ಮಹಾರಾಷ್ಟ್ರದ ಅಕೋಲಾದಲ್ಲಿ ದೇವಸ್ಥಾನದ ಶೆಡ್ ಮೇಲೆ ಮರ ಬಿದ್ದು 7 ಜನ ದುರ್ಮರಣ

ಘಟನೆಯ ಮಾಹಿತಿ ಸಿಕ್ಕಿದ ತಕ್ಷಣವೇ ಪೊಲೀಸರ ತಂಡ ಮತ್ತು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಮಾಡಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾ

ಮಹಾರಾಷ್ಟ್ರದ ಅಕೋಲಾದಲ್ಲಿ ದೇವಸ್ಥಾನದ ಶೆಡ್ ಮೇಲೆ ಮರ ಬಿದ್ದು 7 ಜನ ದುರ್ಮರಣ
ದೇವಸ್ಥಾನದಲ್ಲಿ ಮರ ಬಿದ್ದು ಸಾವು
Follow us
ಆಯೇಷಾ ಬಾನು
|

Updated on:Apr 10, 2023 | 7:46 AM

ಭಾನುವಾರ ಸಂಜೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಬಾಲಾಪುರ್ ತೆಹಸಿಲ್‌ನ ಪಾರಸ್ ಗ್ರಾಮದ ದೇವಸ್ಥಾನದ ತಗಡಿನ ಶೆಡ್‌ನ ಮೇಲೆ ಭಾರೀ ಮಳೆ ಹಾಗೂ ಗಾಳಿಯ ಪರಿಣಾಮ ಬೃಹತ್ ಬೇವಿನ ಮರವೊಂದು ಬಿದಿದೆ. ಇದರಿಂದ ಏಳು ಜನರು ಸಾವನ್ನಪ್ಪಿದ್ದಾರೆ. ಹಾಗೂ ಕನಿಷ್ಠ 30 ಜನರು ಗಾಯಗೊಂಡಿದ್ದಾರೆ. ಅಕೋಲಾ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು ಬಾಬುಜಿ ಮಹಾರಾಜ್ ಮಂದಿರದ ಆವರಣದಲ್ಲಿ ಪೂಜೆಯ ವೇಳೆ  ಶೆಡ್ ಮೇಲೆ ಬೃಹತ್ ಬೇವಿನ ಮರ ಬಿದ್ದಿದೆ. ಸ್ಥಳಕ್ಕಾಗಮಿಸಿದ ಸ್ಥಳೀಯರು ಶೆಡ್‌ನಡಿಯಲ್ಲಿ ಸಿಲುಕಿಕೊಂಡಿದ್ದವರನ್ನು ರಕ್ಷಿಸಲು ಹರಸಾಹಸಪಟ್ಟಿದ್ದಾರೆ.

ಘಟನೆಯ ಮಾಹಿತಿ ಸಿಕ್ಕಿದ ತಕ್ಷಣವೇ ಪೊಲೀಸರ ತಂಡ ಮತ್ತು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಮಾಡಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಇನ್ನು ಮುರಿದು ಬಿದ್ದ ಮರ ಮತ್ತು ಕುಸಿದ ಶೆಡ್ ಅನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸಲಾಗಿದೆ. ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅರೋರಾ ಜಿಲ್ಲೆಯ ಕಲೆಕ್ಟರ್ ನಿಮಾ ಅರೋರಾ ಸುದ್ದಿ ಸಂಸ್ಥೆ ಎಎನ್‌ಐಗೆ ಖಚಿತಪಡಿಸಿದ್ದಾರೆ. ಸುಮಾರು 30-40 ಜನರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಶಿವಮೊಗ್ಗ ವಿಮಾನ ನಿಲ್ದಾಣದ ಕಮಲ ಚಿಹ್ನೆ ಮುಚ್ಚುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮನವಿ

Halal Certification: ಹೊಸ ಹಲಾಲ್ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಸರ್ಕಾರ; ಏನಿದು ನೂತನ ನಿಯಮ?

ನವದೆಹಲಿ: ಹಲವು ವಿದೇಶಗಳಲ್ಲಿ ಹಲಾಲ್ ಉತ್ಪನ್ನಗಳಿಗೆ (Halal Products) ಬೇಡಿಕೆ ಇದೆ. ಭಾರತದಿಂದ ಈ ದೇಶಗಳಿಗೆ ರಫ್ತಾಗುವ ಉತ್ಪನ್ನಗಳು ಬಹುತೇಕ ಹಲಾಲ್ ಪ್ರಮಾಣಪತ್ರ (Halal Certification) ಹೊಂದಿರುತ್ತವೆ. ಆದರೆ, ಹಲಾಲ್ ಪ್ರಮಾಣಪತ್ರದಲ್ಲಿ ಭಾರತದಲ್ಲಿ ನಿರ್ದಿಷ್ಟ ನಿಯಮಾವಳಿ ರಚನೆಯಾಗಿರಲಿಲ್ಲ. ಈಗ ಕೇಂದ್ರ ಸರ್ಕಾರ ಈ ವಿಚಾರದ ಬಗ್ಗೆ ಗಮನ ಹರಿಸಿದೆ. ವಿದೇಶಗಳಿಗೆ ರಫ್ತಾಗುವ ಮಾಂಸ ಉತ್ಪನ್ನಗಳಿಗೆ ಹಲಾಲ್ ಸರ್ಟಿಫಿಕೇಶನ್ ಅನ್ನು ಸರ್ಕಾರ ಸೂಚಿತ ಕೇಂದ್ರಗಳಿಂದಲೇ ಪಡೆಯಬೇಕಾಗುತ್ತದೆ. ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದ (Quality Council of India) ಮಂಡಳಿಯ ಅಕ್ರೆಡಿಶನ್ ಪಡೆದ ಸಂಸ್ಥೆಯಿಂದ ಪ್ರಮಾಣಪತ್ರ ಹೊಂದಿರುವ ಪ್ಯಾಕೇಜಿಂಗ್ ಕೇಂದ್ರಗಳಲ್ಲಿ ಮಾಂಸ ಉತ್ಪನ್ನಗಳನ್ನು ತಯಾರಿಸಿ ಪ್ರೋಸಸಿಂಗ್ ನಡೆಸಿ ಪ್ಯಾಕ್ ಆಗಿರಬೇಕು. ಆಗಲೇ ಮಾತ್ರ ಹಲಾಲ್ ಸರ್ಟಿಫಿಕೇಶನ್ ಸಿಗುತ್ತದೆ ಎಂದು ಸರ್ಕಾರ ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ಹೊಸ ನಿಯಮ ಹಲಾಲ್ ಸರ್ಟಿಕೇಶನ್ ಪಡೆಯುವ ಆಹಾರ ಉತ್ಪನ್ನಗಳಿಗೆ ಮಾತ್ರ. ಇತರ ಉತ್ಪನ್ನಗಳ ರಫ್ತು ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಇನ್ನು, ಮಾಂಸ ಉತ್ಪನ್ನಗಳಿಗೆ ಹಲಾಲ್ ಸರ್ಟಿಫಿಕೇಶನ್ ಬೇಕೆಂಬ ನಿಯಮಗಳು ಇಲ್ಲದಿರವ ದೇಶಗಳಿಗೆ ಉತ್ಪನ್ನಗಳನ್ನು ರಫ್ತು ಮಾಡುವಾಗ ಆ ದೇಶದ ಅವಶ್ಯಕತೆಗಳಿಗೆ ತಕ್ಕಂತೆ ಗುಣಮಟ್ಟದ ಉತ್ಪನ್ನಗಳನ್ನು ಕಳುಹಿಸಬೇಕು ಎಂದು ಸರ್ಕಾರ ಸೂಚಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:27 am, Mon, 10 April 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್