AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಹೆಂಡತಿ, ಸೋದರಳಿಯನಿಗೆ ಗುಂಡು ಹಾರಿಸಿ, ತಾನು ಆತ್ಮಹತ್ಯೆ ಮಾಡಿಕೊಂಡ ಪುಣೆಯ ಹಿರಿಯ ಪೋಲೀಸ್ ಅಧಿಕಾರಿ

ಹೆಂಡತಿ, ಸೋದರಳಿಯ ಗುಂಡು ಹಾರಿಸಿ, ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಮಹಾರಾಷ್ಟ್ರದ ಪುಣೆ ನಗರದಲ್ಲಿ ನಡೆದಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

Maharashtra: ಹೆಂಡತಿ, ಸೋದರಳಿಯನಿಗೆ ಗುಂಡು ಹಾರಿಸಿ, ತಾನು ಆತ್ಮಹತ್ಯೆ ಮಾಡಿಕೊಂಡ ಪುಣೆಯ ಹಿರಿಯ ಪೋಲೀಸ್ ಅಧಿಕಾರಿ
ಎಸಿಪಿ ಭರತ್ ಗಾಯಕ್ವಾಡ್ ದಂಪತಿ
ಅಕ್ಷಯ್​ ಪಲ್ಲಮಜಲು​​
|

Updated on: Jul 24, 2023 | 3:48 PM

Share

ಪುಣೆ, ಜು.24: 57 ವರ್ಷದ ಸಹಾಯಕ ಪೊಲೀಸ್ ಕಮಿಷನರ್​ರೊಬ್ಬರು (ಎಸಿಪಿ) ಇಂದು (ಜು.24) ಬೆಳಿಗ್ಗೆ ತಮ್ಮ ಮನೆಯಲ್ಲೇ ಗುಂಡು ಹಾರಿಸಿಕೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆ ನಗರದಲ್ಲಿ ನಡೆದಿದೆ. ತನ್ನ ಮನೆಯಲ್ಲಿ ಗುಂಡು ಹಾರಿಸಿಕೊಂಡಿದ್ದಾರೆ. ಜತೆಗೆ ತನ್ನ ಪತ್ನಿ ಮತ್ತು ಸೋದರಳಿಯನನ್ನು ಕೂಡ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾನೇರ್ ಪ್ರದೇಶದ ಎಸಿಪಿ ಭರತ್ ಗಾಯಕ್ವಾಡ್ ಅವರ ಬಂಗಲೆಯಲ್ಲಿ ಬೆಳಗಿನ ಜಾವ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಚತುರ್ಶೃಂಗಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಭರತ್ ಗಾಯಕ್ವಾಡ್ ಅವರನ್ನು ಅಮರಾವತಿಯಲ್ಲಿ ಎಸಿಪಿಯಾಗಿ ನಿಯೋಜಿಸಲಾಗಿತ್ತು. ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಎಸಿಪಿ ಭರತ್ ಗಾಯಕ್ವಾಡ್ ಅವರು ತಮ್ಮ ಪತ್ನಿಯ ತಲೆಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನ ಸದ್ದು ಕೇಳಿದ ತಕ್ಷಣ ಅವರ ಮಗ ಮತ್ತು ಸೋದರಳಿಯ ರೂಮ್​​​ನಿಂದ ಓಡಿಬಂದಿದ್ದಾರೆ. ಮೊದಲು ರೂಮ್​​ ಬಾಗಿಲು ತೆರೆದು ಹೊರಗೆ ಬಂದ ತಮ್ಮ ಸೋದರಳಿಯನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಭರತ್ ಗಾಯಕ್ವಾಡ್ ಕೂಡ ತಮ್ಮ ತಲೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಇದನ್ನೂ ಓದಿ:ಪತ್ನಿಯನ್ನು ಕೊಲೆ ಮಾಡಿ, ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪಶುವೈದ್ಯ 

ಗುಂಡೇಟಿನಿಂದ ಸಾವನ್ನಪ್ಪಿರುವವರನ್ನು ಎಸಿಪಿ ಭರತ್ ಗಾಯಕ್ವಾಡ್ ಅವರ ಪತ್ನಿ ಮೋನಿ ಗಾಯಕ್ವಾಡ್ (44) ಮತ್ತು ಸೋದರಳಿಯ ದೀಪಕ್ (35) ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’