AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಗವಾಗಿ ಬಂದ ಟ್ರಕ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು 4 ಜನ ಸಾವು, 30 ಮಂದಿಗೆ ಗಾಯ

ಸೀತಾಪುರ ಜಿಲ್ಲೆಯ ಸಿದ್ಧೌಲಿ ಪ್ರದೇಶದಲ್ಲಿ 35 ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್-ಟ್ರಾಲಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 30 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ವೇಗವಾಗಿ ಬಂದ ಟ್ರಕ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು 4 ಜನ ಸಾವು, 30 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 15, 2022 | 10:25 AM

ಸೀತಾಪುರ: ಲಕ್ನೋ-ದೆಹಲಿ ಹೆದ್ದಾರಿಯ ಸೀತಾಪುರ ಜಿಲ್ಲೆಯ ಸಿದ್ಧೌಲಿ ಪ್ರದೇಶದಲ್ಲಿ 35 ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್-ಟ್ರಾಲಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 30 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಟ್ರ್ಯಾಕ್ಟರ್-ಟ್ರಾಲಿಯಲ್ಲಿ ಪ್ರಯಾಣಿಸುತ್ತಿದ್ದ ಜನರು ಗುರುವಾರ ಮಧ್ಯರಾತ್ರಿ 1:30 ರ ಸುಮಾರಿಗೆ ಬಾರಾಬಂಕಿ ಜಿಲ್ಲೆಯ ದೇವಾ ಷರೀಫ್ ದೇಗುಲಕ್ಕೆ ಮಗುವಿನ ಪ್ರಾಪಂಚಿಕ ಸಮಾರಂಭಕ್ಕಾಗಿ ಶಹಜಹಾನ್‌ಪುರದ ರೌಜಾ ಪ್ರದೇಶದಿಂದ ಹೋಗುತ್ತಿದ್ದರು.

ಭಾರಿ ಮಳೆಯಿಂದಾಗಿ ರಸ್ತೆ ಕಾಣುತ್ತಿರಲಿಲ್ಲ ಎಂದು ಟ್ರ್ಯಾಕ್ಟರ್ ಟ್ರಾಲಿಯನ್ನು ರಸ್ತೆ ಬದಿ ನಿಲ್ಲಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಟ್ರಕ್ ಹಿಂದಿನಿಂದ ಟ್ರಾಲಿಗೆ ಡಿಕ್ಕಿ ಹೊಡೆದಿದ್ದು, ಈ ದುರಂತಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಲಕ್ನೋದ ಕಿಂಗ್ ಜಾರ್ಜ್ ಮೆಡಿಕಲ್ ಯೂನಿವರ್ಸಿಟಿ (ಕೆಜಿಎಂಯು) ಟ್ರಾಮಾ ಸೆಂಟರ್‌ಗೆ ರವಾನಿಸಲಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಕೆಜಿಎಂಯು ವೈದ್ಯರು ತಿಳಿಸಿದ್ದಾರೆ.

ಅಪಘಾತದ ನಂತರ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ ಮತ್ತು ಕ್ರೇನ್ ಮೂಲಕ ಹಾನಿಗೊಳಗಾದ ಟ್ರಕ್ ಮತ್ತು ಟ್ರ್ಯಾಕ್ಟರ್-ಟ್ರಾಲಿಯನ್ನು ಸ್ಥಳದಿಂದ ತೆಗೆಯಲಾಗಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಗುರುತಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 10:25 am, Thu, 15 September 22

ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!