AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಅಮ್ಮನಿಗಾಗಿ ಆಕ್ಸಿಜನ್​ ಸಿಲಿಂಡರ್ ತೆಗೆದುಕೊಂಡು ಹೋಗಲು ಬಿಡಿ..’; ಪೊಲೀಸರ ಎದುರು ಮೊಣಕಾಲೂರಿ ಬೇಡಿಕೊಂಡ ವ್ಯಕ್ತಿ

ನಾನು ನಿಮ್ಮ ಪಾದವನ್ನು ಮುಟ್ಟಿ ಮನವಿ ಮಾಡಿಕೊಳ್ಳುತ್ತಿದ್ದೇನೆ..ದಯವಿಟ್ಟು ನನ್ನ ಅಮ್ಮನನ್ನು ಉಳಿಸಿಕೊಡಿ ಎಂದು ಈ ವ್ಯಕ್ತಿ ಅಳುತ್ತ ಹೇಳುವುದು ವಿಡಿಯೋದಲ್ಲಿ ಕೇಳುತ್ತದೆ.

Viral Video: ‘ಅಮ್ಮನಿಗಾಗಿ ಆಕ್ಸಿಜನ್​ ಸಿಲಿಂಡರ್ ತೆಗೆದುಕೊಂಡು ಹೋಗಲು ಬಿಡಿ..’; ಪೊಲೀಸರ ಎದುರು ಮೊಣಕಾಲೂರಿ ಬೇಡಿಕೊಂಡ ವ್ಯಕ್ತಿ
ಪೊಲೀಸರಿಗೆ ನಮಸ್ಕರಿಸುತ್ತಿರವ ವ್ಯಕ್ತಿ
Lakshmi Hegde
|

Updated on:Apr 29, 2021 | 5:44 PM

Share

ಆಗ್ರಾ: ವ್ಯಕ್ತಿಯೊಬ್ಬ ಪೊಲೀಸರ ಎದುರು ಮೊಣಕಾಲೂರಿ ಕುಳಿತು, ಶಿರಬಾಗಿ ನಮಸ್ಕರಿಸಿ ಆಕ್ಸಿಜನ್​ಗಾಗಿ ಬೇಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ಇದು ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ಘಟನೆ ಎಂದು ಹೇಳಲಾಗಿದೆ. ವಿಡಿಯೋ ನೋಡಿದ ನೆಟ್ಟಿಗರು, ಇದು ಭಾರತದಲ್ಲಿನ ಕೊವಿಡ್ ಸ್ಥಿತಿ ಭೀಕರತೆಗೆ ಉದಾಹರಣೆ ಎಂದು ಹೇಳಿದ್ದಾರೆ.

ಪಿಪಿಇ ಕಿಟ್ ಧರಿಸಿದ ವ್ಯಕ್ತಿಯೊಬ್ಬ ಪೊಲೀಸರ ಎದುರು ಮೊಣಕಾಲೂರಿ ಕುಳಿತು ಕೈಮುಗಿಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಈತ ತನ್ನ ತಾಯಿಯಾಗಿ ತಂದಿದ್ದ ಆಕ್ಸಿಜನ್​ ಸಿಲಿಂಡರ್​ನ್ನು ಮುಂದೆ ತೆಗೆದುಕೊಂಡು ಹೋಗಲು ಪೊಲೀಸರು ಕೊಡದೆ ಇರುವ ಕಾರಣಕ್ಕೆ ಈತ ಹೀಗೆ ಬೇಡಿಕೊಳ್ಳುತ್ತಿದ್ದಾನೆ ಎಂದು ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ, ಉತ್ತರ ಪ್ರದೇಶದ ಪೊಲೀಸರು ಇದನ್ನು ಅಲ್ಲಗಳೆದಿದ್ದಾರೆ. ಹಾಗೇನೂ ಇಲ್ಲ, ಒಂದು ಖಾಲಿ ಸಿಲಿಂಡರ್ ತೆಗೆದುಕೊಂಡು ಹೋಗಲು ಆತ ಹೀಗೆ ಮನವಿ ಮಾಡುತ್ತಿದ್ದಾನೆ ಎಂದು ತಿಳಿಸಿದ್ದಾರೆ.

ನಾನು ನಿಮ್ಮ ಪಾದವನ್ನು ಮುಟ್ಟಿ ಮನವಿ ಮಾಡಿಕೊಳ್ಳುತ್ತಿದ್ದೇನೆ..ದಯವಿಟ್ಟು ನನ್ನ ಅಮ್ಮನನ್ನು ಉಳಿಸಿಕೊಡಿ ಎಂದು ಈ ವ್ಯಕ್ತಿ ಅಳುತ್ತ ಹೇಳುವುದು ವಿಡಿಯೋದಲ್ಲಿ ಕೇಳುತ್ತದೆ. ಹಾಗೇ ಘಟನೆ ನಡೆದಿದ್ದು ಆಗ್ರಾದ ಉಪಾಧ್ಯಾಯ ಆಸ್ಪತ್ರೆಯ ಹೊರಗೆ ಎಂದ ಹೇಳಿದೆ.

ಇನ್ನು ಈ ವಿಡಿಯೋವನ್ನಿಟ್ಟುಕೊಂಡು ಉತ್ತರ ಪ್ರದೇಶದ ಯುವ ಕಾಂಗ್ರೆಸ್ ಘಟಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ವಿರುದ್ಧ ಕೆಂಡಕಾರಿದೆ. ಇದು ನಿಜಕ್ಕೂ ನೋವು ತರುವಂಥ ಸನ್ನಿವೇಶ. ಒಬ್ಬ ವ್ಯಕ್ತಿ ತನ್ನ ಅಮ್ಮನ ರಕ್ಷಣೆಗಾಗಿ ಪೊಲೀಸರೆದುರು ಬೇಡುತ್ತಿದ್ದಾನೆ. ಅಷ್ಟಾದರೂ ಅವರು ಕರಗುತ್ತಿಲ್ಲ. ಇದು ನಿಜಕ್ಕೂ ಪೊಲೀಸರ ಅಮಾನವೀಯ ವರ್ತನೆ ಎಂದು ಹೇಳಿದೆ. ಪೊಲೀಸರು ತಮ್ಮದೇನೂ ತಪ್ಪಿಲ್ಲ ಎಂದು ವಾದಿಸುತ್ತಿದ್ದು, ವಿಡಿಯೋದ ಹಿಂದಿನ ಸತ್ಯಾಂಶ ಗೊತ್ತಾಗುತ್ತಿಲ್ಲ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸುಮಾರು 3000 ಕೊರೊನಾ ಸೋಂಕಿತರು ನಾಪತ್ತೆ: ಸಚಿವ ಆರ್. ಅಶೋಕ್

ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಗರ್ಭಿಣಿ ವೈದ್ಯೆ ಕೊರೊನಾಗೆ ಬಲಿ

Published On - 5:44 pm, Thu, 29 April 21

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ