ಗುರುಗ್ರಾಮ್​ದ ಬಳಿ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು

|

Updated on: Nov 11, 2023 | 10:02 AM

ದೆಹಲಿ-ಜೈಪುರ ಹೆದ್ದಾರಿಯ ಗುರುಗ್ರಾಮ್‌ನ ಸಿದ್ರಾವಲಿ ಗ್ರಾಮದ ಬಳಿ ತೈಲ ಟ್ಯಾಂಕರ್, ಕಾರು ಮತ್ತು ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಬಿಲಾಸ್ಪುರ ಪೊಲೀಸ್ ಠಾಣೆಯ ತನಿಖಾಧಿಕಾರಿ ವಿನೋದ್ ಕುಮಾರ್ ಹೇಳಿರುವ ಪ್ರಕಾರ ಜೈಪುರದಿಂದ ಬರುತ್ತಿದ್ದ ತೈಲ ಟ್ಯಾಂಕರ್ ಡಿವೈಡರ್​​ಗೆ ಡಿಕ್ಕಿ ಹೊಡೆದು ಕಾರಿಗೆ ಡಿಕ್ಕಿ ಹೊಡೆದಿದೆ. ಇನ್ನು ಈ ಕಾರು ಜೈಪುರಕ್ಕೆ ಪ್ರಯಾಣಿಸುತ್ತಿತ್ತು ಎಂದು ಹೇಳಲಾಗಿದೆ.

ಗುರುಗ್ರಾಮ್​ದ ಬಳಿ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು
ಗುರುಗ್ರಾಮ್​ದ ಬಳಿ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು
Follow us on

ದೆಹಲಿ-ಜೈಪುರ (Delhi-Jaipur Expressway) ಹೆದ್ದಾರಿಯ ಗುರುಗ್ರಾಮ್‌ನ ಸಿದ್ರಾವಲಿ ಗ್ರಾಮದ (Gurugram accident) ಬಳಿ ತೈಲ ಟ್ಯಾಂಕರ್, ಕಾರು ಮತ್ತು ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಬಿಲಾಸ್ಪುರ ಪೊಲೀಸ್ ಠಾಣೆಯ ತನಿಖಾಧಿಕಾರಿ ವಿನೋದ್ ಕುಮಾರ್ ಹೇಳಿರುವ ಪ್ರಕಾರ ಜೈಪುರದಿಂದ ಬರುತ್ತಿದ್ದ ತೈಲ ಟ್ಯಾಂಕರ್ ಡಿವೈಡರ್​​ಗೆ ಡಿಕ್ಕಿ ಹೊಡೆದು ಕಾರಿಗೆ ಡಿಕ್ಕಿ ಹೊಡೆದಿದೆ. ಇನ್ನು ಈ ಕಾರು ಜೈಪುರಕ್ಕೆ ಪ್ರಯಾಣಿಸುತ್ತಿತ್ತು ಎಂದು ಹೇಳಲಾಗಿದೆ. ಟ್ಯಾಂಕರ್​​ ಡಿಕ್ಕಿ ಹೊಡೆದ ಪರಿಣಾಮ ಕಾರಿನೊಳಗಿದ್ದ ಸಿಎನ್‌ಜಿ ಸಿಲಿಂಡರ್‌ ಸ್ಫೋಟಗೊಂಡು ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು ಈ ಟ್ಯಾಂಕರ್​​​ ಕಾರಿಗೆ ಡಿಕ್ಕಿ ಹೊಡೆದು ಕಾರಿನ ಹಿಂದೆ ಬರುತ್ತಿದ್ದ ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದಿದ್ದು, ವ್ಯಾನ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಚಾರ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ಸ್ಥಳದಲ್ಲಿ ಟ್ಯಾಂಕರ್​​ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಮೂವರು ಕೂಡ ಬೆಂಕಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಈ ಟ್ಯಾಂಕರ್​​ ಪಿಕಪ್ ವ್ಯಾನ್‌ಗೂ ಡಿಕ್ಕಿ ಹೊಡೆದಿದ್ದು, ವ್ಯಾನ್​​​ ಚಾಲಕ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ:ರಸ್ತೆ ಅಪಘಾತ ಪ್ರಕರಣ: ಮೃತ ಕುಟುಂಬಸ್ಥರ ಬಗ್ಗೆ ಮಾಹಿತಿ ನೀಡಿದ ಸಚಿವ ನಾಗೇಂದ್ರ

ಈ ಅಪಘಾತ ಸ್ಥಳದಿಂದ ಟ್ಯಾಂಕರ್​​ ಚಾಲಕ ಪರಾರಿಯಾಗಿದ್ದಾನೆ, ಇದೀಗ ಆತನ ಪತ್ತೆಗಾಗಿ ಕಾರ್ಯಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಿಂದ ಸಾವನ್ನಪ್ಪಿರುವವರನ್ನು ಸ್ಥಳೀಯ ಆಸ್ಪತ್ರೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ವಿಚಾರದ ಬಗ್ಗೆ ನಾಲ್ಕು ಜನರ ಕುಟುಂಬಕ್ಕೆ ತಿಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:00 am, Sat, 11 November 23