ಸಾಲ ಹಿಂದಿರುಗಿಸಿದ್ರೂ, ಹೆಚ್ಚಿನ ಬಡ್ಡಿ ನೀಡುವಂತೆ ದಲಿತ ಮಹಿಳೆಗೆ ಥಳಿಸಿ, ಬಾಯಿಗೆ ಮೂತ್ರ ಮಾಡಿದ ವ್ಯಕ್ತಿ

ಸಾಲ ನೀಡಿದ ವ್ಯಕ್ತಿಗೆ ಹಣವನ್ನು ಹಿಂದಿರುಗಿಸಿದ್ರೂ ಮಹಿಳೆಗೆ ಹೆಚ್ಚಿನ ಬಡ್ಡಿ ನೀಡುವಂತೆ ಒತ್ತಾಯಿಸಿದ್ದಾರೆ. ಆದರೆ ಇದಕ್ಕೆ ಮಹಿಳೆ ನಿರಕಾರಿಸಿದ್ದು, ಇದರಿಂದ ಕೋಪಗೊಂಡ ಸಾಲ ನೀಡಿದ ವ್ಯಕ್ತಿ ಮಹಿಳೆಗೆ ಕ್ರೂರವಾಗಿ ಹಲ್ಲೆ ಮಾಡಿ, ವಿವಸ್ತ್ರಗೊಳಿಸಿದ್ದಾನೆ.

ಸಾಲ ಹಿಂದಿರುಗಿಸಿದ್ರೂ, ಹೆಚ್ಚಿನ ಬಡ್ಡಿ ನೀಡುವಂತೆ ದಲಿತ ಮಹಿಳೆಗೆ ಥಳಿಸಿ, ಬಾಯಿಗೆ ಮೂತ್ರ ಮಾಡಿದ ವ್ಯಕ್ತಿ
ಮಹಿಳೆಗೆ ಹಲ್ಲೆ
Follow us
ಅಕ್ಷಯ್​ ಪಲ್ಲಮಜಲು​​
|

Updated on:Sep 26, 2023 | 10:22 AM

ಪಾಟ್ನಾ, ಸೆ.25: ಸಾಲ ಹಿಂದಿರುಗಿಸಿದ್ರೂ, ಹೆಚ್ಚಿನ ಬಡ್ಡಿ ನೀಡವಂತೆ ಒತ್ತಾಯಿಸಿ ದಲಿತ ಮಹಿಳೆ ಮೇಲೆ ಹಲ್ಲೆ ಮಾಡಿ, ಮೂತ್ರ ವಿಸರ್ಜನೆ ಮಾಡಿರುವ ಘಟನೆ ಬಿಹಾರದ (Bihar) ಪಾಟ್ನಾ ಜಿಲ್ಲೆಯ ಮೋಸಿಂಪುರ ಗ್ರಾಮದಲ್ಲಿ ನಡೆದಿದೆ. ಸಾಲ ನೀಡಿದ ವ್ಯಕ್ತಿಗೆ ಹಣವನ್ನು ಹಿಂದಿರುಗಿಸಿದ್ರೂ ಮಹಿಳೆಗೆ ಹೆಚ್ಚಿನ ಬಡ್ಡಿ ನೀಡುವಂತೆ ಒತ್ತಾಯಿಸಿದ್ದಾರೆ. ಆದರೆ ಇದಕ್ಕೆ ಮಹಿಳೆ ನಿರಕಾರಿಸಿದ್ದು, ಇದರಿಂದ ಕೋಪಗೊಂಡ ಸಾಲ ನೀಡಿದ ವ್ಯಕ್ತಿ ಮಹಿಳೆಗೆ ಕ್ರೂರವಾಗಿ ಹಲ್ಲೆ ಮಾಡಿ, ವಿವಸ್ತ್ರಗೊಳಿಸಿದ್ದಾನೆ ಎಂದು ಹೇಳಲಾಗಿದೆ.

ಇನ್ನು ಸಾಲ ನೀಡಿದ ವ್ಯಕ್ತಿಯ ಮಗ ಮಹಿಳೆಯ ಬಾಯಿಗೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಪತಿ ಪಾಟ್ನಾ ಜಿಲ್ಲೆಯ ಮೋಸಿಂಪುರ ಗ್ರಾಮದ ಪ್ರಮೋದ್ ಸಿಂಗ್ ಅವರಿಂದ ₹ 1,500 ಸಾಲ ಪಡೆದಿದ್ದರು ಎಂದು ಪೊಲೀಸರು ಹೇಳಿದ್ದಾರೆ. ದಂಪತಿಗಳು ಸಾಲ ಪಡೆದ ಹಣವನ್ನು ಬಡ್ಡಿ ಸಹಿತ ಮರುಪಾವತಿ ಮಾಡಿದ್ದರು. ಆದರೆ ಪ್ರಮೋದ್ ಸಿಂಗ್ ಹೆಚ್ಚುವರಿ ಬಡ್ಡಿ ನೀಡುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ದಂಪತಿಗಳು ಒಪ್ಪದಿದ್ದಾಗ ಪ್ರಮೋದ್ ಸಿಂಗ್​​ನ ಮಗ ಮತ್ತು ಆತ ಸಹಾಯಕರು ಹಲ್ಲೆ ಮಾಡಿದ್ದಾರೆ ಎಂದು ಪೊಲೀಸ್​​ ವರದಿ ಹೇಳಿದೆ.

ಶನಿವಾರ ರಾತ್ರಿ ಮನೆಯ ಹೊರಗೆ ನೀರು ತುಂಬಿಸುತ್ತಿರುವಾಗ ಪ್ರಮೋದ್, ಆತನ ಮಗ ಅಂಶು ಮತ್ತು ಇತರ ನಾಲ್ವರು ಪುರುಷರು ತಮ್ಮೊಂದಿಗೆ ಬರುವಂತೆ ಒತ್ತಾಯಿಸಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಗೊತ್ತಿಲ್ಲ ಎಂದು ಪಂಜಾಬ್ ಮೂಲದ ಮಹಿಳೆಗೆ ಥಳಿಸಿದ ಗುಂಪು

ಮಹಿಳೆ ನಾನು ಎಲ್ಲಿಗೂ ಬರುವುದಿಲ್ಲ ಎಂದು ಹೇಳಿದಾಗ ಆಕೆಗೆ ದೊಣ್ಣೆಯಿಂದ ಥಳಿಸಿದ್ದು, ಗ್ರಾಮದ ಹೊರಗೆ ಕರೆದುಕೊಂಡು ಹೋಗಿ ಆಕೆಯನ್ನು ವಿವಸ್ತ್ರಗೊಳಿಸಿದ್ದಾರೆ ಎಂದು ಪೊಲೀಸ್​​ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಪ್ರಮೋದ್ ಸಿಂಗ್ ತನ್ನ ಮಗ ಅಂಶುಗೆ ಮಹಿಳೆಯ ಬಾಯಿಗೆ ಮೂತ್ರ ಮಾಡು ಎಂದು ಹೇಳಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ನಂತರ ಮಹಿಳೆ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಬಂದಿದ್ದಾಳೆ. ಇನ್ನು ಈಕೆ ಬೆತ್ತಲೆಯಾಗಿ ಓಡಿಕೊಂಡು ಬರುವುದನ್ನು ಗ್ರಾಮಸ್ಥರು ನೋಡಿದ್ದಾರೆ. ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿದ್ದು, ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:42 am, Mon, 25 September 23

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ