Hyderabad News: ಶ್ವಾನ ದಾಳಿಯಿಂದ ತಪ್ಪಿಸಲು ಹೋಗಿ 3ನೇ ಮಹಡಿಯಿಂದ ಜಿಗಿದ ಡೆಲಿವರಿ ಬಾಯ್​​​

ಡೆಲಿವರ್​​​ ಬಾಯ್​​​ ಗ್ರಾಹಕರ ಮನೆಗೆ ಆರ್ಡರ್​​​​ ತಲುಪಿಸಲು ಹೋದ ಸಮಯದಲ್ಲಿ ಅಲ್ಲಿನ ಸಾಕು ನಾಯಿ ದಾಳಿ ಮಾಡಲು ಮುಂದಾಗಿದೆ. ಅಪಾಯದಿಂದ ಪಾರಾಗಲು ಈತ ಮೂರನೇ ಮುಹಡಿಯಿಂದ ಕೆಳಗೆ ಹಾರಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡಿದ್ದು ಆಸ್ಪ್ರತೆಗೆ ದಾಖಲಿಸಲಾಗಿದೆ.

Hyderabad News: ಶ್ವಾನ ದಾಳಿಯಿಂದ ತಪ್ಪಿಸಲು ಹೋಗಿ 3ನೇ ಮಹಡಿಯಿಂದ ಜಿಗಿದ ಡೆಲಿವರಿ ಬಾಯ್​​​
ಶ್ವಾನ ದಾಳಿಯಿಂದ ತಪ್ಪಿಸಲು ಹೋಗಿ 3ನೇ ಮಹಡಿಯಿಂದ ಜಿಗಿದ ಡೆಲಿವರಿ ಬಾಯ್Image Credit source: indiatoday.in
Follow us
ಅಕ್ಷತಾ ವರ್ಕಾಡಿ
|

Updated on:May 23, 2023 | 12:57 PM

ಹೈದರಾಬಾದ್‌: ಡೆಲಿವರ್​​​ ಬಾಯ್​​​ ಗ್ರಾಹಕರ ಮನೆಗೆ ಆರ್ಡರ್​​​​ ತಲುಪಿಸಲು ಹೋದ ಸಮಯದಲ್ಲಿ ಅಲ್ಲಿನ ಸಾಕು ನಾಯಿ ದಾಳಿ ಮಾಡಲು ಮುಂದಾಗಿದೆ. ಅಪಾಯದಿಂದ ಪಾರಾಗಲು ಈತ ಮೂರನೇ ಮುಹಡಿಯಿಂದ ಕೆಳಗೆ ಹಾರಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡಿದ್ದು ಆಸ್ಪ್ರತೆಗೆ ದಾಖಲಿಸಲಾಗಿದೆ. ಹೈದರಾಬಾದ್‌ನಲ್ಲಿ ಇಂತಹ ಘಟನೆ ಇದೇ ಮೊದಲೇನಲ್ಲಾ. ಇತ್ತೀಚಿನ ದಿನಗಳಲ್ಲಿ ಹೈದರಾಬಾದ್‌ನಲ್ಲಿ ಇದು ಎರಡನೇ ಘಟನೆಯಾಗಿದೆ. ಹೈದರಾಬಾದ್‌ನ ಡೆಲಿವರಿ ಬಾಯ್​​ ಭಾನುವಾರ ಮಧ್ಯಾಹ್ನ ಗ್ರಾಹಕರ ಸಾಕು ನಾಯಿಯಿಂದ ತನ್ನನ್ನು ರಕ್ಷಿಸಿಕೊಳ್ಳುವ ಪ್ರಯತ್ನದಲ್ಲಿ ಅಪಾರ್ಟ್ಮೆಂಟ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಈ ವರ್ಷದ ಜನವರಿಯಿಂದ ನಗರದಲ್ಲಿ ವರದಿಯಾದ ಎರಡನೇ ಘಟನೆ ಇದಾಗಿದೆ.

ಹೈದರಾಬಾದ್‌ನ ಪಂಚವಟಿ ಕಾಲೋನಿಯಲ್ಲಿರುವ ಶ್ರೀನಿಧಿ ಹೈಟ್ಸ್‌ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಡೆಲಿವರಿ ಎಕ್ಸಿಕ್ಯೂಟಿವ್, ಆರ್ಡರ್​ ಕೊಡಲು ಬಂದಾಗ ಗ್ರಾಹಕರ ಮನೆಯ ಡಾಬರ್‌ಮ್ಯಾನ್‌ ತಳಿಯ ಶ್ವಾನ ಬೊಗಳಲು ಪ್ರಾರಂಭಿಸಿದೆ. ಇದಾದ ಬಳಿಕ ಏಕಾಏಕಿ ದಾಳಿ ಮಾಡಲು ಮುಂದಾಗಿದೆ. ತನ್ನನ್ನು ನಾಯಿಯಿಂದ ರಕ್ಷಿಸಿಕೊಳ್ಳಲು ಪ್ಯಾರಪೆಟ್ ಗೋಡೆಯ ಮೇಲೆ ಆತ ಹಾರಿದ್ದಾನೆ. ಸಂತ್ರಸ್ತೆಯನ್ನು ತಕ್ಷಣ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ರಾಯದುರ್ಗಂ ಪೊಲೀಸರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 289 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಮುಂಬೈ ಲೋಕಲ್​ ಟ್ರೇನಿನ ಈ ‘ನಿತ್ಯಪ್ರಯಾಣಿಕ’ನ ವಿಡಿಯೋ ವೈರಲ್

ಇದೇ ರೀತಿಯ ಮತ್ತೊಂದು ಘಟನೆಯಲ್ಲಿ, 23 ವರ್ಷದ ರಿಜ್ವಾನ್ ಎಂಬಾತ ಸಾಕುನಾಯಿ ದಾಳಿಯಿಂದ ಪ್ರಾಣ ರಕ್ಷಿಸಲು ಹೋಗಿ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದರು. ಫುಡ್ ಡೆಲಿವರಿ ಆಪ್ ಸ್ವಿಗ್ಗಿ ಜೊತೆ ಕೆಲಸ ಮಾಡುತ್ತಿದ್ದ ಮೊಹಮ್ಮದ್ ರಿಜ್ವಾನ್ ಅವರು ಪಾರ್ಸೆಲ್ ಡೆಲಿವರಿ ಮಾಡಲು ಬಂಜಾರಾ ಹಿಲ್ಸ್‌ನ ಅಪಾರ್ಟ್‌ಮೆಂಟ್ ಕಟ್ಟಡಕ್ಕೆ ಹೋಗಿದ್ದರು. ಬಂಜಾರ ಹಿಲ್ಸ್ ಪೊಲೀಸರು ನಾಯಿ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದು, ನಂತರ ಸಂತ್ರಸ್ತೆ ಮತ್ತು ಆರೋಪಿಗಳು ಇತ್ಯರ್ಥಕ್ಕೆ ಒಪ್ಪಿಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 12:54 pm, Tue, 23 May 23

ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್