ಒಂದು ರಾಷ್ಟ್ರ, ಒಂದು ಚುನಾವಣೆ ಸಾಧಕ-ಭಾದಕ ತಿಳಿಯಲು ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ರಚಿಸಿದ ಕೇಂದ್ರ

one nation, one election: ಒಂದು ರಾಷ್ಟ್ರ, ಒಂದು ಚುನಾವಣೆಯ ಸಾಧ್ಯತೆಯನ್ನು ಅಧ್ಯಯನ ಮಾಡಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ರಚಿಸಲಿದೆ. ದೆಹಲಿಯ ಜಿ 20 ಶೃಂಗಸಭೆಯ ನಂತರ ವಿಶೇಷ ಅಧಿವೇಶನ ನಡೆಯಲಿದೆ.

ಒಂದು ರಾಷ್ಟ್ರ, ಒಂದು ಚುನಾವಣೆ ಸಾಧಕ-ಭಾದಕ ತಿಳಿಯಲು ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ರಚಿಸಿದ ಕೇಂದ್ರ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Sep 01, 2023 | 9:55 AM

ದೆಹಲಿ. ಸೆ.1: ಸೆ.18ರಿಂದ ಸೆ.22ರವರೆಗೆ ವಿಶೇಷ ಸಂಸತ್​​ ಸದನ ನಡೆಯಲಿದೆ ಎಂದು ಕೇಂದ್ರ ಸರ್ಕಾರ ನೆನ್ನೆ (ಆ.31) ತಿಸಿಳಿತ್ತು. ಹಲವು ಮಸೂದೆಯನ್ನು ಮಂಡಿಸಲು ಬಾಕಿ ಇರುವ ಕಾರಣ ಈ ವಿಶೇಷ ಅಧಿವೇಶವನ್ನು ಕರೆಯಲಾಗಿದೆ. ಇದೀಗ ಇದಕ್ಕೂ ಮುನ್ನ ಒಂದು ರಾಷ್ಟ್ರ, ಒಂದು ಚುನಾವಣೆ( one nation one election) ಸಾಧ್ಯತೆಯನ್ನು ಅಧ್ಯಯನ ಮಾಡಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ( Ram Nath Kovind) ನೇತೃತ್ವದ ಸಮಿತಿಯನ್ನು ಕೇಂದ್ರ ರಚಿಸಲಿದೆ. ದೆಹಲಿಯ ಜಿ 20 ಶೃಂಗಸಭೆಯ ನಂತರ ವಿಶೇಷ ಅಧಿವೇಶನ ನಡೆಯಲಿದೆ. ಜಿ.20 ಭಾರತದ ಅಂತರಾಷ್ಟ್ರೀಯ ಸ್ಥಾನಮಾನವನ್ನು ಗುರುತಿಸುವ ಸಂಕೇತವೆಂದು ಸರ್ಕಾರ ಹೇಳಿದೆ.

ಈ ವಿಶೇಷ ಅಧಿವೇಶನದ ಶಾಸಕಾಂಗ ಕಾರ್ಯಸೂಚಿಯ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಈ ಅಧಿವೇಶ ಮುಂದಿನ ಸಾರ್ವತ್ರಿಕ ಚುನಾವಣೆಗಳಿಗೆ ಬಲವಾದ ರಾಜಕೀಯ ಸಂದೇಶವನ್ನು ನೀಡುವಂತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಸೆಪ್ಟೆಂಬರ್​ 18 ರಿಂದ 22ರವರೆಗೆ ಸಂಸತ್ ವಿಶೇಷ ಅಧಿವೇಶನ

ಇನ್ನು ಈಗಾಗಲೇ ಚರ್ಚೆಯಲ್ಲಿರುವ ‘ಒಂದು ರಾಷ್ಟ್ರ-ಒಂದು ಚುನಾವಣೆ’ ಮಸೂದೆಯು ಸ್ವಲ್ಪ ಸಮಯದವರೆಗೆ ಸರ್ಕಾರದ ಕಾರ್ಯಸೂಚಿಯಲ್ಲಿರಲಿದೆ. ಈ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ನೀಡುತ್ತದೆ ಎಂದು ಹೇಳಲಾಗಿದೆ. ಇದೀಗ ಈ ಬಗ್ಗೆ ರಾಜ್ಯ ಮತ್ತು ಇತರ ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಾವ ರೀತಿಯ ಅಭಿಪ್ರಾಯ ಇದೆ ಜತೆಗೆ ಕೇಂದ್ರದ ಈ ನಿಲುವಿನ ಬಗ್ಗೆ ಪಕ್ಷಗಳು ಹಾಗೂ ಸಾರ್ವಜನಿಕ ವಲಯದಲ್ಲಿ ಯಾವ ರೀತಿಯಲ್ಲಿ ಚರ್ಚೆಯಾಗುತ್ತಿದೆ ಎಂಬುದನ್ನು ಅಧ್ಯಯನ ನಡೆಸಲು ಕೇಂದ್ರವು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯೊಂದನ್ನು ರಚಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ