West bengal: ಟಿಎಂಸಿ ವಿರುದ್ಧ ಟೀಕಾ ಪ್ರಹಾರದ ನಡುವೆಯೇ ಪಶ್ಚಿಮ ಬಂಗಾಳದ ಬಿಜೆಪಿಯಲ್ಲಿ ಭಿನ್ನಮತ?

Suvendu Adhikari: 'ತೃಣಮೂಲ ಕಾಂಗ್ರೆಸ್ ಪಕ್ಷವು ಪ್ರತಿಪಕ್ಷ-ಮುಕ್ತ ರಾಜ್ಯವನ್ನು ಬಯಸಿದೆ" ಎಂದು ಘೋಷ್ ಆರೋಪಿಸಿದ್ದಾರೆ. ಮತದಾನದ ನಂತರದ ಹಿಂಸಾಚಾರದ ಘಟನೆಗಳ ಬಗ್ಗೆ ಬಿಜೆಪಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿ ಮಾಡಲಿದೆ.

West bengal: ಟಿಎಂಸಿ ವಿರುದ್ಧ ಟೀಕಾ ಪ್ರಹಾರದ ನಡುವೆಯೇ ಪಶ್ಚಿಮ ಬಂಗಾಳದ ಬಿಜೆಪಿಯಲ್ಲಿ ಭಿನ್ನಮತ?
ಸುವೇಂದು ಅಧಿಕಾರಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 09, 2021 | 12:01 PM

ಕೊಲ್ಕತ್ತಾ: ವಿಧಾನಸಭಾ ಚುನಾವಣೆಯಲ್ಲಿ  ತೃಣಮೂಲ ಕಾಂಗ್ರೆಸ್ ನ ಭಾರಿ ವಿಜಯದ ನಂತರ, ಬಿಜೆಪಿಯ ಪಶ್ಚಿಮ ಬಂಗಾಳ ಘಟಕದಲ್ಲಿ ಬಿರುಕು ಮೂಡಿದೆ. 356 ನೇ ವಿಧಿ ಸೇರಿದಂತೆ ನಿರ್ಣಾಯಕ ವಿಷಯಗಳ ಬಗ್ಗೆ ನಾಯಕರು ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ದಿ ಹಿಂದೂ ಪತ್ರಿಕೆ  ವರದಿ ಮಾಡಿದೆ. ಮಂಗಳವಾರ ಪಶ್ಚಿಮ ಬಂಗಾಳ ವಿಧಾನಸಭೆಯ ಪ್ರತಿಪಕ್ಷ ನಾಯಕ  ಸುವೇಂದು ಅಧಿಕಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿಯಾದರು. “ಆರ್ಟಿಕಲ್ 356 ರ ಅಡಿಯಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ವಿಧಿಸಲು ಕೇಂದ್ರಕ್ಕೆ ಬೇಕಾಗಿರುವುದಕ್ಕಿಂತ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.  ಆದರೆ ಪಕ್ಷದ ನಾಯಕ ರಾಜೀಬ್ ಬ್ಯಾನರ್ಜಿ ಫೇಸ್ ಬುಕ್ ನಲ್ಲಿ  ಪೋಸ್ಟ್ ಮಾಡಿದ್ದು  “ಪ್ರತಿ ಹಂತದಲ್ಲೂ ದೆಹಲಿ ಮತ್ತು 356 ನೇ ವಿಧಿಯ ಭೂತವನ್ನು ತೋರಿಸುವ ಮೂಲಕ ಪಕ್ಷವು ಜನರನ್ನು ಹೆದರಿಸಲು ಪ್ರಯತ್ನಿಸಿದರೆ, ಪಶ್ಚಿಮ ಬಂಗಾಳದ ಜನರು ಅದನ್ನು ಚೆನ್ನಾಗಿ ತೆಗೆದುಕೊಳ್ಳಲಾರರು” ಎಂದು ಹೇಳಿದ್ದಾರೆ .

ಅಧಿಕಾರಿ ಮತ್ತು ಬ್ಯಾನರ್ಜಿ ಇಬ್ಬರೂ ಟಿಎಂಸಿ ಸರ್ಕಾರದಲ್ಲಿ ಸಚಿವರಾಗಿದ್ದು ವಿಧಾನಸಭಾ ಚುನಾವಣೆಗೆ ತಿಂಗಳುಗಳ ಬಾಕಿ ಇರುವಾಗ ಬಿ ಜೆಪಿಗೆ ಸೇರಿದ್ದರು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಸೋಲಿಸಿ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಸುವೇಂದು ಅಧಿಕಾರಿ ಗೆದ್ದಿದ್ದರು.

ದಿಲೀಪ್ ಘೋಷ್ ನೇತೃತ್ವದಲ್ಲಿ ರಾಜ್ಯ ಬಿಜೆಪಿ ನಾಯಕತ್ವ ಕೋಲ್ಕತ್ತಾದಲ್ಲಿ ಸಾಂಸ್ಥಿಕ ಸಭೆ ನಡೆಸಿತು. ಸಭೆಯಲ್ಲಿ ರಾಜೀಬ್ ಬ್ಯಾನರ್ಜಿ ಮತ್ತು ಪಕ್ಷದ ಉಪಾಧ್ಯಕ್ಷ ಮುಕುಲ್ ರಾಯ್ ಏಕೆ ಭಾಗವಹಿಸಲಿಲ್ಲ ಎಂದು ಘೋಷ್ ವಿವರಣೆ ನೀಡಬೇಕಾಗಿ ಬಂದಿತ್ತು. ಒಂದು ಪ್ರಮುಖ ಸಭೆಯಲ್ಲಿ ನಾಯಕರ ಅನುಪಸ್ಥಿತಿಯು ಕಳವಳಕಾರಿಯಾಗಿದೆ. ಅದೇ ವೇಳೆ  ರಾಯ್ ಮತ್ತು ಬ್ಯಾನರ್ಜಿ ಇಬ್ಬರೂ ಸಹ ಟಿಎಂಸಿಯತ್ತ ವಾಲುತ್ತಿದ್ದಾರೆ ಎಂದು ವರದಿಯಾಗಿದೆ. ಕಳೆದ ವಾರ, ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರು ನಗರದ ಆಸ್ಪತ್ರೆಗೆ ಭೇಟಿ ನೀಡಿದ ನಂತರ ರಾಯ್ ಅವರ ಹೆಂಡತಿಯ ಆರೋಗ್ಯದ ಬಗ್ಗೆ ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರಾಯ್ ಅವರನ್ನು ಕರೆ ಮಾಡಿದ್ದರು.

ಮಂಗಳವಾರ, ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ತೃಣಮೂಲವನ್ನು ಗುರಿಯಾಗಿಸುವ ಮೊದಲು ನಿಮ್ಮ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಮೊದಲು ಬಗೆ ಹರಿಸಿಕೊಳ್ಳಿ ಎಂದು ಬಿಜೆಪಿಗೆ ಹೇಳಿದ್ದರು. 356 ನೇ ವಿಧಿಯನ್ನು ವಿಧಿಸುವ ಮಾತನ್ನು ‘ಪ್ರಜಾಪ್ರಭುತ್ವ ವಿರೋಧಿ’ ಎಂದು ಟಿಎಂಸಿ ನಾಯಕತ್ವ ಹೇಳಿದೆ.

ಜೂನ್ 23 ರಿಂದ ಬೀದಿಗಿಳಿಯಲಿದೆ ಬಿಜೆಪಿ ‘ತೃಣಮೂಲ ಕಾಂಗ್ರೆಸ್ ಪಕ್ಷವು ಪ್ರತಿಪಕ್ಷ-ಮುಕ್ತ ರಾಜ್ಯವನ್ನು ಬಯಸಿದೆ” ಎಂದು ಘೋಷ್ ಆರೋಪಿಸಿದ್ದಾರೆ. ಮತದಾನದ ನಂತರದ ಹಿಂಸಾಚಾರದ ಘಟನೆಗಳ ಬಗ್ಗೆ ಬಿಜೆಪಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿ ಮಾಡಲಿದೆ. ಬಿಜೆಪಿ ನಾಯಕತ್ವ ಹಿಂಸಾಚಾರ ಮತ್ತು ಅದರಿಂದ ಪೀಡಿತರ ವಿವರಗಳನ್ನು ಮುಖ್ಯ ಕಾರ್ಯದರ್ಶಿಗೆ ಕಳುಹಿಸಿದೆ ಎಂದರು. ಜೂನ್ 23 ರಿಂದ ಪಕ್ಷ ಬೀದಿಗಿಳಿಯಲಿದೆ ಎಂದು ಅವರು ಹೇಳಿದರು. ಜೂನ್ 15 ರವರೆಗೆ ಪಶ್ಚಿಮ ಬಂಗಾಳದಲ್ಲಿ ಕೊವಿಡ್ ನಿರ್ಬಂಧವಿದೆ.

ಸುವೇಂದು ಅಧಿಕಾರಿ ಮತ್ತು ಘೋಷ್ ಸೇರಿದಂತೆ ಬಿಜೆಪಿ ನಾಯಕತ್ವವು ಪರಿಹರಿಸಲು ಪ್ರಯತ್ನಿಸಿದ ಮತ್ತೊಂದು ವಿಷಯವೆಂದರೆ, ಅದರ ಚುನಾಯಿತ ಹಲವಾರು ಶಾಸಕರು ಟಿಎಂಸಿ ಜತೆ ಸಂಪರ್ಕದಲ್ಲಿದ್ದಾರೆ ಎಂಬುದನ್ನು. “ಪಕ್ಷಾಂತರ ವಿರೋಧಿ ಕಾನೂನು ಇದೆ ಮತ್ತು ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಆಗಿದ್ದಾರೆ. ಬಿಜೆಪಿಯಲ್ಲಿನ ಲೋಪಗಳನ್ನು ಹೇಳಿ ನೋಡೋಣ ಎಂದು ಸುವೇಂದು ಅಧಿಕಾರಿ ಟಿಎಂಸಿಗೆ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ:  ಚುನಾವಣೋತ್ತರ ಹಿಂಸಾಚಾರ: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್

Published On - 11:58 am, Wed, 9 June 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್