ಬುಲಂದ್‌ಶಹರ್: ಮಹಿಳೆಯೊಬ್ಬರು ಬಸ್ಸಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಛಿಬ್ರಮೌದಲ್ಲಿ ನಡೆದಿದೆ. ನಂತರ ಬಸ್ ಚಾಲಕ ಆಸ್ಪತ್ರೆಗೆ ಸಾಗಿಸಿದ್ದಾರೆ, ತಾಯಿ ಮತ್ತು ನವಜಾತ ಶಿಶುವಿಗೆ ಚಿಕಿತ್ಸೆ ನೀಡಲಾಗಿದೆ. ದೆಹಲಿಯಿಂದ ಛಿಬ್ರಮೌ (ಉತ್ತರ ಪ್ರದೇಶದ ಕನೌಜ್ ಜಿಲ್ಲೆ)ಗೆ ತೆರಳುತ್ತಿದ್ದಾಗ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಹೆರಿಗೆಯಾಗಿದೆ ಎಂದು ಬಸ್ಸಿನ ಸಹ-ಚಾಲಕ ಅಲೋಕ್ ಕುಮಾರ್ ಹೇಳಿದ್ದಾರೆ. ಈ ಘಟನೆಯು ಭಾನುವಾರ ನಡೆದಿದೆ.
ಜೊತೆಗೆ ಪ್ರಯಾಣಿಸುತ್ತಿದ್ದ ಮಹಿಳೆಯ ಪತಿ ಸೋಮೇಶ್ ಕುಮಾರ್ ಅವರು ದೆಹಲಿಯಿಂದ ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹೋಗುತ್ತಿದ್ದಾರೆ ಎಂದು ಹೇಳಿದರು.
ಇದನ್ನು ಓದಿ: ಹಿಂದೂ ಯುವಕರನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಬ್ಬರು ಮುಸ್ಲಿಂ ಯುವತಿಯರು!
ಮಹಿಳೆ ಹೆರಿಗೆ ನೋವು ಎಂದು ಹೇಳಿದಾಗ ಬಸ್ ಚಾಲಕ ವಾಹನ ನಿಲ್ಲಿಸಿದ್ದಾನೆ. ನಂತರ ಅವರು ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ಸೋಮೇಶ್ ಕುಮಾರ್ ತಿಳಿಸಿದರು. ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:11 pm, Mon, 5 December 22