AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ 6 ಜನ ಸಾವು

ಒಂದೇ ಕುಟುಂಬದ 6 ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ವಿಶಂಭರಪುರ ಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶದ ವಿಶಂಭರಪುರ ಗ್ರಾಮದಲ್ಲಿ ಕಾರು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದು ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Uttar Pradesh: ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ 6 ಜನ ಸಾವು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Apr 08, 2023 | 5:01 PM

Share

ವಿಶಂಭರಪುರ: ಇಂದು (ಏ.8) ಮುಂಜಾನೆ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ವಿಶಂಭರಪುರ ಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶದ ವಿಶಂಭರಪುರ ಗ್ರಾಮದಲ್ಲಿ ಕಾರು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದು ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀದತ್ತಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಶಂಭರಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೈನಿತಾಲ್‌ನ ಪೇಪರ್ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದ ಡಿಯೋರಿಯಾ ಜಿಲ್ಲೆಯ ನಿವಾಸಿ ಸೋನು ಶಾ (28) ಶುಕ್ರವಾರ ಸಂಜೆ ತನ್ನ ಪತ್ನಿ, ಮಕ್ಕಳು ಮತ್ತು ಇತರ ಕುಟುಂಬ ಸದಸ್ಯರೊಂದಿಗೆ ಗ್ರಾಮಕ್ಕೆ ತೆರಳಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕೇಶವ್ ಕುಮಾರ್ ತಿಳಿಸಿದ್ದಾರೆ.

ಶನಿವಾರ ಮುಂಜಾನೆ ವಿಷಂಭರಪುರ ಗ್ರಾಮದ ಬಳಿ ಅಪರಿಚಿತ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಸೋನು ಶಾ, ಅವರ ಪತ್ನಿ ಸುಜಾವತಿ (25), ಅವರ ಮಕ್ಕಳಾದ ರುಚಿಕಾ (6) ಮತ್ತು ದಿವ್ಯಾಂಶಿ (4), ಸೋನು ಶಾ ಅವರ ಸಹೋದರ ರವಿ (18) ಮತ್ತು ಸಹೋದರಿ ಖುಷಿ (13) ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಎಸ್ಪಿ ಹೇಳಿದರು.

ಇದನ್ನೂ ಓದಿ: Uttar Pradesh Accident: ಸ್ಕೂಟಿಗೆ ಡಿಕ್ಕಿ ಹೊಡೆದು, 6 ವರ್ಷದ ಮಗುವನ್ನು 2 ಕಿ.ಮೀ ಎಳೆದೊಯ್ದ ಟ್ರಕ್

ಇದೀಗ ಈ ಕಾರಿಗೆ ಡಿಕ್ಕಿ ಹೊಡೆದ ವಾಹನವನ್ನು ಗುರುತಿಸಲು ಮತ್ತು ವಶಪಡಿಸಿಕೊಳ್ಳಲು ಆರು ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಬಗ್ಗೆ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 5:00 pm, Sat, 8 April 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್