Char Dham Yatra: ಕಂದಕಕ್ಕೆ ಬಿದ್ದ ಚಾರ್​ ಧಾಮ್​ಗೆ ತೆರಳುತ್ತಿದ್ದ ಬಸ್​; 25 ಯಾತ್ರಿಕರ ಸಾವು

ಚಾರ್​ ಧಾಮ್​ಗೆ ತೆರಳುತ್ತಿದ್ದ 28 ಯಾತ್ರಾರ್ಥಿಗಳಿದ್ದ ಬಸ್​ ಕಂದಕಕ್ಕೆ ಬಿದ್ದು 17 ಜನರು ಸಾವನ್ನಪ್ಪಿದ್ದಾರೆ.

Char Dham Yatra: ಕಂದಕಕ್ಕೆ ಬಿದ್ದ ಚಾರ್​ ಧಾಮ್​ಗೆ ತೆರಳುತ್ತಿದ್ದ ಬಸ್​; 25 ಯಾತ್ರಿಕರ ಸಾವು
ಸಾಂಕೇತಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on:Jun 05, 2022 | 11:15 PM

ಉತ್ತರಕಾಶಿ: ಚಾರ್​ ಧಾಮ್​ಗೆ ತೆರಳುತ್ತಿದ್ದ 28 ಯಾತ್ರಾರ್ಥಿಗಳಿದ್ದ ಬಸ್​ ಕಂದಕಕ್ಕೆ ಬಿದ್ದು 17 ಜನರು ಸಾವನ್ನಪ್ಪಿದ್ದಾರೆ. ಬಸ್ ಯಮುನೋತ್ರಿಗೆ (Yamanotri) ತೆರಳುತ್ತಿತ್ತು. ಮಧ್ಯಪ್ರದೇಶದ (Madhya Pradesh) ಪನ್ನಾ ಜಿಲ್ಲೆಯಿಂದ 28 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಉತ್ತರಕಾಶಿ ಜಿಲ್ಲೆಯ ದಮ್ತಾ ಬಳಿ ಕಂದಕಕ್ಕೆ ಬಿದ್ದಿದೆ ಎಂದು ರಾಜ್ಯ ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

15 ಜನರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 6 ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು. ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಪ್ರಸ್ತುತ ಸ್ಥಳದಲ್ಲಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಬಸ್​ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಪೊಲೀಸರು ಹಾಗೂ SDRFನಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸದ್ಯ ಉತ್ತರಾಖಂಡ್‌ನಲ್ಲಿ ಭೀಕರ ಬಸ್​ ಅಪಘಾತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪರಿಹಾರ ಘೋಷಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಇನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘಟನೆ ಸಂಬಂಧ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, “ಉತ್ತರಾಖಂಡದ ಚಾರ್​ ಧಾಮ್​ಗೆ ತೀರ್ಥಯಾತ್ರೆಗಾಗಿ ಯಮುನೋತ್ರಿ ಧಾಮಕ್ಕೆ ಹೋಗುತ್ತಿದ್ದ ಬಸ್ಸು ಕಂದಕಕ್ಕೆ ಬಿದ್ದು ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಯಾತ್ರಿಕರು ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ ಮತ್ತು ಮೃತರ ಕುಟುಂಬ ಸದಸ್ಯರಿಗೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಅವರು ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಅಪಘಾತದ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ. “ಉತ್ತರಾಖಂಡದಲ್ಲಿ ಭಕ್ತರ ಬಸ್ ಕಂದಕಕ್ಕೆ ಬಿದ್ದಿರುವ ಬಗ್ಗೆ ಕೇಳಲು ತುಂಬಾ ದುಃಖವಾಗಿದೆ. ಈ ಕುರಿತು ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರೊಂದಿಗೆ ಮಾತನಾಡಿದ್ದೇನೆ. ಸ್ಥಳೀಯ ಆಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಎನ್‌ಡಿಆರ್‌ಎಫ್ ಕೂಡ ಶೀಘ್ರದಲ್ಲೇ ಅಲ್ಲಿಗೆ ತಲುಪಲಿದೆ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 9:06 pm, Sun, 5 June 22

ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ