ದೌಲತಾಬಾದ್, ಜ.5: ಪಶ್ಚಿಮ ಬಂಗಾಳದ (West Bengal) ಮುರ್ಷಿಬಾದ್ನ ಶಾಲೆಯೊಂದರ ಬಳಿ ಗುರುವಾರ ಮಧ್ಯಾಹ್ನ ಊಟದ ವೇಳೆ ಬಾಂಬಾ ಸ್ಫೋಟಗೊಂಡು 2 ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಈ ಸ್ಫೋಟದಿಂದ ಅನೇಕರಿಗೆ ಗಾಯಗಳಾಗಿವೆ. ದೌಲತಾಬಾದ್ ಪೊಲೀಸ್ ಠಾಣೆ ಬಳಿ ಈ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಕ್ಲೇಸೂರ್ ರೆಹಮಾನ್ (7) ಎಂದು ಗುರುತಿಸಲಾಗಿದೆ.
ಇನ್ನು ಪೊಲೀಸರು ಹಾಗೂ ಸ್ಥಳೀಯ ಪ್ರಕಾರ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟ ಮಾಡಿ ಹೊರಗಡೆ ಬರಬೇಕಾದರೆ ಚೆಂಡಿನಂತಿರುವ ಬಾಂಬ್ ಕೈಯಲ್ಲಿ ಹಿಡಿದು, ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಈ ವೇಳೆ ರೆಹಮಾನ್ ಚೆಂಡಿನಂತಿರುವ ಬಾಂಬ್ ಗೋಡೆ ಎಸೆದಿದ್ದಾನೆ, ಈ ವೇಳೆ ಬಾಂಬ್ ಸ್ಫೋಟಗೊಂಡಿದೆ. ಈ ವೇಳೆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬಾಂಬ್ ಸ್ಫೋಟದ ಶಬ್ದ ಕೇಳಿ ಸ್ಥಳೀಯರು ಶಾಲೆಯತ್ತ ಬಂದಿದ್ದಾರೆ. ಸ್ಫೋಟದಿಂದ ಬಾಲಕ ಸಾವನ್ನಪ್ಪಿದ್ದಾನೆ. ಹಾಗೂ ಅನೇಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ. ಇನ್ನು ಬಾಲಕನ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ.
ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟ, ಒಬ್ಬರಿಗೆ ಗಾಯ
ಇನ್ನು ಪೋಷಕರು ಶಾಲಾ ಮಂಡಳಿಯ ವಿರುದ್ಧ ಆಕ್ರೋಶಗೊಂಡಿದ್ದಾರೆ. ಶಾಲೆಯಲ್ಲಿ ಬಾಂಬ್ ಹೇಗೆ ಬಂತು, ಯಾರು ತಂದ್ದದು, ಮಕ್ಕಳ ಬಗ್ಗೆ ಶಾಲಾ ಶಿಕ್ಷಕರು ಕಾಳಜಿ ವಹಿಸಬೇಕಿತ್ತು ಎಂದು ಹೇಳಿದ್ದಾರೆ. ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದು, ಗಾಯಾಳು ವಿದ್ಯಾರ್ಥಿಗಳಲ್ಲಿ ಮೂವರ ಪರಿಸ್ಥಿತಿ ಗಂಭೀರವಾಗಿದೆ.
ಶಾಲೆ ಪಕ್ಕದಲ್ಲೇ ಎಸೆದಿದ್ದ ಸಿಡಿಮದ್ದಿನ ಉಂಡೆ ಮಕ್ಕಳ ಕೈಗೆ ಸಿಕ್ಕಿದ್ದು, ಅದೃಷ್ಟವಶಾತ್ ಸಂಭಾವ್ಯ ದುರಂತ ಸ್ವಲ್ಪದರಲ್ಲೇ ತಪ್ಪಿದೆ. ತುಮಕೂರು (Tumkur) ಜಿಲ್ಲೆ ಚಿಕ್ಕನಾಯನಕನಹಳ್ಳಿ ತಾಲ್ಲೂಕಿನ ಮಾದೇನಹಳ್ಳಿಯಲ್ಲಿ ಹಂದಿ ಬೇಟೆಗೆ ಬಳಸುವ ಸಿಡಿ ಮದ್ದಿನ ಉಂಡೆಯನ್ನು (Explosive) ಶಾಲೆಯೊಂದರ ಪಕ್ಕದಲ್ಲಿ ಎಸೆಯಲಾಗಿತ್ತು. ಇದನ್ನು ಬಾಲ್ ಅಂತ ಭಾವಿಸಿದ್ದ ಬಾಲಕನೊಬ್ಬ ಎತ್ತಿಕೊಂಡು ಶಾಲೆಯತ್ತ ತೆರಳಿದ್ದ. ಬಳಿಕ ಆ ಸಿಡಿ ಮದ್ದಿನ ಉಂಡೆಯನ್ನು ಕೈಯಲ್ಲಿ ಹಿಡಿದುಕೊಂಡು ಮಕ್ಕಳು ಓಡಾಡಿದ್ದರು. ಯುವರಾಜ ಎಂಬ ಬಾಲಕನಿಗೆ ಸ್ಫೋಟಕ ಸಿಕ್ಕಿದ್ದು, ಆತ ಅದನ್ನು ಶ್ರೀನಿವಾಸ್ ಎಂಬ ಹುಡುಗನಿಗೆ ನೀಡಿದ್ದ. ಆ ಸ್ಫೋಟಕ ಉಂಡೆಯನ್ನು ಮನೆಗೆ ತೆಗೆದುಕೊಂಡು ಹೋಗಿದ್ದ ಶ್ರೀನಿವಾಸ್ ತಂದೆಗೆ ನೀಡಿದ್ದ. ಇದು ಯಾವುದೋ ಮಾಟ ಮಂತ್ರದ ಬಾಲ್ ಇರಬೇಕೆಂದು ಭಾವಿಸಿದ ಶ್ರೀನಿವಾಸ್ ತಂದೆ ಅದನ್ನು ದೂರಕ್ಕೆ ಎಸೆದಿದ್ದರು. ಶ್ರೀನಿವಾಸ್ ತಂದೆ ಎಸೆದಿದ್ದ ಬಾಲ್ ಅನ್ನು ಬೀದಿನಾಯಿಯೊಂದು ಕಚ್ಚಿದ್ದು, ಅಷ್ಟರಲ್ಲಿ ಅದು ಸ್ಫೋಟಗೊಂಡಿದೆ. ಬಾಯಿ ಛಿದ್ರಗೊಂಡು ನಾಯಿ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ. ಅದೃಷ್ಟವಶಾತ್ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ