AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನ ಕೊಲೆಗೆ ಸಾಕ್ಷಿಯಾಗಿದ್ದ ಮಹಿಳೆಯ ಉಸಿರನ್ನೇ ನಿಲ್ಲಿಸಿದ ಪಾಪಿಗಳು

ಗಂಡನ ಹತ್ಯೆಗೆ ಸಾಕ್ಷಿಯಾಗಿದ್ದ ಮಹಿಳೆಯ ಉಸಿರನ್ನು ನಿಲ್ಲಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆರೋಪಿಗಳು ಮಹಿಳೆ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ರಚನಾ ಯಾದವ್ ಕೊಲೆ ಪ್ರಕರಣದ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿದ್ದು, ಅದರಲ್ಲಿ ಗುಂಡು ಹಾರಿಸಿದ ಆರೋಪಿಗಳು ಸ್ಪಷ್ಟವಾಗಿ ಕಾಣುತ್ತಿದ್ದಾರೆ. ಹಲ್ಲೆಕೋರನ ಸಹಚರನು ದೆಹಲಿ ನೋಂದಣಿ ಸಂಖ್ಯೆಯನ್ನು ಹೊಂದಿರುವ ಸ್ಪೋರ್ಟ್ಸ್ ಬೈಕ್‌ನಲ್ಲಿ ಕಾಯುತ್ತಿದ್ದರು, ಇದು ವೇಗವಾಗಿ ತಪ್ಪಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿತು ಎಂದು ಪೊಲೀಸರು ತಿಳಿಸಿದ್ದಾರೆ.

ಗಂಡನ ಕೊಲೆಗೆ ಸಾಕ್ಷಿಯಾಗಿದ್ದ ಮಹಿಳೆಯ ಉಸಿರನ್ನೇ ನಿಲ್ಲಿಸಿದ ಪಾಪಿಗಳು
ರಚನಾ
ನಯನಾ ರಾಜೀವ್
|

Updated on: Jan 11, 2026 | 12:29 PM

Share

ನವದೆಹಲಿ, ಜನವರಿ 11: ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲೇ ಮಹಿಳೆಯೊಬ್ಬಳನ್ನು ಗುಂಡಿಕ್ಕಿ ಹತ್ಯೆ(Murder)) ಮಾಡಲಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ದೆಹಲಿಯ ಶಾಲಿಮಾರ್​ ಬಾಗ್​ನಲ್ಲಿ 44ವರ್ಷದ ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 2023ರಲ್ಲಿ ಆ ಮಹಿಳೆಯ ಪತಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಅದಕ್ಕೆ ಆ ಮಹಿಳೆಯೇ ಸಾಕ್ಷಿಯಾಗಿದ್ದರು, ಇದೀಗ ಸಾಕ್ಷ್ಯ ನಾಶ ಮಾಡಲು ಆರೋಪಿಗಳು ಆಕೆಯನ್ನೂ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಮೃತರನ್ನು ಶಾಲಿಮಾರ್ ಬಾಗ್ ನಿವಾಸಿ ರಚನಾ ಯಾದವ್, ಪೊಲೀಸರ ಪ್ರಕಾರ, ಅವರ ತಲೆಗೆ ಗುಂಡು ಹಾರಿಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ರಚನಾ ಮೂಲತಃ ವಾಯುವ್ಯ ದೆಹಲಿಯ ಭಲ್ಸ್ವಾದವರು. 2023ರಲ್ಲಿ ರಚನಾ ಪತಿ ವಿಜೇಂದ್ರ ಯಾದವ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು, ಆ ಕೊಲೆ ಪ್ರಕರಣವು ಪ್ರಸ್ತುತ ವಿಚಾರಣೆಯಲ್ಲಿದೆ. ವಿಜೇಂದ್ರ ಯಾದವ್ ಅವರನ್ನು ಹಳೆಯ ಯಾವುದೋ ದ್ವೇಷದ ಕಾರಣ ಕೊಲೆ ಮಾಡಲಾಗಿತ್ತು.

ಭರತ್ ಯಾದವ್ ಮತ್ತು ಇತರ ಐವರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ. ಐದು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಪ್ರಮುಖ ಆರೋಪಿ ಭರತ್ ಯಾದವ್ ಇನ್ನೂ ತಲೆಮರೆಸಿಕೊಂಡಿದ್ದು, ಆತನನ್ನು ಅಪರಾಧಿ ಎಂದು ಘೋಷಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮರ್ಯಾದೆಗೇಡು ಹತ್ಯೆ ತಡೆಗೆ ವಿಶೇಷ ಕಾನೂನು: ಸಿದ್ದರಾಮಯ್ಯ ಅಧಿಕೃತ ಘೋಷಣೆ

ರಚನಾ ಅವರ ಪತಿಯ ಕೊಲೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದರು ಮತ್ತು ಅವರ ಸಾಕ್ಷ್ಯವನ್ನು ಪ್ರಾಸಿಕ್ಯೂಷನ್‌ಗೆ ಪ್ರಮುಖವೆಂದು ಪರಿಗಣಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣವನ್ನು ದುರ್ಬಲಗೊಳಿಸುವ ಮತ್ತು ಇತರ ಸಾಕ್ಷಿಗಳನ್ನು ಬೆದರಿಸುವ ಗುರಿಯನ್ನು ಆರೋಪಿಗಳು ಹೊಂದಿರಬಹುದು ಎಂದು ಹೇಳಲಾಗಿದೆ.

ರಚನಾ ಯಾದವ್ ಕೊಲೆ ಪ್ರಕರಣದ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿದ್ದು, ಅದರಲ್ಲಿ ಗುಂಡು ಹಾರಿಸಿದ ಆರೋಪಿಗಳು ಸ್ಪಷ್ಟವಾಗಿ ಕಾಣುತ್ತಿದ್ದಾರೆ. ಹಲ್ಲೆಕೋರನ ಸಹಚರನು ದೆಹಲಿ ನೋಂದಣಿ ಸಂಖ್ಯೆಯನ್ನು ಹೊಂದಿರುವ ಸ್ಪೋರ್ಟ್ಸ್ ಬೈಕ್‌ನಲ್ಲಿ ಕಾಯುತ್ತಿದ್ದರು, ಇದು ವೇಗವಾಗಿ ತಪ್ಪಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿತು ಎಂದು ಪೊಲೀಸರು ತಿಳಿಸಿದ್ದಾರೆ.

ಶಾಲಿಮಾರ್ ಬಾಗ್ ಪೊಲೀಸ್ ಠಾಣೆಗೆ ಬೆಳಗ್ಗೆ 10.59 ರ ಸುಮಾರಿಗೆ ಮಹಿಳೆಯೊಬ್ಬರ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪಿಸಿಆರ್ ಕರೆ ಬಂದಿತು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ನೋಡಿದಾಗ ರಚನಾ ರಕ್ತದ ಮಡುವಿನಲ್ಲಿ ರಸ್ತೆಯಲ್ಲಿ ಬಿದ್ದಿರುವುದನ್ನು ಕಂಡು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ ಬರುವಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ತನ್ನ ತಂದೆಯ ಕೊಲೆ ಪ್ರಕರಣದಲ್ಲಿ ಸಾಕ್ಷಿಯಾಗಿ ದೃಢವಾಗಿ ನಿಂತಿದ್ದರಿಂದ ತನ್ನ ತಾಯಿಯನ್ನು ಕೊಂದಿದ್ದಾರೆ ಎಂದು ಮಗಳು ಕನಿಕಾ ಹೇಳಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ