ಆತ್ಮಹತ್ಯೆ ಮಾಡಿಕೊಂಡ ಮಗಳ ಶವವನ್ನು ಹೊತ್ತು 35 ಕಿಮೀ ಕಾಲ್ನಡಿಗೆಯಲ್ಲೇ ಕ್ರಮಿಸಿ ಆಸ್ಪತ್ರೆ ತಲುಪಿದ ತಂದೆ; ವಿಡಿಯೋ ವೈರಲ್​

ನಾವು ಬೆಳಗ್ಗೆ 9 ಗಂಟೆಗೆ ನಮ್ಮ ಹಳ್ಳಿಯನ್ನು ಬಿಟ್ಟೆವು. ಸಂಜೆ 4ಗಂಟೆ ಹೊತ್ತಿಗೆ ಆಸ್ಪತ್ರೆಗೆ ತಲುಪಿದ್ದೇವೆ. ಒಂದು ಮಂಚದ ಮೇಲೆ ಮಲಗಿಸಿ ನಾವೆಲ್ಲ ಹೊತ್ತುಕೊಂಡು ಬಂದಿದ್ದೇವೆ. ಈಗ ನಮ್ಮ ದೇಹಪರಿಸ್ಥಿತಿ ಹದಗೆಟ್ಟಿದೆ ಎಂದು ಆ ತಂದೆ ಅಳಲು ತೋಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಮಗಳ ಶವವನ್ನು ಹೊತ್ತು 35 ಕಿಮೀ ಕಾಲ್ನಡಿಗೆಯಲ್ಲೇ ಕ್ರಮಿಸಿ ಆಸ್ಪತ್ರೆ ತಲುಪಿದ ತಂದೆ; ವಿಡಿಯೋ ವೈರಲ್​
ಯುವತಿಯ ಮೃತದೇಹವನ್ನು ಮಂಚದ ಮೇಲೆ ಮಲಗಿಸುತ್ತಿರುವುದು
Follow us
Lakshmi Hegde
|

Updated on:May 10, 2021 | 10:29 AM

ಭೋಪಾಲ್​: ಆತ್ಮಹತ್ಯೆ ಮಾಡಿಕೊಂಡ ಮಗಳ ಮೃತದೇಹವನ್ನು ತಂದೆ ಮಂಚದ ಮೇಲೆ ಮಲಗಿಸಿ, ಕಟ್ಟಿಕೊಂಡು ಸುಮಾರು 35 ಕಿಮೀ ಹೊತ್ತು ನಡೆದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ ನಡೆದಿದೆ. ಮಗಳ ಶವವನ್ನು ಪೋಸ್ಟ್​ಮಾರ್ಟಮ್​​ಗೆ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಿತ್ತು. ಆದರೆ ಶವವನ್ನು ಸಾಗಿಸಲು ಒಂದು ವಾಹನದ ವ್ಯವಸ್ಥೆ ಮಾಡಲು ಸಾಧ್ಯವಾಗದೆ ಮಗಳ ಶವವನ್ನು ಹೊತ್ತು 35 ಕಿಮೀ ದೂರವನ್ನು ಏಳು ಗಂಟೆಗಳಲ್ಲಿ ಕ್ರಮಿಸಿದ್ದಾರೆ. ಇವರೊಂದಿಗೆ ಹಳ್ಳಿಯ ಕೆಲವರೂ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಇದೀಗ ತುಂಬ ವೈರಲ್ ಆಗಿದೆ. ಧಿರಪತಿ ಸಿಂಗ್ ಗೊಂಡ್​​ರ ಪುತ್ರಿ 16 ವರ್ಷದ ಯುವತಿ ಮೇ 5ರಂದು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಪರಿಶೀಲನೆಗಾಗಿ ಗಡೈ ಗ್ರಾಮದಲ್ಲಿರುವ ಇವರ ಮನೆಗೆ ಬಂದ ಪೊಲೀಸರು, ಪೋಸ್ಟ್​ಮಾರ್ಟಮ್​​ಗಾಗಿ ಜಿಲ್ಲಾಸ್ಪತ್ರೆಗೆ ಶವವನ್ನು ತರುವಂತೆ ಹೇಳಿದರು. ಈ ಗ್ರಾಮದಿಂದ ಜಿಲ್ಲಾಕೇಂದ್ರ ಸುಮಾರು 35 ಕಿ.ಮೀ.ದೂರವಿದೆ. ಇದು ತುಂಬ ಬಡಕುಟುಂಬವಾಗಿದ್ದರಿಂದ ಮನೆಯಲ್ಲಿ ಯಾವುದೇ ವಾಹನ ಇರಲಿಲ್ಲ. ಹಾಗೇ ಹಣಕೊಟ್ಟು ಯಾವುದೇ ವಾಹನವನ್ನು ಬಾಡಿಗೆಗೆ ಪಡೆಯುವ ಶಕ್ತಿಯೂ ಆತನಲ್ಲಿ ಇರಲಿಲ್ಲ. ಕಡೆಗೆ ಬೇರೆ ದಾರಿ ಕಾಣದೆ ಕೆಲವು ಗ್ರಾಮಸ್ಥರೊಟ್ಟಿಗೆ ಸೇರಿ ಮಗಳ ಶವವನ್ನು ಹೊತ್ತು ನಡೆದಿದ್ದಾರೆ.

ನಾವು ಬೆಳಗ್ಗೆ 9 ಗಂಟೆಗೆ ನಮ್ಮ ಹಳ್ಳಿಯನ್ನು ಬಿಟ್ಟೆವು. ಸಂಜೆ 4ಗಂಟೆ ಹೊತ್ತಿಗೆ ಆಸ್ಪತ್ರೆಗೆ ತಲುಪಿದ್ದೇವೆ. ಒಂದು ಮಂಚದ ಮೇಲೆ ಮಲಗಿಸಿ ನಾವೆಲ್ಲ ಹೊತ್ತುಕೊಂಡು ಬಂದಿದ್ದೇವೆ. ಈಗ ನಮ್ಮ ದೇಹಪರಿಸ್ಥಿತಿ ಹದಗೆಟ್ಟಿದೆ. ಇದು ದೊಡ್ಡ ಸಮಸ್ಯೆಯೇ ಹೌದು.. ಆದರೆ ಪರಿಹಾರ ಸಿಗಲಿಲ್ಲ ಎಂದು ಧಿರಪತಿ ಸಿಂಗ್​ ಗೊಂಡ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗ ಕೊರೊನಾ ಹೆಚ್ಚಾಗಿರುವ ಕಾರಣ ಲಾಕ್​ಡೌನ್​ ಇರುವುದರಿಂದ ವಾಹನಗಳ ಸಂಚಾರಕ್ಕೆ ಸ್ಥಳೀಯ ಆಡಳಿತಗಳು ಅನುಮತಿಯನ್ನೂ ನೀಡುತ್ತಿಲ್ಲ ಎಂದೂ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ಥಳೀಯ ಪೊಲೀಸ್​ ಅಧಿಕಾರಿ ಅರುಣ್​ ಸಿಂಗ್​ ಅವರು, ಮೃತದೇಹಗಳನ್ನು ಪೋಸ್ಟ್​ಮಾರ್ಟಮ್​ ಸ್ಥಳಕ್ಕೆ ಸಾಗಿಸುವುದು ನಮ್ಮ ಇಲಾಖೆಯ ಜವಾಬ್ದಾರಿಯಲ್ಲ. ಅದಕ್ಕೆಲ್ಲ ಬಜೆಟ್​ ನೀಡಿರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Karnataka Lockdown: ನೆಪ ಹೇಳಿದ ತಪ್ಪಿಗೆ ಒಂದು ಗೊನೆ ಬಾಳೆಹಣ್ಣು ತೆಗೆದುಕೊಂಡು ಹೋದ ಚಿಕ್ಕಮಗಳೂರು ವ್ಯಕ್ತಿ

Gold Rate Today: ಚಿನ್ನದ ಅಂಗಡಿಗಳೆಲ್ಲಾ ಬಂದ್​; ಬೆಂಗಳೂರು ಸೇರಿ ಇತರ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ?

Published On - 9:16 am, Mon, 10 May 21

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ