ಏರ್​ಇಂಡಿಯಾ ವಿಮಾನದಿಂದ ಕೆಳಗೆ ಹಾರುತ್ತೇನೆ ಎಂದು ಬೆದರಿಕೆಯೊಡ್ಡಿದ್ದ ವ್ಯಕ್ತಿಯ ಬಂಧನ

|

Updated on: May 12, 2024 | 8:20 AM

ಏರ್​ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ವಿಮಾನದಿಂದ ಕೆಳಗೆ ಹಾರುವುದಾಗಿ ಬೆದರಿಕೆಯೊಡ್ಡಿರುವ ಘಟನೆ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೆ ವಿಮಾನ ಸಿಬ್ಬಂದಿ ಜತೆಗೂ ಅನುಚಿತವಾಗಿ ವರ್ತಿಸಿದ್ದು ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಏರ್​ಇಂಡಿಯಾ ವಿಮಾನದಿಂದ ಕೆಳಗೆ ಹಾರುತ್ತೇನೆ ಎಂದು ಬೆದರಿಕೆಯೊಡ್ಡಿದ್ದ ವ್ಯಕ್ತಿಯ ಬಂಧನ
ಏರ್​ ಇಂಡಿಯಾ
Follow us on

ದುಬೈನಿಂದ ಮಂಗಳೂರಿಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನ(Air India Flight)ದಲ್ಲಿ ಪ್ರಯಾಣಿಕರೊಬ್ಬರು ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ ವಿಮಾನದಿಂದ ಕೆಳಗೆ ಹಾರುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಭದ್ರತಾ ಸಂಯೋಜಕ ಸಿದ್ದಾರ್ಥ ದಾಸ್ ಅವರು ಪ್ರಯಾಣಿಕರ ವಿರುದ್ಧ ದೂರು ದಾಖಲಿಸಿದ್ದಾರೆ, ನಂತರ ವಿಮಾನವು ಮಂಗಳೂರಿಗೆ ಬಂದ ನಂತರ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದಾರೆ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಲಾಯಿತು.

ಕೇರಳದ ಕಣ್ಣೂರಿನವರಾದ ಮುಹಮ್ಮದ್ ಬಿ.ಸಿ ಎಂದು ಗುರುತಿಸಲಾದ ವ್ಯಕ್ತಿ ಮೇ 8 ರಂದು ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

ಅವರು ವಿಮಾನದಲ್ಲಿ ಅಶಿಸ್ತಿನಿಂದ ವರ್ತಿಸಿದ್ದಾರೆ, ವಿಮಾನದ ಸಮಯದಲ್ಲಿ ಗಲಭೆ ಸೃಷ್ಟಿಸಿದರು ಜತೆಗೆ ಬೇರೆಯವರಿಗೂ ಅನನುಕೂಲತೆಯುಂಟು ಮಾಡಿದರು.

ವಿಮಾನದಿಂದ ಕೆಳಗೆ ಹಾರುವ ಬೆದರಿಕೆ ಕೂಡ ಹಾಕಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಮಾನವು ಮಂಗಳೂರಿಗೆ ಬಂದಿಳಿದ ನಂತರ ಆತನನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಬಂಧಿಸಿ, ಅಗತ್ಯ ಕಾನೂನು ಕ್ರಮಕ್ಕಾಗಿ ಔಪಚಾರಿಕ ದೂರಿನ ಜೊತೆಗೆ ಬಜ್ಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದರು. ನಂತರ, ಪ್ರಕರಣವನ್ನು ದಾಖಲಿಸಿ, ಬಂಧಿಸಲಾಯಿತು ಎಂದು ಅಧಿಕಾರಿ ಹೇಳಿದರು.

ಮತ್ತಷ್ಟು ಓದಿ: Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

ವಿಮಾನದಲ್ಲಿ ಇಂತಹ ಹಲವು ಘಟನೆಗಳು ನಡೆಯುತ್ತಲೇ ಇರುತ್ತವೆ, ಕಳೆದ ವರ್ಷ ಪ್ರಯಾಣಿಕರೊಬ್ಬರು ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದು, ವಿಮಾನದ ಶೌಚಾಲಯದಲ್ಲಿ ಕುಳಿತು ಸಿಗರೇಟ್​ ಸೇದಿದ್ದು, ಅತಿಯಾದ ಮದ್ಯಪಾನ ಮಾಡಿ ಸಿಬ್ಬಂದಿ ಜತೆ ಜಗಳವಾಡಿದ್ದು ಹೀಗೆ ಹಲವಾರು ಘಟನೆಗಳು ನಿತ್ಯ ನಡೆಯುತ್ತಲೇ ಇರುತ್ತವೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ