ಆಸ್ತಿಗಾಗಿ.. ಅಪ್ಪನ ಸಾವಿಗೆ ಕಾರಣನಾದ ಅಣ್ಣನನ್ನು ಕತ್ತು ಹಿಸುಕಿ ಕೊಲೆ ಮಾಡಿದ ತಮ್ಮ
ಆಸ್ತಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ಸಂಜಯ್ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ತಂದೆ ಸಾವಿಗೀಡಾಗಿದ್ದಾರೆ. ಈ ಘಟನೆಯಿಂದ ಕುಪಿತನಾದ ಬಾಬು ಸೇಡು ತೀರಿಸಿಕೊಳ್ಳುವ ಸಲುವಾಗಿ ತನ್ನ ಸಹಚರರೊಂದಿಗೆ ಸೇರಿ ಅಣ್ಣನ ಕತ್ತು ಹಿಸುಕಿ ಕೊಲೆಗೈದಿದ್ದಾನೆ.
ಲಕ್ನೋ: ತಂದೆಯ ಸಾವಿಗೆ ಕಾರಣನಾದ ಅಣ್ಣನನ್ನು ಆತನ ತಮ್ಮನೇ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ. ಸಂಜಯ್ (34) ಎಂಬುವವನ ನಗ್ನ ದೇಹ ಜಹಾಂಗೀರ್ಪುರದ ಬಳಿ ಪತ್ತೆಯಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸಿದಾಗ ಆತನ ತಮ್ಮ ಬಾಬು ಈ ಕೃತ್ಯ ನಡೆಸಿದ್ದಾನೆ ಎನ್ನುವುದು ತಿಳಿದುಬಂದಿದೆ.
ಬಾಬು ಮತ್ತು ಸಂಜಯ್ ಸಹೋದರರಾಗಿದ್ದು, ಕಳೆದ ವಾರ ಆಸ್ತಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ಸಂಜಯ್ ತನ್ನ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ತಂದೆ ಸಾವಿಗೀಡಾಗಿದ್ದಾರೆ. ಈ ಘಟನೆಯಿಂದ ಕುಪಿತನಾದ ಬಾಬು ಸೇಡು ತೀರಿಸಿಕೊಳ್ಳುವ ಸಲುವಾಗಿ ತನ್ನ ಸಹಚರರೊಂದಿಗೆ ಸೇರಿ ಅಣ್ಣನ ಕತ್ತು ಹಿಸುಕಿ ಕೊಲೆಗೈದಿದ್ದಾನೆ.
ಸಹೋದರರನ್ನು ಕೊಲೆ ಮಾಡಿದ್ದಾಗಿ ಬಾಬು ಒಪ್ಪಿಕೊಂಡಿದ್ದು, ತನ್ನ ತಂದೆಯ ಸಾವಿಗೆ ಸೇಡು ತೀರಿಸಿಕೊಳ್ಳಲು ಹೀಗೆ ಮಾಡಿದೆ ಎಂದಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಾಬು ಮತ್ತು ರವೀಂದರ್ ಇಬ್ಬರನ್ನೂ ಬಂಧಿಸಿದ್ದಾರೆ. ಆದರೆ, ಕೊಲೆಯಲ್ಲಿ ಭಾಗಿಯಾದ ಲೋಕೇಂದ್ರ ಮತ್ತು ದೀಪು ಎಂಬ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ.