Shraddha Walker Murder Case: ಶ್ರದ್ಧಾ ವಾಕರ್​​ ಸ್ನೇಹಿತರೊಬ್ಬರನ್ನು ಭೇಟಿ ಮಾಡಿದ್ದಕ್ಕೆ ರೊಚ್ಚಿಗೆದ್ದಿದ್ದ ಅಫ್ತಾಬ್ ಪೂನಾವಾಲಾ

Aaftab Poonawalla ಪೂನಾವಾಲಾ ಶ್ರದ್ದಾಳ ದೇಹದ ಮೇಲೆ ಸಿಗರೇಟ್ ಸುಡುತ್ತಿದ್ದ. ಅವನಿಗೆ "ಮತ್ತೊಂದು ಅವಕಾಶ" ನೀಡಲು ಬಯಸಿದ್ದರಿಂದ ಶ್ರದ್ಧಾ ಪೊಲೀಸರನ್ನು ಸಂಪರ್ಕಿಸಲು ನಿರಾಕರಿಸಿದಳು ಎಂದು ಆಕೆಯ ಸ್ನೇಹಿತರೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ

Shraddha Walker Murder Case: ಶ್ರದ್ಧಾ ವಾಕರ್​​ ಸ್ನೇಹಿತರೊಬ್ಬರನ್ನು ಭೇಟಿ ಮಾಡಿದ್ದಕ್ಕೆ ರೊಚ್ಚಿಗೆದ್ದಿದ್ದ ಅಫ್ತಾಬ್ ಪೂನಾವಾಲಾ
ಅಫ್ತಾಬ್ ಅಮೀನ್ ಪೂನಾವಾಲಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jan 24, 2023 | 10:02 PM

ದೆಹಲಿಯಲ್ಲಿ ತನ್ನ ಲಿವ್-ಇನ್ ಸಂಗಾತಿ ಶ್ರದ್ಧಾ ವಾಕರ್‌ನ್ನು (Shraddha Walkar) ಕೊಂದು ಕತ್ತರಿಸಿದ್ದ ಅಫ್ತಾಬ್ ಪೂನಾವಾಲಾ(Aaftab Poonawala). ಶ್ರದ್ಧಾ ಇನ್ನೊಬ್ಬ ಸ್ನೇಹಿತನನ್ನು ಭೇಟಿ ಮಾಡಿದ್ದಕ್ಕೆ ಅಫ್ತಾಬ್ ಕೋಪ ಬಂದು ಆಕೆಯ ಮೇಲೆ ಹಲ್ಲೆ ನಡೆಸಿದ್ದ ಎಂದು ದೆಹಲಿ ಪೊಲೀಸರು ಸಲ್ಲಿಸಿದ 6,629 ಪುಟಗಳ ಬೃಹತ್ ಚಾರ್ಜ್‌ಶೀಟ್‌ನಲ್ಲಿ (chargesheet) ಹೇಳಲಾಗಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ಶ್ರದ್ಧಾಳ ಕತ್ತು ಹಿಸುಕಿ ಕೊಂದಿರುವುದಾಗಿ ತಪ್ಪೊಪ್ಪಿಕೊಂಡ ಪೂನಾವಾಲಾ, ತಿಹಾರ್ ಜೈಲಿನಿಂದ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರುಪಡಿಸಲಾಗಿತ್ತು. ಈತನ ನ್ಯಾಯಾಂಗ ಬಂಧನವನ್ನು ಫೆಬ್ರವರಿ 7 ರವರೆಗೆ ವಿಸ್ತರಿಸಲಾಗಿದೆ. ಘಟನೆಯ ದಿನ, ವಾಕರ್ ತನ್ನ ಸ್ನೇಹಿತರೊಬ್ಬರನ್ನು ಭೇಟಿಯಾಗಲು ಹೋಗಿದ್ದಳು, ಅದು ಪೂನಾವಾಲಾಗೆ ಇಷ್ಟವಾಗಲಿಲ್ಲ. ಆಮೇಲೆ ಅವನು ಹಿಂಸಾತ್ಮಕವಾಗಿ ವರ್ತಿಸಿದ್ದು ಈ ಘಟನೆ ಸಂಭವಿಸಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ದಕ್ಷಿಣ) ಮೀನು ಚೌಧರಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಶ್ರದ್ಧಾ ವಾಕರ್ ಹತ್ಯೆಯಾದ ನಂತರ ಆಕೆಯ ಫೋಟೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು ಅದರಲ್ಲಿ ಆಕೆಯ ಮುಖದ ಮೇಲೆ ಗಾಯದ ಗುರುತುಗಳಿತ್ತು. ಪೂನಾವಾಲಾ ಆಕೆಯ ಮೇಲೆ ನಡೆಸಿದ ಹಲ್ಲೆಯ ಗುರುತುಗಳು ಎಂದು ಶ್ರದ್ಧಾಳ ಸ್ನೇಹಿತರು ಹೇಳಿದ್ದಾರೆ.

ಪೂನಾವಾಲಾ ಶ್ರದ್ದಾಳ ದೇಹದ ಮೇಲೆ ಸಿಗರೇಟ್ ಸುಡುತ್ತಿದ್ದ. ಅವನಿಗೆ “ಮತ್ತೊಂದು ಅವಕಾಶ” ನೀಡಲು ಬಯಸಿದ್ದರಿಂದ ಶ್ರದ್ಧಾ ಪೊಲೀಸರನ್ನು ಸಂಪರ್ಕಿಸಲು ನಿರಾಕರಿಸಿದಳು ಎಂದು ಆಕೆಯ ಸ್ನೇಹಿತರೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಆಕೆಯನ್ನು ಕೆಟ್ಟದಾಗಿ ನಡೆಸಿಕೊಂಡರೆ ನಿನ್ನ ವಿರುದ್ಧ ಪೊಲೀಸ್ ದೂರು ದಾಖಲಿಸುವುದಾಗಿ ವಾಕರ್ ಸ್ನೇಹಿತರು ಪೂನಾವಾಲಾಗೆ ಬೆದರಿಕೆ ಹಾಕಿದ್ದರು ಮೆಹ್ರೌಲಿ ಹತ್ಯೆ ಪ್ರಕರಣದಲ್ಲಿ ಪೂನಾವಾಲಾ ವಿರುದ್ಧ ದೆಹಲಿಯ ಸಾಕೇತ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಪೊಲೀಸರು ಇದನ್ನು ಸೆಕ್ಷನ್ 302, 201 ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಇತರ ವಿಭಾಗಗಳ ಅಡಿಯಲ್ಲಿ ಪಟ್ಟಿ ಮಾಡಿದ್ದಾರೆ.

ವಾಕರ್ ಅವರ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಹಲವಾರು ದಿನಗಳ ಕಾಲ ದಕ್ಷಿಣ ದೆಹಲಿಯ ವಿವಿಧ ಭಾಗಗಳಲ್ಲಿ ಎಸೆದಿದ್ದ ಪೂನಾವಾಲಾ. ತನಿಖೆಯ ವೇಳೆ ಪೂನಾವಾಲಾ ದೇಹವನ್ನು ತುಂಡರಿಸಲು ಹಲವು ಆಯುಧಗಳನ್ನು ಬಳಸಿರುವುದು ಪತ್ತೆಯಾಗಿದೆ. ಚಾರ್ಜ್‌ಶೀಟ್‌ಗಾಗಿ 150 ಕ್ಕೂ ಹೆಚ್ಚು ಸಾಕ್ಷಿಗಳ ಸಾಕ್ಷ್ಯವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಪೂನಾವಾಲಾ ಅವರ ಧ್ವನಿ ಮಾದರಿಯನ್ನೂ ಸಂಗ್ರಹಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್