ದೆಹಲಿ ಮೆಟ್ರೋ ರೈಲಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸ್ಖಲನ ಮಾಡಿದ ವ್ಯಕ್ತಿ
ವ್ಯಕ್ತಿಯೊಬ್ಬ ಮೆಟ್ರೋ ರೈಲಿನಲ್ಲಿ ಹಸ್ತಮೈಥುನ ಮಾಡಿ ಅಪ್ರಾಪ್ತ ಬಾಲಕಿಯ ಮೇಲೆ ಸ್ಖಲನ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ದೆಹಲಿ, ಆ.31: ವ್ಯಕ್ತಿಯೊಬ್ಬ ಮೆಟ್ರೋ ರೈಲಿನಲ್ಲಿ ಹಸ್ತಮೈಥುನ ಮಾಡಿ ಅಪ್ರಾಪ್ತ ಬಾಲಕಿಯ ಮೇಲೆ ಸ್ಖಲನ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ದೆಹಲಿ ಮೆಟ್ರೋದ ‘ರೆಡ್ ಲೈನ್ನಲ್ಲಿ ಬುಧವಾರ ರಾತ್ರಿ 8:30ರ ಸುಮಾರಿಗೆ ಈ ಘಟನೆ ನಡೆದಿದೆ. ರಕ್ಷಾಬಂಧನ ಹಬ್ಬದ ನಿಮಿತ್ತ ರೈಲಿನಲ್ಲಿ ಕಿಕ್ಕಿರಿದು ಜನ ತುಂಬಿತ್ತು.
ಇದೇ ಕೋಚ್‌ನಲ್ಲಿ ತಾಯಿ ಮತ್ತು ಮಗಳ ಪ್ರಯಾಣಸುತ್ತಿದ್ದರು. ಈ ವೇಳೆ ವ್ಯಕ್ತಿಯೊಬ್ಬ ತನ್ನ ಮಗಳ ಮೇಲೆ ಸ್ಖಲನ ಮಾಡಿರುವುದನ್ನು ತಾಯಿ ನೋಡಿ, ತಕ್ಷಣ ಮಗಳನ್ನು ಕೆರೆದುಕೊಂಡು ಸೀಲಂಪುರ ನಿಲ್ದಾಣದಲ್ಲಿ ಇಳಿದಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಟವೆಲ್ ಸುತ್ತಿಕೊಂಡೇ ದೆಹಲಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಯುವಕ; ವಿಡಿಯೋ ವೈರಲ್
ಸ್ಖಲನ ಮಾಡಿರುವ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದವರು ಎಂದು ಗುರುತಿಸಲಾಗಿದೆ. ಈ ಘಟನೆಯನ್ನು ಗಮನಿಸಿದ ಇಬ್ಬರು ಸಹ ಪ್ರಯಾಣಿಕರು ಆ ವ್ಯಕ್ತಿಯನ್ನು ಹಿಡಿದು ಶಾಹದಾರ ನಿಲ್ದಾಣದಲ್ಲಿರುವ ದೆಹಲಿ ಮೆಟ್ರೋ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ನಂತರ ಈ ಆರೋಪಿಯನ್ನು ಮೆಟ್ರೋ ಅಧಿಕಾರಿಗಳು ದೆಹಲಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:09 am, Thu, 31 August 23