ಮುಂಬೈ: ಟಾರ್ಡಿಯೋದ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ; ಏಳು ಜನರ ದುರ್ಮರಣ

ಮುಂಬೈನ 20 ಅಂತಸ್ತಿನ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪ್ರಸ್ತುತ ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಏಳು ಜನರು ಮೃತಪಟ್ಟಿದ್ದು, ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮುಂಬೈ: ಟಾರ್ಡಿಯೋದ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ; ಏಳು ಜನರ ದುರ್ಮರಣ
20 ಅಂತಸ್ತಿನ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ (Credits: ANI/ Twitter)
Follow us
TV9 Web
| Updated By: shivaprasad.hs

Updated on:Jan 22, 2022 | 11:07 AM

ಮುಂಬೈ: ನಗರದ ಟಾರ್ಡಿಯೊದಲ್ಲಿನ (Tardeo) ನಾನಾ ಚೌಕ್‌ನಲ್ಲಿರುವ ಕಮಲಾ ಬಿಲ್ಡಿಂಗ್‌ನಲ್ಲಿ (Kamala Building) ಶನಿವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. 20 ಅಂತಸ್ತಿನ ದೊಡ್ಡ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಇತರ ಸಿಬ್ಬಂದಿಗಳು ಆಗಮಿಸಿ ಪರಿಹಾರ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಘಟನೆಯಲ್ಲಿ ಪ್ರಸ್ತುತ ಲಭ್ಯವಾಗಿರುವ ಮಾಹಿತಿಯಂತೆ, ಏಳು ಜನರು ಮೃತಪಟ್ಟಿದ್ದಾರೆ. 20 ಅಂತಸ್ತಿನ ಕಟ್ಟಡದ 18ನೇ ಮಹಡಿಯಲ್ಲಿ 3ನೇ ಹಂತದ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ಇಲಾಖೆಯ ಪ್ರಕಾರ, 7.28 ಕ್ಕೆ ಘಟನೆ ವರದಿಯಾಗಿದೆ ಮತ್ತು 8.10 ಕ್ಕೆ ‘ಹಂತ 3’ ಎಂದು ಘೋಷಿಸಲಾಯಿತು.

ಬೆಂಕಿಯನ್ನು ನಿಯಂತ್ರಿಸಲು 13 ಅಗ್ನಿಶಾಮಕ ವಾಹನಗಳು ಮತ್ತು ಏಳು ಜಂಬೋ ಟ್ಯಾಂಕರ್‌ಗಳನ್ನು ನಿಯೋಜಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ಗಾಯಾಳುಗಳನ್ನು ಸಮೀಪದ ಭಾಟಿಯಾ ಮತ್ತು ನಾಯರ್ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಪ್ರಸ್ತುತ ಘಟನಾ ಸ್ಥಳದಲ್ಲಿ 5 ಆಂಬುಲೆನ್ಸ್​​ ಸೇವೆ ಒದಗಿಸಲಾಗಿದೆ ಎಂದು ಎಎನ್​ಐ ತಿಳಿಸಿದೆ.

ಘಟನೆಯಲ್ಲಿ ಒಟ್ಟು 7 ಜನರು ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ. ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಘಟನೆಯ ಕುರಿತು ಎಎನ್​ಐ ಟ್ವೀಟ್ ಇಲ್ಲಿದೆ:

ಇದನ್ನೂ ಓದಿ:

ನಾನು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ ಎಂದ ಪ್ರಿಯಾಂಕಾ ಗಾಂಧಿ; ಉಲ್ಟಾ ಹೊಡೆದಿದ್ದು ಯಾಕೆ?

ಕೋಲಾರ: ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ ಇಬ್ಬರ ದುರ್ಮರಣ; ತಿರುಪತಿಯಿಂದ ವಾಪಸಾಗುವಾಗ ಘಟನೆ

Published On - 9:29 am, Sat, 22 January 22

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್