ಸೌರಭ್​ ಕಿರ್ಪಲ್ ಪದೋನ್ನತಿಗೆ ಸುಪ್ರೀಂಕೋರ್ಟ್​ ಕೊಲಿಜಿಯಂ ಶಿಫಾರಸ್ಸು; ಇವರು ನ್ಯಾಯಾಧೀಶರಾಗಿ ನೇಮಕವಾಗುವುದು ವಿಶೇಷತೆ

2017ರಲ್ಲಿ, ಸೌರಭ್​ ಕಿರ್ಪಲ್​ರನ್ನು ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಬೇಕು ಎಂದು ನ್ಯಾಯಮೂರ್ತಿ ಗೀತಾ ಮಿತ್ತಲ್​ ನೇತೃತ್ವದ ದೆಹಲಿ ಹೈಕೋರ್ಟ್​ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು.

ಸೌರಭ್​ ಕಿರ್ಪಲ್ ಪದೋನ್ನತಿಗೆ ಸುಪ್ರೀಂಕೋರ್ಟ್​ ಕೊಲಿಜಿಯಂ ಶಿಫಾರಸ್ಸು; ಇವರು ನ್ಯಾಯಾಧೀಶರಾಗಿ ನೇಮಕವಾಗುವುದು ವಿಶೇಷತೆ
ಸೌರಭ್​ ಕಿರ್ಪಲ್​
Follow us
TV9 Web
| Updated By: Lakshmi Hegde

Updated on:Nov 16, 2021 | 12:42 PM

ಹಿರಿಯ ವಕೀಲ ಸೌರಭ್​ ಕಿರ್ಪಲ್​ರನ್ನು ದೆಹಲಿ ಹೈಕೋರ್ಟ್​​ನ ನ್ಯಾಯಾಧೀಶರನ್ನಾಗಿ ನೇಮಕ ಮಾಡುವಂತೆ ಸುಪ್ರೀಂಕೋರ್ಟ್​ ಕೊಲಿಜಿಯಂ ಶಿಫಾರಸ್ಸು ಮಾಡಿದೆ.  ಸೌರಬ್​ ಕಿರ್ಪಲ್​ ತಾವೊಬ್ಬರು ಸಲಿಂಗಕಾಮಿ ಎಂದು ಸ್ವಯಂ ಆಗಿಯೇ ಘೋಷಿಸಿಕೊಂಡವರು. ಇದೀಗ ಇವರು ದೆಹಲಿ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡರೆ, ದೇಶದಲ್ಲಿಯೇ ಮೊದಲ ಬಾರಿಗೆ ಒಬ್ಬರು ಎಲ್​ಜಿಬಿಟಿ ಸಮುದಾಯಕ್ಕೆ ಸೇರಿದ ನ್ಯಾಯಾಧೀಶರನ್ನು ನೇಮಕ ಮಾಡಿದಂತೆ ಆಗುತ್ತದೆ. 

ನವೆಂಬರ್​ 11ರಂದು, ಸಿಜೆಐ ಎನ್​.ವಿ.ರಮಣ ನೇತೃತ್ವದ ಸುಪ್ರೀಂಕೋರ್ಟ್​ ಕೊಲಿಜಿಯಂ ನಡೆಸಿದ ಸಭೆಯಲ್ಲಿ ಸೌರಭ್​ ಕಿರ್ಪಲ್​ ಮತ್ತು ಇನ್ನಿಬ್ಬರು ನ್ಯಾಯಾಧೀಶರಾದ ಯುಯು ಲಲಿತ್​ ಮತ್ತು ಎಎಂ ಖಾನ್ವಿಲ್ಕರ್​​ ಅವರ ಹೆಸರನ್ನು ಅಂತಿಮಗೊಳಿಸಿ, ದೆಹಲಿ ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಶಿಫಾರಸ್ಸು ಮಾಡಲಾಗಿದೆ.  ಕಿರ್ಪಲ್​​ರನ್ನು ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡುವ ಸಂಬಂಧ ಸುಪ್ರೀಂಕೋರ್ಟ್​ ಕೊಲಿಜಿಯಂ ವಿಳಂಬ ಮಾಡುತ್ತಲೇ ಬಂದಿತ್ತು. ಇತ್ತೀಚೆಗಷ್ಟೇ ಕಿರ್ಪಲ್​​ರಿಗೆ ಹಿರಿಯ ವಕೀಲ ಎಂದು ಬಡ್ತಿ ನೀಡಲಾಗಿತ್ತು.

2017ರಲ್ಲಿ, ಸೌರಭ್​ ಕಿರ್ಪಲ್​ರನ್ನು ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಬೇಕು ಎಂದು ನ್ಯಾಯಮೂರ್ತಿ ಗೀತಾ ಮಿತ್ತಲ್​ ನೇತೃತ್ವದ ದೆಹಲಿ ಹೈಕೋರ್ಟ್​ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು. ಆದರೆ ಅವರ ಪದೋನ್ನತಿ ಪರಿಗಣನೆಯನ್ನು ಸುಪ್ರೀಂಕೋರ್ಟ್​ ಕೊಲಿಜಿಯಂ ಮೂರು ಬಾರಿ ಮುಂದೂಡಿತ್ತು. ಅದಾದ ಬಳಿಕ ಈ ಬಾರಿಯ ಮಾರ್ಚ್​ ತಿಂಗಳಲ್ಲಿ, ಸೌರಬ್​ ಕಿರ್ಪಲ್​​ರಿಗೆ ದೆಹಲಿ ಕೋರ್ಟ್​​ನ ನ್ಯಾಯಮೂರ್ತಿಯನ್ನಾಗಿ ಪದೋನ್ನತಿ ನೀಡುವ ಸಂಬಂಧ ನಿಮ್ಮ ಒಲವು ಏನೆಂಬುದನ್ನು ಸ್ಪಷ್ಟಪಡಿಸಿ ಎಂದು ಆಗ  ಸಿಜೆಐ ಆಗಿದ್ದ ಎಸ್​. ಎ.ಬಾಬ್ಡೆ ಕೇಂದ್ರ ಸರ್ಕಾರವನ್ನು ಕೇಳಿದ್ದರು.  ಆಗಲೂ ಸಹ ಅವರ ಪದೋನ್ನತಿಗೆ ನಿರಾಕರಣೆಯೇ ಸಿಕ್ಕಿತ್ತು.

ಇದನ್ನೂ ಓದಿ: Video: ಚಲಿಸುತ್ತಿರುವ ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ಕೆಲಸಗಾರರು; ಶಾಕಿಂಗ್ ವಿಡಿಯೊ ವೈರಲ್​

Published On - 12:39 pm, Tue, 16 November 21

ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!