ಸ್ವಂತ ಖರ್ಚಿನಲ್ಲಿ ಕೊವಿಡ್ ಆಸ್ಪತ್ರೆ, ಉಚಿತ ಚಿಕಿತ್ಸೆ ನೀಡಿದ ಈ ದೇವದೂತ ಯಾರು ಗೊತ್ತಾ?

ಸೂರತ್: ದೇಶಾದ್ಯಂತ ಕೊರೊನಾ ಹೆಮ್ಮಾರಿ ಜನಜೀವನವನ್ನೇ ಅಸ್ತವ್ಯಸ್ತಗೊಳಿಸಿದೆ. ಈ ಸಂಕಷ್ಟದ ಸಮಯದಲ್ಲಿ ಕೆಲ ಜನರು ಕೊರೊನಾ ವಿರುದ್ಧದ ಹೊರಾಟದಲ್ಲಿ ತಮ್ಮ ನೆರವೂ ಸಮಾಜಕ್ಕಿರಲಿ ಅಂತಾ ತಮ್ಮ ತನುಮನ ಧನದಿಂದ ಸಹಾಯ ಮಾಡುತ್ತಿದ್ದಾರೆ. ಹೀಗೆ ಬಡವರ ಪಾಲಿಗೆ ದೇವದೂತನಂತೆ ಬಂದಿರುವ ಸೂರತ್‌ನ ಖಾದರ್ ಶೇಖ್ ತಮ್ಮ ಸ್ವಂತ ಬಿಲ್ಡಿಂಗ್‌ನಲ್ಲಿಯೇ ಕೊವಿಡ್ ಆಸ್ಪತ್ರೆ ಆರಂಭಿಸಿ ಬಡ ಜನರ ನೆರವಿಗೆ ಧಾವಿಸಿದ್ದಾರೆ. ಹೌದು, ವಜ್ರಗಳ ವ್ಯಾಪಾರದ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ನಗರದಲ್ಲಿ ಕೊರೊನಾ ಮಾರಿಯ ವಿರುದ್ಧದ ಹೋರಾಟಕ್ಕೆ ರಿಯಲ್ ಎಸ್ಟೇಟ್ […]

ಸ್ವಂತ ಖರ್ಚಿನಲ್ಲಿ ಕೊವಿಡ್ ಆಸ್ಪತ್ರೆ, ಉಚಿತ ಚಿಕಿತ್ಸೆ ನೀಡಿದ ಈ ದೇವದೂತ ಯಾರು ಗೊತ್ತಾ?
Follow us
Guru
| Updated By:

Updated on:Jul 30, 2020 | 2:32 PM

ಸೂರತ್: ದೇಶಾದ್ಯಂತ ಕೊರೊನಾ ಹೆಮ್ಮಾರಿ ಜನಜೀವನವನ್ನೇ ಅಸ್ತವ್ಯಸ್ತಗೊಳಿಸಿದೆ. ಈ ಸಂಕಷ್ಟದ ಸಮಯದಲ್ಲಿ ಕೆಲ ಜನರು ಕೊರೊನಾ ವಿರುದ್ಧದ ಹೊರಾಟದಲ್ಲಿ ತಮ್ಮ ನೆರವೂ ಸಮಾಜಕ್ಕಿರಲಿ ಅಂತಾ ತಮ್ಮ ತನುಮನ ಧನದಿಂದ ಸಹಾಯ ಮಾಡುತ್ತಿದ್ದಾರೆ. ಹೀಗೆ ಬಡವರ ಪಾಲಿಗೆ ದೇವದೂತನಂತೆ ಬಂದಿರುವ ಸೂರತ್‌ನ ಖಾದರ್ ಶೇಖ್ ತಮ್ಮ ಸ್ವಂತ ಬಿಲ್ಡಿಂಗ್‌ನಲ್ಲಿಯೇ ಕೊವಿಡ್ ಆಸ್ಪತ್ರೆ ಆರಂಭಿಸಿ ಬಡ ಜನರ ನೆರವಿಗೆ ಧಾವಿಸಿದ್ದಾರೆ.

ಹೌದು, ವಜ್ರಗಳ ವ್ಯಾಪಾರದ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ನಗರದಲ್ಲಿ ಕೊರೊನಾ ಮಾರಿಯ ವಿರುದ್ಧದ ಹೋರಾಟಕ್ಕೆ ರಿಯಲ್ ಎಸ್ಟೇಟ್ ಉದ್ಯಮಿ ಖಾದರ್ ಶೇಖ್ ಮುಂದೆ ಬಂದಿದ್ದಾರೆ. ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ಖಾದರ್, ಅದಕ್ಕಾಗಿ ಲಕ್ಷಾಂತರ ರೂಪಾಯಿಗಳನ್ನ ಖರ್ಚು ಮಾಡಬೇಕಾಯಿತು. ಈ ಸಮಯದಲ್ಲಿ ಅವರಿಗೆ ನಾನೇನೋ ಶ್ರೀಮಂತ ದುಡ್ಡು ಖರ್ಚು ಮಾಡಿದೆ. ಆದ್ರೆ ಬಡವರ ಗತಿ ಏನು ಎಂಬ ಚಿಂತೆ ಕಾಡಿದೆ. ಹೀಗಾಗಿ, ಬಡ ಜನರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

ಸ್ವಂತ ಖರ್ಚಿನಲ್ಲಿ ಕೊವಿಡ್‌ ಆಸ್ಪತ್ರೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಖಾದರ್​ ಕೂಡಲೇ ತಮ್ಮ 30,000 ಚದರ ಅಡಿ ಆಫಿಸ್​ನ ಕೊವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಿದ್ದಾರೆ. ಅಲ್ಲಿ 85 ಸೋಂಕಿತರಿಗೆ ಚಿಕಿತ್ಸೆ ನೀಡಬಹುದಾಗಿದೆ. ಹಾಗೇಯೇ, ಇಲ್ಲಿ ತುರ್ತು ಚಿಕಿತ್ಸಾ ಘಟಕದ 15 ಬೆಡ್‌ಗಳು ಕೂಡಾ ಇವೆ. ಇದಕ್ಕಾಗಿ ಆಕ್ಸಿಜನ್ ವ್ಯವಸ್ಥೆ ಮಾಡಿದ್ದಾರೆ. ಅಷ್ಟೇ ಅಲ್ಲ ಕಾರ್ಯನಿರ್ವಹಿಸುವ ವೈದ್ಯರು ಮತ್ತು ಇತರೆ ಸಿಬ್ಬಂದಿಗೆ ಕೂಡಾ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಿದ್ದಾರೆ. ಜೊತೆಗೆ ಎಲ್ಲರಿಗೂ ಉಚಿತ ಊಟದ ವ್ಯವಸ್ಥೆಯನ್ನೂ ಮಾಡಿದ್ದಾರೆ.

ಇದಕ್ಕಾಗಿ, ಖಾದರ್​ ಶೇಖ್​ ಸೂರತ್ ನಗರ ಸಭೆ ಮತ್ತು ಆರೋಗ್ಯಾಧಿಕಾರಿಗಳಿಗೆ ತಮ್ಮ ಇಂಗಿತ ವ್ಯಕ್ತಪಡಿಸಿ ಅವರಿಂದ ಪರವಾನಗಿ ಪಡೆದಿದ್ದಾರೆ. ಅಷ್ಟೇ ಅಲ್ಲ ಅಗತ್ಯ ವೈದ್ಯರು ಮತ್ತು ಇತರ ಸಿಬ್ಬಂದಿಗಳನ್ನು ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ಸ್ಪಂದಿಸಿದ ನಗರ ಸಭೆ ಆಯುಕ್ತರು ಸ್ಥಳ ಪರಿಶೀಲಿಸಿ ಅಗತ್ಯ ಸಿಬ್ಬಂದಿ ಒದಗಿಸಿದ್ದಾರೆ. ಈ ಸಂಬಂಧ ವಿಶೇಷವಾಗಿ ಆಗಮಿಸಿದ್ದ ಗುಜರಾತ್ ಬಿಜೆಪಿ ಘಟಕದ ಅಧ್ಯಕ್ಷ ಸಿಪಿ ಪಾಟೀಲ್ ಕೊವಿಡ್ ಆಸ್ಪತ್ರೆಯನ್ನ ಉದ್ಘಾಟಿಸಿ ಖಾದರ್ ಶೇಖ್​ ಅವರ ಸಮಾಜ ಸೇವೆಯನ್ನ ಶ್ಲಾಘಿಸಿದ್ದಾರೆ.

Published On - 3:30 pm, Tue, 28 July 20

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ