ಮಹಿಳೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಸಾರ್ವಜನಿಕವಾಗಿ ಹಿಗ್ಗಾಮುಗ್ಗಾ ಥಳಿಸಿದ ಪುರುಷರ ಗುಂಪು
ಮೇಘಾಲಯದಲ್ಲಿ ಮಹಿಳೆಯೊಬ್ಬರಿಗೆ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಕಂಡು ಬಂದಿದೆ. ಇದೀಗ ಘಟನೆಗೆ ಸಂಬಂಧಿಸಿಂದಂತೆ ವಿಡಿಯೋವೊಂದು ವೈರಲ್ ಆಗಿದೆ. ಮಹಿಳೆಯನ್ನು ಸಾರ್ವಜನಿಕವಾಗಿ ಕೆಲವು ಪುರುಷರು ಸೇರಿ ಥಳಿಸಿದ್ದಾರೆ. ಅಷ್ಟಕ್ಕೂ ಆ ಮಹಿಳೆಗೆ ಯಾಕೆ ಥಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಕ್ರಮವೇನು? ಇಲ್ಲಿದೆ ನೋಡಿ.
ಮೇಘಾಲಯದಲ್ಲಿ ವಿವಾಹಿತ ಮಹಿಳೆಯೊಬ್ಬರು ಬೇರೊಬ್ಬ ವ್ಯಕ್ತಿಯ ಜತೆಗೆ ಅಕ್ರಮ ಸಂಬಂಧವನ್ನು ಇಟ್ಟುಕೊಂಡಿದ್ದಾರೆ ಎಂಬ ಕಾರಣಕ್ಕೆ ಆಕೆಯನ್ನು ಮನಬಂದಂತೆ ಅಲ್ಲಿ ಪುರುಷರು ಸಾರ್ವಜನಿಕವಾಗಿ ಥಳಿಸಿದ್ದಾರೆ. ಇದೀಗ ಈ ಘಟನೆಯ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು, ಪಶ್ಚಿಮ ಗರೋ ಹಿಲ್ಸ್‌ನ ದಾಡೆಂಗ್ಗ್ರೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮಹಿಳೆಯ ಮೇಲೆ ಸಾರ್ವಜನಿಕವಾಗಿ ಅಮಾನುಷವಾಗಿ ಹಲ್ಲೆ ಮಾಡಲಾಗಿದ್ದು, ಯಾರು ಕೂಡ ಆಕೆಯ ಸಹಾಯಕ್ಕೆ ಧಾವಿಸಿಲ್ಲ ಎಂದು ಹೇಳಲಾಗಿದೆ.
ಈ ವೀಡಿಯೊದಲ್ಲಿ ಅನೇಕ ಪುರುಷರು ಸೇರಿ ಆಕೆಗೆ ಸಾವರ್ಜನಿಕವಾಗಿ ಎಲ್ಲರ ಮುಂದೆ ಥಳಿಸಿದ್ದಾರೆ. ಇದೀಗ ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಆಕೆ ಅಕ್ರಮ ಸಂಬಂಧ ಹೊಂದಿದ್ದ ಕಾರಣ ಅವರು ಈ ರೀತಿ ಥಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: ಮದುವೆ ದಿನ ಮಾಜಿ ಪ್ರೇಯಸಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ವಿಡಿಯೋ ಇಲ್ಲಿದೆ ನೋಡಿ:
📌Troubling video originating from West Garo Hills has emerged, depicting a woman subjected to a vicious assault. The footage shows a group of men dragging, kicking, and ruthlessly beating her, while villagers watched. pic.twitter.com/zcy2VffUwF
— Highland Post (@PostHighland) June 26, 2024
ಮಹಿಳಾ ಸಬಲೀಕರಣದ ಮೇಘಾಲಯ ಅಸೆಂಬ್ಲಿ ಸಮಿತಿಯ ಅಧ್ಯಕ್ಷೆಯಾಗಿರುವ ಸುಟ್ಂಗಾ ಸೈಪುಂಗ್ ಶಾಸಕಿ ಸಾಂತಾ ಮೇರಿ ಶೈಲ್ಲಾ ಈ ಘಟನೆಯ ಬಗ್ಗೆ ಪೊಲೀಸರ ಬಳಿ ವರದಿಯನ್ನು ಕೇಳಿದ್ದಾರೆ. ಮೇಘಾಲಯದ ಎಲ್ಲಾ 12 ಜಿಲ್ಲೆಗಳ ಪೊಲೀಸ್ ಅಧೀಕ್ಷಕರಿಗೆ ಮಹಿಳೆಯರ ವಿರುದ್ಧ ಯಾವುದೇ ರೀತಿಯ ಅಪರಾಧದ ವಿರುದ್ಧ ಎಚ್ಚರದಿಂದ ಇರುವಂತೆ ಸರ್ಕಾರ ಹೇಳಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ