AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಧಾರ್ ಪೌರತ್ವದ ದಾಖಲೆಯಲ್ಲ’; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಬೆಂಬಲ

ಆಧಾರ್ ಅನ್ನು ಪೌರತ್ವದ ನಿರ್ಣಾಯಕ ದಾಖಲೆಯಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂಬ ಭಾರತದ ಚುನಾವಣಾ ಆಯೋಗದ (ECI) ನಿಲುವನ್ನು ಸುಪ್ರೀಂ ಕೋರ್ಟ್ ಇಂದು ಅನುಮೋದಿಸಿದೆ. ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಅನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

'ಆಧಾರ್ ಪೌರತ್ವದ ದಾಖಲೆಯಲ್ಲ'; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಬೆಂಬಲ
Aadhaar
ಸುಷ್ಮಾ ಚಕ್ರೆ
|

Updated on:Aug 12, 2025 | 5:27 PM

Share

ನವದೆಹಲಿ, ಆಗಸ್ಟ್ 12: ಆಧಾರ್ ಕಾರ್ಡ್ (Aadhaar Card) ಅನ್ನು ಭಾರತೀಯ ಪೌರತ್ವದ ಪುರಾವೆಯಾಗಿ ಪರಿಗಣಿಸಲು ಆಗುವುದಿಲ್ಲ. ಅದನ್ನು ಸರಿಯಾದ ಪರಿಶೀಲನೆಗೆ ಒಳಪಡಿಸಬೇಕು ಎಂಬ ಚುನಾವಣಾ ಆಯೋಗದ ನಿಲುವನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿಹಿಡಿದಿದೆ. ವಿವಿಧ ಸೇವೆಗಳನ್ನು ಪಡೆಯಲು ಆಧಾರ್ ಒಂದು ಪ್ರಮುಖ ಗುರುತಿನ ದಾಖಲೆಯಾಗಿ ಕಾರ್ಯನಿರ್ವಹಿಸುತ್ತದೆಯಾದರೂ ಅದು ಭಾರತೀಯ ಪೌರತ್ವದ ದಾಖಲೆಯಲ್ಲ ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ. ಬಿಹಾರದ ವಿಶೇಷ ಪರಿಷ್ಕರಣೆ (SIR) ಕುರಿತಾದ ವಿವಾದದ ಮಧ್ಯೆ ಸುಪ್ರೀಂ ಕೋರ್ಟ್‌ನ ಈ ತೀರ್ಪು ಬಂದಿದೆ. ಈ ವಿಷಯವನ್ನು ಆಲಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೂರ್ಯ ಕಾಂತ್, ಆಧಾರ್ ಕಾರ್ಡ್ ಅನ್ನು ನಿರ್ಣಾಯಕ ಪುರಾವೆಯಾಗಿ ಸ್ವೀಕರಿಸಲು ಸಾಧ್ಯವಿಲ್ಲ ಎಂಬ ಚುನಾವಣಾ ಆಯೋಗದ ನಿರ್ಧಾರ ಸರಿಯಾಗಿದೆ. ಅದನ್ನು ಮಾನ್ಯ ಪುರಾವೆಯಾಗಿ ಪರಿಗಣಿಸುವ ಮೊದಲು ಸರಿಯಾದ ಪರಿಶೀಲನೆ ಅತ್ಯಗತ್ಯ ಎಂದು ಹೇಳಿದ್ದಾರೆ.

“ಆಧಾರ್ ಅನ್ನು ಪೌರತ್ವದ ನಿರ್ಣಾಯಕ ಪುರಾವೆಯಾಗಿ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಹೇಳುವುದು ಸರಿಯಾಗಿದೆ. ಅದನ್ನು ಪರಿಶೀಲಿಸಬೇಕಾಗಿದೆ” ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಅರ್ಜಿದಾರರ ಪರವಾಗಿ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರಿಗೆ ತಿಳಿಸಿದ್ದಾರೆ. ಭಾರತದ ಚುನಾವಣಾ ಆಯೋಗವು ಮತದಾರರ ಪರಿಶೀಲನಾ ಪ್ರಕ್ರಿಯೆಯನ್ನು ನಡೆಸುವ ಅಧಿಕಾರವನ್ನು ಹೊಂದಿದೆಯೇ ಎಂಬುದು ಮುಖ್ಯ. ಚುನಾವಣಾ ಆಯೋಗಕ್ಕೆ ಅಂತಹ ಅಧಿಕಾರವಿಲ್ಲದಿದ್ದರೆ ಆ ವಿಷಯ ಅಲ್ಲಿಗೆ ಕೊನೆಗೊಳ್ಳುತ್ತದೆ ಒಂದುವೇಳೆ ಅದು ಅಧಿಕಾರವನ್ನು ಹೊಂದಿದ್ದರೆ, ಪ್ರಕ್ರಿಯೆಗೆ ಯಾವುದೇ ಆಕ್ಷೇಪಣೆ ಇರಬಾರದು ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರದ ಯಾವುದೇ ಮತದಾರರನ್ನು ಪೂರ್ವ ಸೂಚನೆ ಇಲ್ಲದೆ ಪಟ್ಟಿಯಿಂದ ತೆಗೆದುಹಾಕುವುದಿಲ್ಲ: ಚುನಾವಣಾ ಆಯೋಗ

ಎಸ್‌ಐಆರ್ ಪ್ರಕ್ರಿಯೆಯು ಕಾನೂನಿನ ಪ್ರಕಾರವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. “ಅಂತಹ ಪ್ರಕ್ರಿಯೆಯನ್ನು ಮುಂದುವರಿಸಬಹುದೇ ಅಥವಾ ಇಲ್ಲವೇ ಎಂದು ನಮಗೆ ತಿಳಿಸಿ. ಷರತ್ತುಬದ್ಧ ಯೋಜನೆಯಡಿಯಲ್ಲಿ ಅಂತಹ ಪ್ರಕ್ರಿಯೆಯನ್ನು ಅನುಮೋದಿಸಲಾಗಿದೆ ಎಂದು ನೀವು ಹೇಳಿದರೆ ನಾವು ಪ್ರಕ್ರಿಯೆಯನ್ನು ಪರಿಗಣಿಸುತ್ತೇವೆ. ಅದು ಸಂವಿಧಾನದಲ್ಲಿಲ್ಲ ಎಂದು ನೀವು ಹೇಳಿದರೆ ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿ: Video: ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ನೇತೃತ್ವದಲ್ಲಿ ಸಂಸದರ ಮೆರವಣಿಗೆ

ಕರಡು ಮತದಾರರ ಪಟ್ಟಿಯಿಂದ 65 ಲಕ್ಷ ಹೆಸರುಗಳನ್ನು ಹೊರಗಿಡಲಾಗಿದೆ ಎಂಬ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್ ಮತ್ತಷ್ಟು ಸ್ಪಷ್ಟತೆ ಕೋರಿತು. ಈ ಅಂಕಿಅಂಶಗಳ ಆಧಾರವನ್ನು ಪ್ರಶ್ನಿಸಿ “ನಿಮ್ಮ ಅನುಮಾನವು ಕಾಲ್ಪನಿಕವೇ ಅಥವಾ ನಿಜವಾದ ಕಾಳಜಿಯೇ ಎಂದು ನಾವು ಅರ್ಥಮಾಡಿಕೊಳ್ಳಲು ಬಯಸುತ್ತೇವೆ” ಎಂದು ಹೇಳಿತು. 12 ಜೀವಂತ ಜನರನ್ನು ಸತ್ತಂತೆ ತೋರಿಸಲಾಗಿದೆ ಎಂದು ಕಪಿಲ್ ಸಿಬಲ್ ಹೇಳುತ್ತಾರೆ. ಆದರೆ, ಅದು ಕೇವಲ ಕರಡು ಪಟ್ಟಿ ಎಂದು ಚುನಾವಣಾ ಆಯೋಗ ಹೇಳುತ್ತದೆ. “ಎಷ್ಟು ಜನರು ಸತ್ತಿದ್ದಾರೆಂದು ಗುರುತಿಸಲಾಗಿದೆ ಎಂದು ನಾವು ನಿಮ್ಮಿಂದ ತಿಳಿದುಕೊಳ್ಳಲು ಬಯಸುತ್ತೇವೆ. ನಿಮ್ಮ ಅಧಿಕಾರಿಗಳು ಈ ಬಗ್ಗೆ ಸ್ವಲ್ಪ ಕೆಲಸ ಮಾಡಿರಬೇಕಲ್ಲವೇ?” ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗವನ್ನು ಪ್ರಶ್ನಿಸಿತು.

ಬಿಹಾರದ ಎಸ್‌ಐಆರ್ ಎಂದರೇನು?:

ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಮುಂಚಿತವಾಗಿ ಬಿಹಾರ ರಾಜ್ಯದ ಮತದಾರರ ಪಟ್ಟಿಯನ್ನು ನವೀಕರಿಸಲು ಮತ್ತು ಸರಿಪಡಿಸಲು ಬಿಹಾರದ ವಿಶೇಷ ತೀವ್ರ ಪರಿಷ್ಕರಣೆ (SIR)ಯನ್ನು ಚುನಾವಣಾ ಆಯೋಗವು ನಡೆಸುತ್ತಿದೆ. ಈ ಪ್ರಕ್ರಿಯೆಯ ಅಡಿಯಲ್ಲಿ, ಅಧಿಕಾರಿಗಳು ಅಸ್ತಿತ್ವದಲ್ಲಿರುವ ಮತದಾರರ ವಿವರಗಳನ್ನು ಪರಿಶೀಲಿಸುತ್ತಾರೆ, ಅರ್ಹ ಹೊಸ ಮತದಾರರ ಹೆಸರುಗಳನ್ನು ಸೇರಿಸುತ್ತಾರೆ ಮತ್ತು ಮರಣ ಹೊಂದಿದ ಅಥವಾ ಸ್ಥಳಾಂತರಗೊಂಡ ಅಥವಾ ಅನರ್ಹರಾಗಿರುವವರ ಹೆಸರುಗಳನ್ನು ತೆಗೆದುಹಾಕುತ್ತಾರೆ. ಇದು ಬೂತ್ ಮಟ್ಟದ ಅಧಿಕಾರಿಗಳ (BLO) ಕ್ಷೇತ್ರ ಭೇಟಿಗಳು, ಮತದಾರರಿಂದ ಫಾರ್ಮ್‌ಗಳನ್ನು ಸಂಗ್ರಹಿಸುವುದು ಮತ್ತು ಮತದಾರರ ಪಟ್ಟಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ದಾಖಲೆಗಳನ್ನು ಪರಿಶೀಲಿಸುವುದನ್ನು ಒಳಗೊಂಡಿರುತ್ತದೆ. ಚುನಾವಣಾ ಸಂಸ್ಥೆಯ ಪ್ರಕಾರ, ಚುನಾವಣೆಗಳು ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ನಡೆಯುವಂತೆ ಮತದಾರರ ಪಟ್ಟಿಯನ್ನು ಸ್ವಚ್ಛವಾಗಿ ಮತ್ತು ದೋಷ ಮುಕ್ತವಾಗಿಡುವುದು ಗುರಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 5:24 pm, Tue, 12 August 25

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ