Manipur violence: ‘ಮಣಿಪುರ ಫೈಲ್ಸ್’ ಹೆಸರಿನ ಸಿನಿಮಾ ಮಾಡಬೇಕು: ಶಿವಸೇನೆ

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಪಕ್ಷದ ಮುಖ್ಯವಾಣಿಯಾಗಿರುವ "ಸಾಮ್ನಾ" ಪ್ರತಿಕೆಯ ಸಂಪಾದಕಿಯದಲ್ಲಿ ಮಣಿಪುರ ಕಾಶ್ಮೀರಕ್ಕಿಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಹಾಗಾಗಿ "ದಿ ಮಣಿಪುರ ಫೈಲ್ಸ್ ​​" ಸಿನಿಮಾ ಮಾಡಬಹುದು ಎಂದು ವರದಿ ಮಾಡಿದೆ.

Manipur violence: ‘ಮಣಿಪುರ ಫೈಲ್ಸ್’ ಹೆಸರಿನ ಸಿನಿಮಾ ಮಾಡಬೇಕು: ಶಿವಸೇನೆ
ಉದ್ಧವ್ ಠಾಕ್ರೆ
Follow us
|

Updated on:Jul 22, 2023 | 5:41 PM

ಮುಂಬೈ,ಜು.22: ಮಣಿಪುರದಲ್ಲಿ ಜನಾಂಗೀಯ ಘರ್ಷಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಇದರ ಮಧ್ಯೆ ರಾಜಕೀಯ ವಾದ-ವಿವಾದಗಳ ಮೇಲಾಟ ಹೆಚ್ಚಾಗಿದೆ.  ರಾಜ್ಯದಲ್ಲಿ ಇರುವ ಬಿಜೆಪಿ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಳ್ಳುತ್ತಿದೆ. ಇದೀಗ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಪಕ್ಷದ ಮುಖ್ಯವಾಣಿಯಾಗಿರುವ “ಸಾಮ್ನಾ” ಪ್ರತಿಕೆಯ ಸಂಪಾದಕಿಯದಲ್ಲಿ ಮಣಿಪುರ ಕಾಶ್ಮೀರಕ್ಕಿಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಹಾಗಾಗಿ “ದಿ ಮಣಿಪುರ ಫೈಲ್ಸ್ ​​” ಸಿನಿಮಾ ಮಾಡಬಹುದು ಎಂದು ವರದಿ ಮಾಡಿದೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ  ವ್ಯಕ್ತಪಡಿಸಲಾಗಿದೆ.

ಮಣಿಪುರ ಹಿಂಸಾಚಾರದ ಕುರಿತು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಎನ್​​ ಬಿರೇನ್​​ ಸಿಂಗ್ ಅವರ ವಿರುದ್ಧ ಉದ್ಧವ್ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ದೌರ್ಜನ್ಯ ಕಾಶ್ಮೀರಕ್ಕಿಂತ ಕೆಟ್ಟದಾಗಿ ಎಂದು ಹೇಳಿದ್ದಾರೆ. 2022ರಲ್ಲಿ ಆಗಸ್ಟ್​ 5ರಂದು “ಸಾಮ್ನಾ” ಪ್ರತಿಕೆಯ ಸಂಪಾದಕರಾಗಿ ಉದ್ಧವ್ ಠಾಕ್ರೆ ನೇಮಕಗೊಂಡರು. ಅವರು ಇದೀಗ ಈ ಪ್ರತಿಕೆಯ ಸಂಪಾದಕಿಯದಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಬರೆದಿದ್ದಾರೆ.

ಮೇ, 4ರಂದು ಚಿತ್ರಿಸಲಾಗಿದ್ದ, ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋವನ್ನು ಇತ್ತಿಚೇಗೆ ವೈರಲ್​ ಮಾಡಲಾಗಿತ್ತು. ಇದರಲ್ಲಿ ಪುರುಷರ ಗುಂಪೊಂದು ಇಬ್ಬರು ಸ್ತ್ರೀಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ. ಈ ಬಗ್ಗೆ ದೇಶದ್ಯಾಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ದೇಶದ ಪ್ರಧಾನಿ ಸೇರಿದಂತೆ, ಸುಪ್ರೀಂ ಕೋರ್ಟಿನ ಮುಖ್ಯನ್ಯಾಯ ಮೂರ್ತಿ ಡಿ.ವೈ ಚಂದ್ರಚೂಡ್ ಅವರು​​​ ಕೂಡ ಈ ಕೃತ್ಯವನ್ನು ಖಂಡಿಸಿದ್ದರು.

ಇದನ್ನೂ ಓದಿ: ಮಣಿಪುರ ಮಹಿಳೆಯರ ಬೆತ್ತಲೆ‌ ಮೆರವಣಿಗೆ ಪ್ರಕರಣ, ಮತ್ತೊಬ್ಬ ಆರೋಪಿಯ ಬಂಧನ

ಮಣಿಪುರದಲ್ಲಿ ನಡೆದ ಈ ಘಟನೆ ಎಲ್ಲರನ್ನೂ ತಲೆತಗ್ಗಿಸುವಂತೆ ಮಾಡಿದೆ, ಎಲ್ಲ ರಾಜ್ಯ ಸರ್ಕಾರಗಳು ಮಹಿಳೆಯ ಸುರಕ್ಷತೆ ಬಗ್ಗೆ ಎಚ್ಚರವಹಿಸಬೇಕು. ತಪ್ಪಿಸ್ಥಿರನ್ನು ಯಾವುದೇ ಕಾರಣಕ್ಕೂ ಬಿಡಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇನ್ನೂ ಈ ಸಾಮ್ನಾ ಪ್ರತಿಕೆಯಲ್ಲಿ ಇತ್ತೀಚಿನ ದಿನಗಳಲ್ಲಿ, ‘ತಾಷ್ಕೆಂಟ್ ಫೈಲ್ಸ್’, ‘ದಿ ಕೇರಳ ಸ್ಟೋರಿ’ ಮತ್ತು ‘ದಿ ಕಾಶ್ಮೀರ್ ಫೈಲ್ಸ್’ ನಂತಹ ಚಲನಚಿತ್ರಗಳನ್ನು ನಿರ್ಮಿಸಲಾಗಿದೆ. ಇದರಂತೆ ದಿ ಮಣಿಪುರ ಫೈಲ್ಸ್ ಮಾಡಬಹುದು ಎಂದು ಇದರಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:36 pm, Sat, 22 July 23

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’