AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitish Kumar ಬಿಹಾರ ಸಿಎಂ ನಿತೀಶ್ ಕುಮಾರ್ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿ ಪೊಲೀಸರ ವಶಕ್ಕೆ

ಪಾಟ್ನಾ ಜಿಲ್ಲೆಯ ಭಕ್ತಿಯಾರ್‌ಪುರ ಬ್ಲಾಕ್‌ನಲ್ಲಿ ನಿತೀಶ್ ಕುಮಾರ್ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

Nitish Kumar ಬಿಹಾರ ಸಿಎಂ ನಿತೀಶ್ ಕುಮಾರ್ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿ ಪೊಲೀಸರ ವಶಕ್ಕೆ
ನಿತೀಶ್ ಕುಮಾರ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Mar 27, 2022 | 8:46 PM

ಭಾನುವಾರ ಬಿಹಾರದ  (Bihar) ಮುಖ್ಯಮಂತ್ರಿ ನಿತೀಶ್ ಕುಮಾರ್  (Nitish Kumar) ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪದ ಮೇಲೆ  ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಪಾಟ್ನಾ ಜಿಲ್ಲೆಯ ಭಕ್ತಿಯಾರ್‌ಪುರ (Bakhtiyarpur) ಬ್ಲಾಕ್‌ನಲ್ಲಿ ನಿತೀಶ್ ಕುಮಾರ್ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.  ಇದೀಗ ಯುವಕ ಬಂಧನದಲ್ಲಿದ್ದಾನೆ. ನಿತೀಶ್ ಕುಮಾರ್ ವಿಗ್ರಹಕ್ಕೆ ಮಾಲಾರ್ಪಣೆ ಮಾಡಲು ವೇದಿಕೆಯಲ್ಲಿದ್ದಾಗ ಅವರ ಮೇಲೆ ಹಲ್ಲೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವ ವಿಡಿಯೊದಲ್ಲಿ ಹಲ್ಲೆ ನಡೆಸುತ್ತಿರುವ ದೃಶ್ಯ ಕಾಣಬಹುದು. ಘಟನೆಯ ನಂತರ, ಭದ್ರತಾ ಸಿಬ್ಬಂದಿ ತಕ್ಷಣ ವ್ಯಕ್ತಿಯನ್ನು ಹಿಡಿದು ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಆತನನ್ನು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.  ಸ್ಥಳೀಯ ಸಫರ್ ಆಸ್ಪತ್ರೆ ಸಂಕೀರ್ಣದಲ್ಲಿರುವ ರಾಜ್ಯದ ಖ್ಯಾತ ಸ್ವಾತಂತ್ರ್ಯ ಹೋರಾಟಗಾರ ಶಿಲಭದ್ರ ಯಾಜಿ ಅವರ ಪ್ರತಿಮೆಗೆ ನಿತೀಶ್ ಕುಮಾರ್ ಮಾಲಾರ್ಪಣೆ ಮಾಡಲಿರುವಾಗ ದಾಳಿ ನಡೆದಿರುವುದನ್ನು ಸಿಸಿಟಿವಿ ಕ್ಯಾಮೆರಾಗಳ ದೃಶ್ಯದಲ್ಲಿ ಕಾಣಬಹುದು. ಹಿಂದಿನಿಂದ ಬಂದ ವ್ಯಕ್ತಿ ವೇಗವಾಗಿ ವೇದಿಕೆಯ ಮೇಲೆ ಏರುತ್ತಿರುವುದು ಕಾಣುತ್ತದೆ. ನಿತೀಶ್ ಕುಮಾರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲು ಬಾಗಿದಾಗ ಆ ವ್ಯಕ್ತಿ ಕುಮಾರ್ ಮೇಲೆ ಹಲ್ಲೆ ಮಾಡಿದ್ದಾರೆ. ತಕ್ಷಣ ಅವರನ್ನು ಮುಖ್ಯಮಂತ್ರಿಯವರ ಭದ್ರತಾ ಸಿಬ್ಬಂದಿ ಎಳೆದೊಯ್ದರು. “ಅವನನ್ನು ಹೊಡೆಯಬೇಡಿ. ಅವನು ಏನು ಹೇಳುತ್ತಿದ್ದಾನೆ ಎಂಬುದನ್ನು ಮೊದಲು ಕಂಡುಹಿಡಿಯಿರಿ” ಎಂದು ಮುಖ್ಯಮಂತ್ರಿಗಳು ತಮ್ಮ ಭದ್ರತಾ ಸಿಬ್ಬಂದಿಗೆ ಹೇಳಿದರು ಎಂದು ಮೂಲಗಳು ತಿಳಿಸಿವೆ. ಹಲ್ಲೆ ನಡೆಸಿದ ವ್ಯಕ್ತಿಯನ್ನು ನಂತರ ಶಂಕರ್ ಸಾಹ್ ಎಂದು ಗುರುತಿಸಲಾಗಿದೆ.

ಇಂತಹ ಘಟನೆ ಇದೇ ಮೊದಲಲ್ಲ. ನವೆಂಬರ್ 2020 ರಲ್ಲಿ ಮಧುಬನಿ ಜಿಲ್ಲೆಯ ಹರ್ಲಾಖಿಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ನಿತೀಶ್ ಕುಮಾರ್ ಕಡೆಗೆ ಈರುಳ್ಳಿ ಎಸೆಯಲಾಯಿತು. ಆರಂಭದಲ್ಲಿ ದಿಗ್ಭ್ರಮೆಗೊಂಡ ಅವರು ಅಂಥಾ ಸಮಯದಲ್ಲಿ ತಮ್ಮ ಸಮಾಧಾನ ಕಾಯ್ದುಕೊಂಡರು ಮತ್ತು ಭದ್ರತಾ ಸಿಬ್ಬಂದಿ ಸಿಎಂ ಸುತ್ತಲೂ ಕವಚವನ್ನು ರಚಿಸಿದಾಗಲೂ “ಖೂಬ್ ಫೆಂಕೋ-ಖೂಬ್ ಫೆಂಕೋ” (ಹೆಚ್ಚು ಎಸೆಯಿರಿ) ಎಂದು ಹೇಳಿದರು. ನಂತರ ಅವರು “ಅವನತ್ತ ಗಮನ ಹರಿಸಬೇಡಿ” ಎಂದು ಹೇಳುವ ಮೂಲಕ ಅಪರಾಧಿಯನ್ನು ಪಕ್ಕಕ್ಕೆ ಬಿಡಲು ಭದ್ರತಾ ಸಿಬ್ಬಂದಿಯನ್ನು ಕೇಳಿದರು.

ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿಗಳು ತಮ್ಮ ಹಳೆಯ ಲೋಕಸಭಾ ಕ್ಷೇತ್ರವಾದ ಬರ್ಹ್‌ನ ವಿವಿಧ ಭಾಗಗಳಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಕುಮಾರ್ ಅವರು 1989 ರಿಂದ 1999 ರವರೆಗೆ ಬಾರ್ಹ್‌ನಿಂದ ಐದು ಬಾರಿ ಆಯ್ಕೆಯಾದರು.

ಇದನ್ನೂ ಓದಿ:ಬಿರ್ಭೂಮ್ ಹತ್ಯೆಯ ಹಿಂದೆ ಪಿತೂರಿ, ಬಿಜೆಪಿ ಆದೇಶವನ್ನು ಸಿಬಿಐ ಅನುಸರಿಸಿದರೆ ಪ್ರತಿಭಟನೆ: ಮಮತಾ ಎಚ್ಚರಿಕೆ

Published On - 8:16 pm, Sun, 27 March 22

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್