸ್ತೆಯಲ್ಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳಲ್ಲಿ ಮಹಿಳೆ ರಸ್ತೆ ದಾಟುತ್ತಿರುವಾಗ ಎಡ ಭಾಗದಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿರುವುದನ್ನು ಕಾಣಬಹುದು.

ಮಹಿಳೆಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ 10 ಅಡಿ ಎತ್ತರಕ್ಕೆ ಹಾರಿ ಕೆಳಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ. ತಕ್ಷಣ ದಾರಿಯಲ್ಲಿ ಹೋಗುತ್ತಿದ್ದ ದಾರಿಹೋಕರು ಮಹಿಳೆಯ ಸಹಾಯಕ್ಕೆ ಬಂದಿದ್ದಾರೆ. ಮಹಿಳೆಯನ್ನು 40 ವರ್ಷ ವಯಸ್ಸಿನ ರೇಖಾ ಜೋರಾಮ್ ಚೌಧರಿ ಎಂದು ಗುರುತಿಸಲಾಗಿದೆ. ಅಪಘಾತದ ನಂತರ, ಗಾಯಾಳು ಮಹಿಳೆಗೆ ಕಾರು ಚಾಲಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಆಕೆಗೆ ಸಣ್ಣಪುಟ್ಟ ಗಾಯಗಳು ಆಗಿವೆ ಎಂದು ಸ್ಥಳೀಯ ಪೊಲೀಸ್ ಹಿರಿಯ ಅಧಿಕಾರಿ ಶಿವಾಜಿ ಪವಾರ್ ಹೇಳಿದ್ದಾರೆ.

ಇದನ್ನೂ ಓದಿ: ಪತಿಯ ಹಣೆಗೆ ಬಂದೂಕಿಟ್ಟು, ನವವಿವಾಹಿತೆಯನ್ನು ಅಪಹರಿಸಿದ ದುಷ್ಕರ್ಮಿಗಳು

ಇದೀಗ ಆ ಮಹಿಳೆ ಆರೋಗ್ಯವಾಗಿದ್ದು, ಯಾವುದೇ ತೊಂದರೆ ಆಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಎಂಐಡಿಸಿ ಭೋಸರಿ ಪೊಲೀಸ್ ಠಾಣೆಯಲ್ಲಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಕಾರು ಓಡಿಸುತ್ತಿದ್ದ ವ್ಯಕ್ತಿ 24 ವರ್ಷ, ಹಾಗೂ ಆತ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿರಲಿಲ್ಲ ಎಂದು ಹೇಳಲಾಗಿದೆ. ಅದರೂ ಕ್ರಾಂಸಿಂಗ್​ನಲ್ಲಿ ಯಾಕೆ ಕಾರನ್ನು ನಿಧಾನ ಮಾಡಿಲ್ಲ ಎಂಬ ಬಗ್ಗೆ ಇನ್ನು ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಇನ್ನು ಎರಡು ದಿನಗಳ ಹಿಂದೆ ಹಿಂಜೆವಾಡಿ ಪ್ರದೇಶದಲ್ಲಿ ಇದೇ ರೀತಿಯ ಘಟನೆ ನಡೆದ ನಂತರ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:25 am, Fri, 14 June 24