AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸಂಬಂಧಿ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ; ಯುಐಡಿಎಐ ಸ್ಪಷ್ಟನೆ

ವ್ಯಕ್ತಿಯ ಬಳಿ ಆಧಾರ್ ಕಾರ್ಡ್ ಇಲ್ಲದಿದ್ದರೆ ಅಥವಾ ಕಾರಣಾಂತರಗಳಿಂದ ಆಧಾರ್ ಆನ್​ಲೈನ್ ವೆರಿಫಿಕೇಷನ್ ಆಗದೇ ಉಳಿದಿದ್ದರೆ ಸಂಬಂಧಪಟ್ಟ ಇಲಾಖೆ ಅಥವಾ ವಿಭಾಗವು ಆಧಾರ್ ಆಕ್ಟ್​ನ ಸೆಕ್ಷನ್ 7ರ ಪ್ರಕಾರ ಸೇವೆಯನ್ನು ನೀಡಬೇಕು ಎಂದು ಯುಐಡಿಎಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಕೊವಿಡ್ ಸಂಬಂಧಿ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ; ಯುಐಡಿಎಐ ಸ್ಪಷ್ಟನೆ
ಆಧಾರ್ ಕಾರ್ಡ್
TV9 Web
| Updated By: ganapathi bhat|

Updated on:Aug 23, 2021 | 12:30 PM

Share

ದೆಹಲಿ: ಕೊರೊನಾಕ್ಕೆ ಸಂಬಂಧಪಟ್ಟ ಯಾವುದೇ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಯುಐಡಿಎಐ (Unique Identification Authority of India) ಶನಿವಾರ ಸ್ಪಷ್ಟೀಕರಣ ನೀಡಿದೆ. ಆಸ್ಪತ್ರೆಗೆ ದಾಖಲಾಗುವುದಕ್ಕೆ ಹಾಗೂ ಕೊರೊನಾ ಲಸಿಕೆಗೆ ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯ ಎಂಬ ಸಂದೇಶಗಳು ಹರಿದಾಡಿದ್ದವು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಯುಐಡಿಎಐ, ಆಧಾರ್ ಕಾರ್ಡ್ ನೀಡುವುದು ಕಡ್ಡಾಯವಲ್ಲ ಎಂದು ತಿಳಿಸಿದೆ.

ವ್ಯಕ್ತಿಯ ಬಳಿ ಆಧಾರ್ ಕಾರ್ಡ್ ಇಲ್ಲದಿದ್ದರೆ ಅಥವಾ ಕಾರಣಾಂತರಗಳಿಂದ ಆಧಾರ್ ಆನ್​ಲೈನ್ ವೆರಿಫಿಕೇಷನ್ ಆಗದೇ ಉಳಿದಿದ್ದರೆ ಸಂಬಂಧಪಟ್ಟ ಇಲಾಖೆ ಅಥವಾ ವಿಭಾಗವು ಆಧಾರ್ ಆಕ್ಟ್​ನ ಸೆಕ್ಷನ್ 7ರ ಪ್ರಕಾರ ಸೇವೆಯನ್ನು ನೀಡಬೇಕು ಎಂದು ಯುಐಡಿಎಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಲಸಿಕೆ ರಿಜಿಸ್ಟ್ರೇಷನ್ ಪ್ರಕ್ರಿಯೆಗೆ ಆಧಾರ್ ಕಾರ್ಡ್ ಫೊಟೊ ಐಡೆಂಟಿಟಿ ಕಾರ್ಡ್ ಆಗಿ ಕೆಲಸ ಮಾಡುತ್ತದೆ. ಆದರೆ, ಆಧಾರ್ ಕಾರ್ಡ್ ಹೊರತಾಗಿ ಬೇರೆ ದಾಖಲೆಗಳನ್ನು ಕೂಡ ವ್ಯಕ್ತಿಯು ಬಳಸಬಹುದಾಗಿದೆ. ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪೆನ್ಶನ್ ಡಾಕ್ಯುಮೆಂಟ್ ಕೂಡ ಲಸಿಕೆ ರಿಜಿಸ್ಟ್ರೇಶನ್​ಗೆ ದಾಖಲೆಯಾಗಿ ಬಳಸಬಹುದಾಗಿದೆ.

ಆಧಾರ್ ಕಾರ್ಡ್ ಸಹಿತ ನಿಗದಿತ ದಾಖಲೆ ಪತ್ರಗಳು ಇಲ್ಲದ ಜನರಿಗೆ ಲಸಿಕೆ ನೀಡುವ ಬಗ್ಗೆಯೂ ಆರೋಗ್ಯ ಸಚಿವಾಲಯ ಹೊಸ ಮಾರ್ಗವನ್ನು ಸೂಚಿಸಿದೆ. ಅಗತ್ಯ ವಸ್ತು ಅಥವಾ ಸೇವೆಯ ಪೂರೈಕೆಯನ್ನು ಆಧಾರ್ ಕಾರ್ಡ್ ಇಲ್ಲ ಎಂದು ನೆಪವೊಡ್ಡಿ ತಪ್ಪಿಸುವಂತಿಲ್ಲ. ಆಧಾರ್ ಕಾರ್ಡ್ ಇಲ್ಲದೇ ಹೋದರೂ ಸೇವೆ ನೀಡಬೇಕು ಎಂದು ತಿಳಿಸಲಾಗಿದೆ.

ಕರ್ನಾಟಕ ಕೊವಿಡ್ ಪ್ರಕರಣಗಳು ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 41,664 ಜನರಿಗೆ ಕೊವಿಡ್ ಸೋಂಕು ಪತ್ತೆಯಾಗಿದೆ. 349 ಜನರು ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 13,402 ಜನರಿಗೆ ಸೋಂಕು ಪತ್ತೆಯಾಗಿದ್ದು, 94 ಜನರು ನಿಧನರಾಗಿದ್ದಾರೆ. ಇವೆಲ್ಲವುಗಳ ಜತೆ ಕಳೆದ 24 ಗಂಟೆಗಳಲ್ಲಿ ಕರ್ನಾಟಕ ರಾಜ್ಯದಲ್ಲಿ 34,422 ಜನರು ಕೊವಿಡ್​ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ತೆರಳಿದ್ದಾರೆ.

ಇಂದು ಪತ್ತೆಯಾದ ಕೊವಿಡ್ ಸೋಂಕಿತರನ್ನೂ ಸೇರಿಸಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 21,71,931ಕ್ಕೆ ಏರಿಕೆಯಾಗಿದೆ. ಈವರೆಗೆ ಸೋಂಕಿತರ ಪೈಕಿ 15,44,982 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 21,434 ಜನರ ಸಾವನ್ನಪ್ಪಿದ್ದು, 6,05,494 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಈ ಪ್ರದೇಶದಲ್ಲಿ ಇಷ್ಟು ದಿನಗಳಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕು ದಾಖಲು; ಅಧಿಕಾರಿಗಳಲ್ಲಿ ಆತಂಕ

ಸೋಂಕಿತರ ಸಾವನ್ನು ನೋಡಲು ಕಷ್ಟವಾಗುತ್ತಿದೆ; ಕೊರೊನಾ ಪರಿಸ್ಥಿತಿ ವಿವರಿಸುತ್ತಾ ಕಣ್ಣೀರು ಹಾಕಿದ ವೈದ್ಯ

Published On - 9:03 pm, Sat, 15 May 21

Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ