ಅಮಿತ್​ ಶಾ ಪಶ್ಚಿಮ ಬಂಗಾಳ ಪ್ರವಾಸ; ಮಮತಾ ನಾಡಲ್ಲಿ ಎರಡು ದಿನ ಪ್ರಚಾರ

ಕಳೆದ ವಾರ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದರು. ಹೀಗಾಗಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಖುದ್ದಾಗಿ ಪಶ್ಚಿಮ ಬಂಗಾಳಕ್ಕೆ ಪಕ್ಷ ಸಂಘಟನೆಗಾಗಿ ಭೇಟಿ ನೀಡುತ್ತಿದ್ದಾರೆ. ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರಲು ಟಿಎಂಸಿ ಬಂಡಾಯ ನಾಯಕರು ಸಾಲುಗಟ್ಟಿ ನಿಂತಿದ್ದಾರೆ. ಮುಂದಿನ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬರೋಬ್ಬರಿ 200 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬ ಗುರಿಯನ್ನ ಹಾಕಿಕೊಂಡಿದೆ.

ಅಮಿತ್​ ಶಾ ಪಶ್ಚಿಮ ಬಂಗಾಳ ಪ್ರವಾಸ; ಮಮತಾ ನಾಡಲ್ಲಿ ಎರಡು ದಿನ ಪ್ರಚಾರ
ಅಮಿತ್ ಶಾ ಮತ್ತು ಮಮತಾ ಬ್ಯಾನರ್ಜಿ
Follow us
ರಾಜೇಶ್ ದುಗ್ಗುಮನೆ
|

Updated on: Dec 18, 2020 | 8:48 PM

ನವದೆಹಲಿ: ಮುಂದಿನ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ಪಶ್ಚಿಮ ಬಂಗಾಳದ ಸಾರ್ವತ್ರಿಕ ವಿಧಾನಸಭಾ ಚುನಾವಣೆ ನಡೆಯಲಿದೆ . ಇದಕ್ಕೆ ಈಗಿನಿಂದಲೇ ಪ್ರಮುಖ ಪಕ್ಷಗಳು ಪ್ರಚಾರ ಚುರುಕುಗೊಳಿಸಿವೆ. ಆಡಳಿತರೂಢ ಟಿಎಂಸಿಯನ್ನು ಅಧಿಕಾರದಿಂದ ಕೆಳಗಿಳಿಸಿ ಅಧಿಕಾರದ ಗದ್ದುಗೆಗೇರಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಹೀಗಿರುವಾಗಲೇ ಕೇಂದ್ರ ಗೃಹ ಸಚಿವ ಅಮಿತ್​ ಶಾ ಪಶ್ಚಿಮ ಬಂಗಾಳ ಪ್ರವಾಸ ಕೈಗೊಂಡಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ 42 ಲೋಕಸಭಾ ಕ್ಷೇತ್ರಗಳಲ್ಲಿ ಪೈಕಿ ಬಿಜೆಪಿಯು ಪಶ್ಚಿಮ ಬಂಗಾಳದ 18 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಇದು ವಿಧಾನಸಭಾ ಚುನಾವಣೆ ಗೆಲ್ಲುವ ವಿಶ್ವಾಸ ಮೂಡಿಸಿದೆ. ಇದಕ್ಕಾಗಿ ಬಿಜೆಪಿಯ ಘಟಾನುಘಟಿ ನಾಯಕರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ ಪಕ್ಷ ಸಂಘಟಿಸುತ್ತಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷದ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.

ಕಳೆದ ವಾರ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕಾರಿನ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದರು. ಇದನ್ನು ಸವಾಲಾಗಿ ಸ್ವೀಕರಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗ ತಾವೇ ನೇರವಾಗಿ ಅಖಾಡಕ್ಕಿಳಿಯುತ್ತಿದ್ದಾರೆ. ಶನಿವಾರ ಚುನಾವಣಾ ಹೋರಾಟದ ಕಣವಾಗಿರುವ ಪಶ್ಚಿಮ ಬಂಗಾಳಕ್ಕೆ ಅಮಿತ್ ಶಾ ಭೇಟಿ ನೀಡ್ತಿದ್ದಾರೆ. ಅಮಿತ್ ಶಾ ಕೇಂದ್ರ ಗೃಹ ಸಚಿವರಾಗಿರುವುದರಿಂದ ಕೇಂದ್ರದ ಪಡೆಗಳೇ ಭದ್ರತೆ ನೀಡಲಿವೆ. ಎರಡು ದಿನಗಳ ಕಾಲ ಪಶ್ಚಿಮ ಬಂಗಾಳದಲ್ಲಿ ಸಾಲು ಸಾಲು ಕಾರ್ಯಕ್ರಮಗಳನ್ನೇ ಅಮಿತ್ ಶಾ ಹಾಕಿಕೊಂಡಿದ್ದಾರೆ.

ಕೋಲ್ಕತ್ತಾದಿಂದ ಮಿಡ್ನಾಪುರ, ಬೋಲಪುರಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಸಿದ್ದೇಶ್ವರಿ ಮಹಮಾಯ ದೇವಾಲಯಕ್ಕೆ, ಸ್ವಾಮಿ ವಿವೇಕಾನಂದರ ವಂಶಸ್ಥರ ಮನೆಗೂ ಭೇಟಿ ನೀಡಲಿದ್ದಾರೆ. ಕ್ರಾಂತಿಕಾರಿ ಹೋರಾಟಗಾರ ಖಾದಿರಾಮ್ ಬೋಸ್ ಮನೆಗೆ ಭೇಟಿ ನೀಡಿ ಗೌರವಾರ್ಪಣೆ ಮಾಡಲಿದ್ದಾರೆ. ರೈತರೊಬ್ಬರ ಮನೆಯಲ್ಲಿ ಅಮಿತ್ ಶಾ ಭೋಜನ ಸ್ವೀಕರಿಸಲಿದ್ದಾರೆ. ರವೀಂದ್ರ ನಾಥ್ ಟ್ಯಾಗೋರ್ ಅವರ ವಿಶ್ವಭಾರತಿ ವಿಶ್ವವಿದ್ಯಾಲಯಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಸಾರ್ವಜನಿಕ ಱಲಿ, ರೋಡ್ ಶೋಗಳಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಜತೆಗೆ ಪಕ್ಷದ ನಾಯಕರು, ಕಾರ್ಯಕರ್ತರ ಸಭೆಗಳನ್ನು ಅಮಿತ್ ಶಾ ನಡೆಸಲಿದ್ದಾರೆ. ಮೇದಿನಾಪುರ, ಪಶ್ಚಿಮ ಮಿಡ್ನಾಪುರ, ಭೀರಭೂಮ್ ಜಿಲ್ಲೆಗಳಿಗೆ ಅಮಿತ್ ಶಾ ಭೇಟಿ ನೀಡುವರು.

ಶಾ ಸಮ್ಮುಖದಲ್ಲಿ ಬಿಜೆಪಿ ಸೇರುವ ಸುವೇಂದು ಅಧಿಕಾರಿ ಮೇದಿನಪುರದಲ್ಲಿ ಅಮಿತ್ ಶಾ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ರ್ಯಾಲಿಯಲ್ಲೇ ಈಗಾಗಲೇ ಟಿಎಂಸಿ ಗೆ ಗುಡ್ ಬೈ ಹೇಳಿರುವ ಮಾಜಿ ಸಚಿವ ಹಾಗೂ ಪ್ರಭಾವಿ ಮುಖಂಡ ಸುವೇಂದು ಅಧಿಕಾರಿ ಬಿಜೆಪಿ ಸೇರ್ಪಡೆ ಆಗಲಿದ್ದಾರೆ . ಸುವೇಂದು ಅಧಿಕಾರಿ ಜೊತೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜೀತೇಂದ್ರ ತಿವಾರಿ, ಸಿಲಭದ್ರ ದತ್ತಾ ಕೂಡ ಬಿಜೆಪಿ ಸೇರ್ಪಡೆ ಆಗಲಿದ್ದಾರೆ. ಜತೆಗೇ ಸುವೇಂದು ಅಧಿಕಾರಿಯ ಬೆಂಬಲಿಗರು, ಈಗಾಗಲೇ ಟಿಎಂಸಿ ಪಕ್ಷ ತ್ಯಜಿಸಿರುವ ಪ್ರಮುಖ ನಾಯಕರು ಬಿಜೆಪಿ ಸೇರ್ಪಡೆ ಆಗಲಿದ್ದಾರೆ.

ಸುವೇಂದು ಅಧಿಕಾರಿ, ಸುಮಾರು 50 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಭಾವ ಹೊಂದಿರುವ ನಾಯಕ. ಸುವೇಂದು ಅಧಿಕಾರಿಯ ತಂದೆ ಶಿಶಿರ್ ಅಧಿಕಾರಿ ಹಾಗೂ ಸೋದರ ಕೂಡ ಹಾಲಿ ಟಿಎಂಸಿ ಪಕ್ಷದ ಲೋಕಸಭಾ ಸದಸ್ಯರು . ಪ್ರಭಾವಿ ರಾಜಕೀಯ ಕುಟುಂಬದ ಸುವೇಂದು ಅಧಿಕಾರಿ ಬಿಜೆಪಿ ಸೇರ್ಪಡೆಯಿಂದ ಬಿಜೆಪಿಗೆ ದೊಡ್ಡ ಶಕ್ತಿ ಸಿಗಲಿದೆ.

ಆದರೆ, ಟಿಎಂಸಿ ಪಕ್ಷದ ಶಾಸಕ ಸ್ಥಾನಕ್ಕೆ ಸುವೇಂದು ಅಧಿಕಾರಿ ನೀಡಿರುವ ರಾಜೀನಾಮೆಯನ್ನು ಸ್ಪೀಕರ್ ಬಿಮನ್ ಬ್ಯಾನರ್ಜಿ ತಾಂತ್ರಿಕ ಕಾರಣ ನೀಡಿ ತಿರಸ್ಕರಿಸಿದ್ದಾರೆ. ರಾಜೀನಾಮೆ ಪತ್ರವನ್ನು ಖುದ್ದಾಗಿ ಸ್ಪೀಕರ್ ಭೇಟಿಯಾಗಿ ನೀಡಿಲ್ಲ. ರಾಜೀನಾಮೆ ಪತ್ರದಲ್ಲಿ ದಿನಾಂಕವನ್ನು ನಮೂದಿಸಿಲ್ಲ. ಸರಿಯಾದ ನಮೂನೆಯಲ್ಲಿ ರಾಜೀನಾಮೆ ನೀಡಿಲ್ಲ. ಹೀಗಾಗಿ ರಾಜೀನಾಮೆ ಪತ್ರದ ಬಗ್ಗೆ ಡಿಸೆಂಬರ್ 21 ರಂದು ತಮ್ಮನ್ನು ಖುದ್ದಾಗಿ ಬಂದು ಭೇಟಿಯಾಗುವಂತೆ ಸ್ಪೀಕರ್ ಬಿಮನ್ ಬ್ಯಾನರ್ಜಿ, ಸುವೇಂದು ಅಧಿಕಾರಿಗೆ ಸೂಚಿಸಿದ್ದಾರೆ. ಬಿಜೆಪಿ ಸೇರಲು ಸಿದ್ಧವಾಗಿರುವ ಸುವೇಂದು ಅಧಿಕಾರಿಗೆ ಕೇಂದ್ರದ ಗೃಹ ಇಲಾಖೆಯು ಈಗಾಗಲೇ ಜಡ್ ಕೆಟಗರಿ ಭದ್ರತೆ ನೀಡಿ ಆದೇಶಿಸಿದೆ. ಸುವೇಂದು ಅಧಿಕಾರಿಗೆ ಸಿಆರ್‌ಪಿಎಫ್ ಯೋಧರು ಭದ್ರತೆ ನೀಡಲಿದ್ದಾರೆ. ಜತೆಗೇ ಬುಲೆಟ್ ಪ್ರೂಫ್ ವಾಹನವನ್ನು ಕೂಡ ಭದ್ರತೆಗಾಗಿ ನೀಡಲಾಗುತ್ತೆ.

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಒಟ್ಟು 294 ಸ್ಥಾನಗಳಿವೆ. ಇವುಗಳ ಪೈಕಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 200 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬೇಕೆಂಬ ಗುರಿಯನ್ನು ಅಮಿತ್ ಶಾ ಹಾಕಿಕೊಂಡಿದ್ದಾರೆ. ಹೀಗಾಗಿ ಈಗ ತಾವೇ ಪ್ರಚಾರ, ಪಕ್ಷ ಸಂಘಟನೆಯ ಅಖಾಡಕ್ಕೆ ಇಳಿದಿದ್ದಾರೆ. ಆರು ಕೇಂದ್ರ ಸಚಿವರಿಗೂ ಪಶ್ಚಿಮ ಬಂಗಾಳದ ತಲಾ 5 ಲೋಕಸಭಾ ಕ್ಷೇತ್ರಗಳ ಉಸ್ತುವಾರಿ ಹೊಣೆಗಾರಿಕೆ ನೀಡಲಾಗಿದೆ. ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಪಕ್ಷ ಸಂಘಟನೆಯ ಹೊಣೆಯನ್ನು ಕೇಂದ್ರ ಸಚಿವರಿಗೆ ಬಿಜೆಪಿ ನೀಡಿದೆ.

ಪಶ್ಚಿಮ ಬಂಗಾಳದ ಪ್ರಧಾನ ಕಾರ್ಯದರ್ಶಿ, ಡಿಜಿಪಿಗೆ ಕೇಂದ್ರದಿಂದ ಸಮನ್ಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ