ಸಂಸತ್ ಭವನದ ಮುಂದೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ

|

Updated on: Dec 25, 2024 | 4:47 PM

ದೆಹಲಿಯ ಸಂಸತ್ ಭವನದ ಬಳಿ ಇರುವ ರೈಲು ಭವನದ ಹೊರಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಆತನನ್ನು ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವ ಕಾರಣಕ್ಕೆ ಈ ವ್ಯಕ್ತಿ ಬೆಂಕಿ ಹಚ್ಚಿಕೊಂಡಿದ್ದಾನೆ ಎಂಬ ಬಗ್ಗೆ ಇನ್ನು ಮಾಹಿತಿ ಸಿಕ್ಕಿಲ್ಲ. ಸಂಸತ್​​​ನಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿರುವ ವೇಳೆ ಇಂತಹ ಘಟನೆ ನಡೆದಿದೆ. ಇದೀಗ ಈ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಸತ್ ಭವನದ ಮುಂದೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ
ಸಂಸತ್
Follow us on

ದೆಹಲಿ, ಡಿ.25: ದೆಹಲಿಯ ಸಂಸತ್ ಭವನದ ಬಳಿ ಇರುವ ರೈಲು ಭವನದ ಹೊರಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಆತನನ್ನು ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ವ್ಯಕ್ತಿಯ ದೇಹದ ಮೇಲೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ವ್ಯಕ್ತಿಯ ಬಗ್ಗೆ ಹೆಚ್ಚಿನ ವಿವರಗಳು ಸಿಕ್ಕಿಲ್ಲ. ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಜತೆಗೆ ಆ ವ್ಯಕ್ತಿ ಸಂಸತ್​​ ಮುಂದೆ ಬಂದು ಬೆಂಕಿ ಹಚ್ಚಿಕೊಳ್ಳಲು ಕಾರಣ ಏನು ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

ಮೂಲಗಳ ಪ್ರಕಾರ, ಈ ವ್ಯಕ್ತಿ ಸಂಸತ್ತಿನ ಮುಂಭಾಗದಲ್ಲಿರುವ ಉದ್ಯಾನವನದಲ್ಲಿ ಬೆಂಕಿ ಹಚ್ಚಿಕೊಂಡು ನಂತರ ಸಂಸತ್ತಿನ ಮುಖ್ಯ ದ್ವಾರದ ಕಡೆಗೆ ಹೋಗಿದ್ದಾನೆ. ಈ ವ್ಯಕ್ತಿಯ ದೇಹದ 90 ರಷ್ಟು ಭಾಗ ಸುಟ್ಟ ಗಾಯಗಳಾಗಿವೆ. ತಕ್ಷಣ ಸಂಸತ್ತಿನ ಮುಂಭಾಗದಲ್ಲಿ ಪೊಲೀಸರು ಆತನನ್ನು ನಗರದ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈಗ ಆತನ ಸ್ಥಿತಿ ತುಂಬಾ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಟ್ರೋಲ್ ತರಹದ ವಸ್ತುವನ್ನು ಬಳಸಿಕೊಂಡ ಬೆಂಕಿ ಹಚ್ಚಿಕೊಂಡಿದ್ದಾನೆ.

ಇದನ್ನೂ ಓದಿ: ನಿತೀಶ್ ಕುಮಾರ್, ನವೀನ್ ಪಟ್ನಾಯಕ್​ಗೆ ಭಾರತ ರತ್ನ ನೀಡಬೇಕು; ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಒತ್ತಾಯ

ಇನ್ನು ಪೊಲೀಸರು ತನಿಖೆ ಶುರು ಮಾಡಿದ್ದು, ರೈಲ್ವೆ ಭವನ ಮತ್ತು ಸಂಸತ್ತಿನ ಹೊರಗಿನ ಸಿಸಿಟಿವಿ ದೃಶ್ಯಾವಳಿವನ್ನು ಪಡೆದುಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 4:34 pm, Wed, 25 December 24