ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ
ಪೊಲೀಸ್ ಪೇದೆಯೊಬ್ಬರು ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿನ ಪೆಟ್ರೋಲ್ ಪಂಪ್‌ನ ಗಡಿ ಗೋಡೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಶವ ಪತ್ತೆಯಾಗಿದೆ ಎಂದು ದಾರಿಹೋಕರೊಬ್ಬರು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ನವ ದೆಹಲಿ: ವಾಯುವ್ಯ ಜಿಲ್ಲೆಯಲ್ಲಿ ದೆಹಲಿ ಪೊಲೀಸ್ ಪೇದೆಯೊಬ್ಬರು ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿನ ಪೆಟ್ರೋಲ್ ಪಂಪ್‌ನ ಗಡಿ ಗೋಡೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಶವ ಪತ್ತೆಯಾಗಿದೆ ಎಂದು ದಾರಿಹೋಕರೊಬ್ಬರು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ತಂಡವು ಅಲ್ಲಿಗೆ ಭೇಟಿ ನೀಡಿದಾಗ ಸ್ಯಾಂಟ್ರೋ ಕಾರಿನ ಚಾಲಕನ ಸೀಟಿನ ಮೇಲೆ ಶವ ಬಿದ್ದಿರುವುದನ್ನು ಮತ್ತು ಅದರಿಂದ ದುರ್ವಾಸನೆ ಬರುತ್ತಿರುವುದನ್ನು ಪತ್ತೆ ಮಾಡಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ರೋಹಿಣಿ) ಪ್ರಣವ್ ತಯಾಲ್ ಹೇಳಿದ್ದಾರೆ.
ಆ ವ್ಯಕ್ತಿಯನ್ನು ನಂತರ ಕಾನ್ಸ್‌ಟೇಬಲ್ ಅಮನ್ ದೀಪ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರನ್ನು ಪ್ರಶಾಂತ್ ವಿಹಾರ್ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿತ್ತು ಮತ್ತು ಅವರು ರಜೆಯಲ್ಲಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನು ಓದಿ: ಜೈಪುರ ನ್ಯಾಯಾಲಯದ ಹೊರಗಡೆ ಸೇರಿದ್ದ ಜನರಿಂದ ಉದಯಪುರ ಟೈಲರ್ ಹಂತಕರ ಮೇಲೆ ಹಲ್ಲೆ
ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದ್ದು, ಸೆಕ್ಷನ್ 174 ಸಿಆರ್‌ಪಿಸಿ ಅಡಿಯಲ್ಲಿ ವಿಚಾರಣೆ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಅಮನದೀಪ್ ಸಿಂಗ್ ಅವರ ಮೃತದೇಹವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಕಾನ್ ಸ್ಟೇಬಲ್ ಕುಟುಂಬಸ್ಥರು ಆಗಮಿಸಿದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Published On - 5:48 pm, Sat, 2 July 22