AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron death in India: ಒಮಿಕ್ರಾನ್ ಸೋಂಕಿತ ವ್ಯಕ್ತಿಯ ಸಾವಿನ ಮೊದಲ ಪ್ರಕರಣ ಮುಂಬೈನಲ್ಲಿ ದಾಖಲು; ಮರಣಕ್ಕೆ ಒಮಿಕ್ರಾನ್ ಕಾರಣವಲ್ಲ ಎಂದ ಅಧಿಕಾರಿಗಳು

Mumbai: ಮುಂಬೈನಲ್ಲಿ ಒಮಿಕ್ರಾನ್ ಪಾಸಿಟಿವ್ ಆಗಿರುವ ವ್ಯಕ್ತಿ ಸಾವನ್ನಪ್ಪಿದ್ದು, ಭಾರತದಲ್ಲಿ ಮೊದಲ ಒಮಿಕ್ರಾನ್ ಸೋಂಕಿತ ಮೃತಪಟ್ಟಿರುವ ಮೊದಲ ಪ್ರಕರಣ ಇದಾಗಿದೆ. ಆರೋಗ್ಯ ಸಚಿವಾಲಯವು ಈ ಸಾವು ಒಮಿಕ್ರಾನ್ ಹೊರತಾದ ಕಾರಣಗಳಿಂದಾಗಿದೆ ಎಂದು ಸ್ಪಷ್ಟನೆ ನೀಡಿದೆ.

Omicron death in India: ಒಮಿಕ್ರಾನ್ ಸೋಂಕಿತ ವ್ಯಕ್ತಿಯ ಸಾವಿನ ಮೊದಲ ಪ್ರಕರಣ ಮುಂಬೈನಲ್ಲಿ ದಾಖಲು; ಮರಣಕ್ಕೆ ಒಮಿಕ್ರಾನ್ ಕಾರಣವಲ್ಲ ಎಂದ ಅಧಿಕಾರಿಗಳು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 31, 2021 | 11:38 AM

Share

ಮುಂಬೈ: ಭಾರತದಲ್ಲಿ ಒಮಿಕ್ರಾನ್ ಪಾಸಿಟಿವ್ ಆಗಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಮಿಕ್ರಾನ್ ಸೋಂಕಿತರೊಬ್ಬರು ನಿಧನ ಹೊಂದಿದ ಮೊದಲ ಪ್ರಕರಣ ಇದಾಗಿದೆ. ಸಾರ್ವಜನಿಕ ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ ಕೋವಿಡ್-19 ಒಮಿಕ್ರಾನ್ ರೂಪಾಂತರದ ಸೋಂಕಿಗೆ ಒಳಗಾಗಿದ್ದ 52 ವರ್ಷದ ವ್ಯಕ್ತಿಯೊಬ್ಬರು ಮಂಗಳವಾರ ಪುಣೆಯ ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಶನ್‌ನ ಯಶವಂತರಾವ್ ಚವಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.  ಆರೋಗ್ಯ ಇಲಾಖೆಯು ಆ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಅಲ್ಲದೇ ರೋಗಿಯು ಇತ್ತೀಚೆಗೆ ನೈಜೀರಿಯಾಕ್ಕೆ ಪ್ರವಾಸ ಮಾಡಿದ್ದರು. ಕಳೆದ 13 ವರ್ಷಗಳಿಂದ ಮಧುಮೇಹವನ್ನು ಹೊಂದಿದ್ದರು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಕಾರಣದಿಂದ ಇದು ‘ಒಮಿಕ್ರಾನ್​ನಿಂದ ಆಗಿರುವ ಸಾವಲ್ಲ. ಆದರೆ ಅವರಿಗೆ ಒಮಿಕ್ರಾನ್ ಪಾಸಿಟಿವ್ ಆಗಿತ್ತು ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

‘‘ರೋಗಿಯ ಸಾವು ಕೋವಿಡ್-19ನಿಂದ ಆಗಿಲ್ಲ. ಇತರ ಕಾರಣಗಳಿಂದಾಗಿದೆ. ಕಾಕತಾಳೀಯವೆಂಬಂತೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್‌ಐವಿ) ವರದಿಯು ಅವರು ಒಮಿಕ್ರಾನ್ ರೂಪಾಂತರದ ಸೋಂಕಿಗೆ ಒಳಗಾಗಿದ್ದಾರೆ ಎಂದು ಬಹಿರಂಗಪಡಿಸಿದೆ’’ ಎಂದು ಇಲಾಖೆಯ ಮಾಹಿತಿಯಲ್ಲಿ ತಿಳಿಸಲಾಗಿದೆ.

ಮುಂಬೈನಲ್ಲೇ ಹೆಚ್ಚು ಒಮಿಕ್ರಾನ್ ಪ್ರಕರಣ; ಕಠಿಣ ಕ್ರಮ ಜಾರಿ: ಮಹಾರಾಷ್ಟ್ರದಲ್ಲಿ ಒಟ್ಟು 410 ಒಮಿಕ್ರಾನ್ ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲಿ ಅತ್ಯಂತ ಹೆಚ್ಚು ಒಮಿಕ್ರಾನ್ ಪ್ರಕರಣ ಹೊಂದಿರುವ ರಾಜ್ಯವಾಗಿದೆ. ಕೊವಿಡ್​ 19 ಹಾಗೂ ಒಮಿಕ್ರಾನ್ ಪ್ರಕರಣಗಳು (Covid 19 Cases) ಮತ್ತೆ ಹೆಚ್ಚುತ್ತಿರುವ ಕಾರಣ ಮುಂಬೈ ಪೊಲೀಸರು ಡಿಸೆಂಬರ್ 30ರಂದು ಮುಂಬೈ ನಗರದಲ್ಲಿ ಸೆಕ್ಷನ್​ 144 (Section 144 in Mumbai)ಜಾರಿಗೊಳಿಸಿದ್ದರು. ಜನವರಿ 7ರವರೆಗೆ ಸೆಕ್ಷನ್​ 144 ಜಾರಿಯಲ್ಲಿ ಇರಲಿದ್ದು, ಕಠಿಣ ಕ್ರಮಗಳನ್ನು ಹೇರಲಾಗಿದೆ. ಈ ಹೊಸ ಕೊವಿಡ್​ 19 ನಿಯಂತ್ರಣ ಕ್ರಮದ ಅನ್ವಯ, ಹೊಸವರ್ಷದ ಆಚರಣೆಯನ್ನು ನಿರ್ಬಂಧಿಸಲಾಗಿದೆ. ಡಿ.30ರಿಂದ ಜನವರಿ 7ರವರೆಗೆ ಮುಂಬೈನ ಯಾವುದೇ ಹೋಟೆಲ್​, ರೆಸ್ಟೋರೆಂಟ್​, ಬಾರ್​, ಪಬ್​, ರೆಸಾರ್ಟ್​ ಮತ್ತು ಕ್ಲಬ್​​ಗಳಲ್ಲಿ ಪಾರ್ಟಿ ಮಾಡುವಂತಿಲ್ಲ. ತೆರೆದ ಅಥವಾ ಮುಚ್ಚಿದ ಪ್ರದೇಶಗಳಲ್ಲಿ ನ್ಯೂ ಇಯರ್​ ಪಾರ್ಟಿ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ನಗರ ಪೊಲೀಸ್​ ಆಯುಕ್ತರು ಸೆಕ್ಷನ್​ 144 ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಜನವರಿ 7ರವರೆಗೂ ಇದು ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಇದನ್ನೂ ಓದಿ:

ಜನವರಿ 3 ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಪ್ರಾರಂಭ; ಮಕ್ಕಳ ವ್ಯಾಕ್ಸಿನೇಷನ್‌ ಕುರಿತು ಮಾರ್ಗಸೂಚಿ ಬಿಡುಗಡೆ

ಕೊವಿಡ್ ಲಸಿಕೆಯ ಮುಂಜಾಗರೂಕತೆ ಡೋಸ್‌ ಪಡೆಯಲು ಅರ್ಹ ಹಿರಿಯ ನಾಗರಿಕರಿಗೆ ಸಂದೇಶ ಕಳಿಸಲಿದೆ ಕೇಂದ್ರ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್