ಕೊವಿಡ್ ಲಸಿಕೆ ಪಡೆಯಲು ಕೊವಿನ್ ಪೋರ್ಟಲ್‌ನಲ್ಲಿ ಆಧಾರ್ ವಿವರ ಕಡ್ಡಾಯವಲ್ಲ: ಕೇಂದ್ರ

ಕೆಲವು ಕೇಂದ್ರಗಳು ವ್ಯಾಕ್ಸಿನೇಷನ್‌ಗಾಗಿ ಆಧಾರ್ ಕಾರ್ಡ್‌ಗೆ ಒತ್ತಾಯಿಸುತ್ತವೆ ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಸೂರ್ಯ ಕಾಂತ್ ಅವರ ಪೀಠವು ಕೊವಿಡ್ ಲಸಿಕೆ ನೀಡಿಕೆ ವೇಳೆ...

ಕೊವಿಡ್ ಲಸಿಕೆ ಪಡೆಯಲು ಕೊವಿನ್ ಪೋರ್ಟಲ್‌ನಲ್ಲಿ ಆಧಾರ್ ವಿವರ ಕಡ್ಡಾಯವಲ್ಲ: ಕೇಂದ್ರ
ಪ್ರಾತಿನಿಧಿಕ ಚಿತ್ರ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Feb 07, 2022 | 3:35 PM

ದೆಹಲಿ: ಕೊವಿಡ್ ಲಸಿಕೆಗಾಗಿ (Covid-19 vaccination) CO-WIN ಪೋರ್ಟಲ್‌ನಲ್ಲಿ ಆಧಾರ್ ಕಾರ್ಡ್ (Aadhaar card) ವಿವರಗಳನ್ನು ಸಲ್ಲಿಸುವುದು ಕಡ್ಡಾಯ ಪೂರ್ವ ಷರತ್ತಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದ ನಂತರ, ಲಸಿಕೆ ಪಡೆಯಲು ಜನರಲ್ಲಿ ಆಧಾರ್ ಕಾರ್ಡ್‌ ಕೇಳಬೇಡಿ ಎಂದು ಸುಪ್ರೀಂಕೋರ್ಟ್, ಅಧಿಕಾರಿಗಳಿಗೆ ಸೂಚಿಸಿದೆ. ಕೆಲವು ಕೇಂದ್ರಗಳು ವ್ಯಾಕ್ಸಿನೇಷನ್‌ಗಾಗಿ ಆಧಾರ್ ಕಾರ್ಡ್‌ಗೆ ಒತ್ತಾಯಿಸುತ್ತವೆ ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ (Supreme Court) ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಸೂರ್ಯ ಕಾಂತ್ ಅವರ ಪೀಠವು ಕೊವಿಡ್ ಲಸಿಕೆ ನೀಡಿಕೆ ವೇಳೆ ಗುರುತಿನ ಏಕೈಕ ಪುರಾವೆಯಾಗಿ ಆಧಾರ್ ಕಾರ್ಡ್ ಅನ್ನು ಒದಗಿಸುವಂತೆ ಒತ್ತಾಯಿಸಬೇಡಿ ಎಂದು ಹೇಳಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ಅಫಿಡವಿಟ್ ಸಲ್ಲಿಸಿದ್ದು, ಇದು ನಿರ್ದಿಷ್ಟವಾಗಿ CO-WIN ಪೋರ್ಟಲ್‌ನಲ್ಲಿ ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ದಾಖಲಿಸುತ್ತದೆ. ಇದರಲ್ಲಿ ಒಂಬತ್ತು ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಸಲ್ಲಿಸಬಹುದು. ಆಧಾರ್ ವಿವರ ದಾಖಲಿಸುವುದು ವ್ಯಾಕ್ಸಿನೇಷನ್ ಪಡೆಯಲು ಕಡ್ಡಾಯವಲ್ಲ. ಅರ್ಜಿದಾರರ ಕುಂದುಕೊರತೆಗಳನ್ನು ಸರಿಯಾಗಿ ಪೂರೈಸಲಾಗುತ್ತದೆ. ಎಲ್ಲಾ ಸಂಬಂಧಿತ ಅಧಿಕಾರಿಗಳು ಆರೋಗ್ಯ ಸಚಿವಾಲಯದ ನೀತಿಗೆ ಅನುಸಾರವಾಗಿ ಕಾರ್ಯನಿರ್ವಹಿಸಬೇಕು ಎಂದು ಪೀಠವು ಪಿಐಎಲ್ ಅನ್ನು ವಿಲೇವಾರಿ ಮಾಡುವಾಗ ಹೇಳಿದೆ.

ಸಚಿವಾಲಯದ ಪರ ವಾದ ಮಂಡಿಸಿದ ವಕೀಲ ಅಮನ್ ಶರ್ಮಾ, ಆಧಾರ್ ಮಾತ್ರ ಪೂರ್ವ ಷರತ್ತಲ್ಲ ಮತ್ತು ಯಾವುದೇ ಗುರುತಿನ ಚೀಟಿ ಇಲ್ಲದ 87 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಮಯಾಂಕ್ ಕ್ಷೀರಸಾಗರ್ ಅವರು, ಲಸಿಕೆ ಕೇಂದ್ರಗಳು ಆಧಾರ್ ಕಾರ್ಡ್ ಕೇಳಬಾರದು ಎಂದಿದ್ದಾರೆ.

ಲಸಿಕೆ ನೀಡಿಕೆಗಾಗಿ ವ್ಯಕ್ತಿಯನ್ನು ಪರಿಶೀಲಿಸುವಾಗ ಕೊವಿಡ್ ಲಸಿಕೆ ಕೇಂದ್ರ/ವ್ಯಾಕ್ಸಿನೇಟರ್‌ಗಾಗಿ ಕೊವಿನ್ ಪೋರ್ಟಲ್‌ನಲ್ಲಿ ಆಧಾರ್ ವಿವರಗಳನ್ನು ಸಲ್ಲಿಸುವ ಕಡ್ಡಾಯ ಪೂರ್ವ-ಷರತ್ತನ್ನು ತೆಗೆದುಹಾಕಲು ಪಿಐಎಲ್ ನಿರ್ದೇಶನಗಳನ್ನು ಕೋರಿತ್ತು.

ಕೋರಿದ ಪರಿಹಾರಕ್ಕೆ ಅನುಗುಣವಾಗಿ CO-WIN ಪೋರ್ಟಲ್‌ಗೆ ಅಗತ್ಯ ಬದಲಾವಣೆಗಳನ್ನು ಮಾಡಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ನಿರ್ದೇಶನವನ್ನು ಮನವಿ ಕೇಳಿದೆ. ಇದು ಕೊವಿನ್ ಪೋರ್ಟಲ್ ಅನ್ನು ಸೂಕ್ತ ಸಾಫ್ಟ್‌ವೇರ್/ತಾಂತ್ರಿಕ ಜ್ಞಾನದೊಂದಿಗೆ ನವೀಕರಿಸಲು ಕೇಂದ್ರಕ್ಕೆ ನಿರ್ದೇಶನವನ್ನು ಕೋರಿತ್ತು. ಅದೇ ಬಳಕೆದಾರ ಸ್ನೇಹಿ, ಬಳಸಲು ಸುಲಭ ಮತ್ತು ಭಾರತದ ಎಲ್ಲಾ ನಾಗರಿಕರಿಗೆ ಪ್ರವೇಶವನ್ನು ನೀಡುತ್ತದೆ.

ಕೊವಿಡ್-19 ಲಸಿಕೆಯನ್ನು ನೀಡುವ ಉದ್ದೇಶಕ್ಕಾಗಿ ಗುರುತಿನ ಏಕೈಕ ಪುರಾವೆಯಾಗಿ ಆಧಾರ್ ಕಾರ್ಡ್ ಅನ್ನು ತಯಾರಿಸಲು ಅಧಿಕಾರಿಗಳು ಕೇಳಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಪುಣೆ ಮೂಲದ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸಿದ್ಧಾರ್ಥಶಂಕರ್ ಶರ್ಮಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಾಯೋಗಿಕ ಕ್ರಮಗಳಿಗೆ ವಿರುದ್ಧವಾಗಿ, ಇತ್ತೀಚೆಗೆ ಮತ್ತೊಂದು SOP/ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಇದರಲ್ಲಿ ಲಸಿಕೆ ನೀಡದ ವ್ಯಕ್ತಿಗಳಿಗೂ ಲಸಿಕೆ ನೀಡುವಂತೆ ನಿರ್ದೇಶಿಸಲಾಗಿದೆ. ಕೊವಿಡ್ ಪೋರ್ಟಲ್‌ನಲ್ಲಿ ಉಲ್ಲೇಖಿಸಿದಂತೆ ಏಳು ಸೂಚಿಸಲಾದ ಫೋಟೋ ಐಡಿ ಕಾರ್ಡ್‌ಗಳಲ್ಲಿ ಯಾವುದಾದರೂ ಒಂದನ್ನು ಹೊಂದಿದರೆ ಸಾಕು.

ಇದನ್ನೂ ಓದಿ: ಕೊವಿಡ್19 ಬೂಸ್ಟರ್ ಡೋಸ್ ಪಡೆದ ನಂತರ ಕೆಲವರಲ್ಲಿ ಈ ಹೊಸ ಲಕ್ಷಣ ಕಂಡುಬಂದಿದೆ; ಏನದು? ತಜ್ಞರು ಏನು ಹೇಳುತ್ತಾರೆ?

Published On - 3:04 pm, Mon, 7 February 22

Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್