West Bengal: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ

ತೃಣಮೂಲ ಕಾಂಗ್ರೆಸ್(TMC) ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಜಿಯಾರುಲ್ ಮೊಲ್ಲಾ ಎಂಬುವವರು  ಬಸಂತಿ ಗ್ರಾಮದ ರಸ್ತೆಯೊಂದರಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಕಾರ್ಯಕರ್ತ ಪತ್ತೆಯಾಗಿದ್ದರು.

West Bengal: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ
Crime Scene
Follow us
ನಯನಾ ರಾಜೀವ್
|

Updated on: Jul 02, 2023 | 9:17 AM

ತೃಣಮೂಲ ಕಾಂಗ್ರೆಸ್(TMC) ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಜಿಯಾರುಲ್ ಮೊಲ್ಲಾ ಎಂಬುವವರು  ಬಸಂತಿ ಗ್ರಾಮದ ರಸ್ತೆಯೊಂದರಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಕಾರ್ಯಕರ್ತ ಪತ್ತೆಯಾಗಿದ್ದರು. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಜಿಯಾರುಲ್ ಮೊಲ್ಲಾ ಅವರು ಯುವ ತೃಣಮೂಲ ಕಾಂಗ್ರೆಸ್ ಸದಸ್ಯನಾಗಿದ್ದು, ಅವರಿಗೆ ನಿರಂತರ ಜೀವ ಬೆದರಿಕೆ ಇತ್ತು ಎಂದು ಕುಟುಂಬ ಹೇಳಿದೆ.

ನನ್ನ ತಂದೆಗೆ ಸಾಕಷ್ಟು ಶತ್ರುಗಳಿದ್ದರು, ಅವರಿಗೆ ರಾಜಕೀಯ ದ್ವೇಷವಿತ್ತು, ಅವರಿಗೆ ಪಕ್ಷದ ಇನ್ನೊಂದು ಬಣದಿಂದ ಹಲವಾರು ಬಾರಿ ಬೆದರಿಕೆ ಇತ್ತು, ಅವರಿಗೆ ವಿವಿಧ ಸಂಖ್ಯೆಗಳಿಂದ ಫೋನ್ ಮೂಲಕ ಬೆದರಿಕೆ ಕರೆಗಳು ಬರುತ್ತಿದ್ದವು, ನನ್ನ ತಂದೆ ಅವರು ಟಿಎಂಸಿ ಯುವ ಘಟಕದ ಸದಸ್ಯರಾಗಿದ್ದರು. ಅವರು ತಮ್ಮ ಬಣಕ್ಕೆ ಸೇರುವಂತೆ ನನ್ನ ತಂದೆಯ ಮೇಲೆ ಒತ್ತಡ ಹೇರುತ್ತಿದ್ದರು ಎಂದು ತಿಳಿಸಿದ್ದಾರೆ. ಈ ವಿಚಾರದಲ್ಲಿ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: Bengal Panchayat Polls: ಪಶ್ಚಿಮ ಬಂಗಾಳದಲ್ಲಿ ನಡೆದ ಘರ್ಷಣೆಯಲ್ಲಿ ಟಿಎಂಸಿ ಕಾರ್ಯಕರ್ತ ಗುಂಡೇಟಿಗೆ ಬಲಿ, 6 ಮಂದಿಗೆ ಗಾಯ

ಇತ್ತೀಚೆಗೆ ನಡೆದಿತ್ತು ಮತ್ತೊಂದು ಹತ್ಯೆ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಘರ್ಷಣೆಯಲ್ಲಿ ಟಿಎಂಸಿ ಕಾರ್ಯಕರ್ತರೊಬ್ಬರು ಗುಂಡೇಟಿಗೆ ಬಲಿಯಾಗಿದ್ದಾರೆ. ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ಜುಲೈ 8 ರಂದು ನಡೆಯಲಿದ್ದು, ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಇಲ್ಲಿಯವರೆಗೆ 11 ಮಂದಿ ಮೃತಪಟ್ಟಿದ್ದಾರೆ.

ಎರಡು ಗುಂಪುಗಳ ನಡುವೆ ರಾಜಕೀಯ ಘರ್ಷಣೆ ನಡೆದಿದೆ, ಏಳು ಮಂದಿಗೆ ಬುಲೆಟ್​ಗಳು ತಾಗಿವೆ. ಅದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಬಾಬು ಹಕ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ