ಎಂವಿಎ ಜೊತೆ ಮೈತ್ರಿಯಿಲ್ಲ; ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಆಮ್ ಆದ್ಮಿ ಪಕ್ಷ ನಿರ್ಧಾರ

Maharashtra Assembly Elections: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಜೊತೆ ಮೈತ್ರಿ ಮಾಡಿಕೊಳ್ಳುವ ಸುದ್ದಿಯನ್ನು ಆಮ್ ಆದ್ಮಿ ಪಕ್ಷ ತಳ್ಳಿಹಾಕಿದ್ದು, ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಎಎಪಿ ನಾಯಕಿ ಪ್ರೀತಿ ಶರ್ಮಾ ಮೆನನ್ ಮಾತನಾಡಿ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ. 36 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದಿದ್ದಾರೆ.

ಎಂವಿಎ ಜೊತೆ ಮೈತ್ರಿಯಿಲ್ಲ; ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಆಮ್ ಆದ್ಮಿ ಪಕ್ಷ ನಿರ್ಧಾರ
ಅರವಿಂದ್ ಕೇಜ್ರಿವಾಲ್
Follow us
ಸುಷ್ಮಾ ಚಕ್ರೆ
|

Updated on: Aug 05, 2024 | 7:12 PM

ಮುಂಬೈ: ಈಗಾಗಲೇ ದೆಹಲಿ, ಪಂಜಾಬ್​ನಲ್ಲಿ ಭದ್ರವಾಗಿ ನೆಲೆಯೂರಿರುವ ಆಮ್ ಆದ್ಮಿ ಪಕ್ಷ ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕೂಡ ಸ್ಪರ್ಧಿಸಲು ನಿರ್ಧರಿಸಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ಆಮ್ ಆದ್ಮಿ ಪಕ್ಷ ಇಂದು ನಿರ್ಧರಿಸಿದೆ. ಮಹಾ ವಿಕಾಸ್ ಅಘಾಡಿಯೊಂದಿಗೆ ಯಾವುದೇ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಊಹಾಪೋಹಗಳನ್ನು ನಿರಾಕರಿಸಿದೆ.

ಈ ಬಗ್ಗೆ ಎಎಪಿ ನಾಯಕಿ ಪ್ರೀತಿ ಶರ್ಮಾ ಮೆನನ್ ಮಾಹಿತಿ ನೀಡಿದ್ದು, ಪಕ್ಷವು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಮತ್ತು ಮುಂಬೈನ ಎಲ್ಲಾ 36 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ವಿರೋಧ ಪಕ್ಷದ ಇಂಡಿಯಾ ಮೈತ್ರಿಕೂಟದ ಭಾಗವಾಗಿದೆ. ಮೈತ್ರಿಕೂಟವು ಲೋಕಸಭೆ ಚುನಾವಣೆಗಾಗಿ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಒಟ್ಟಿಗೆ ಮುಂದುವರಿಯುತ್ತದೆ. ಆದರೆ, ಮಹಾರಾಷ್ಟ್ರದಲ್ಲಿ ಯಾವುದೇ ಮೈತ್ರಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Bangladesh Violence: ಮಧ್ಯಂತರ ಸರ್ಕಾರ ರಚನೆ’; ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಬಾಂಗ್ಲಾದೇಶ ಸೇನಾ ಮುಖ್ಯಸ್ಥ ಘೋಷಣೆ

ಎಎಪಿ ಮುಂಬೈನ ಎಲ್ಲಾ 36 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಮಹಾರಾಷ್ಟ್ರದ ಉಳಿದ ಭಾಗಗಳಲ್ಲಿ, ನಮ್ಮ ಸಹೋದ್ಯೋಗಿಗಳು ಮತ್ತು ಸ್ವಯಂಸೇವಕರನ್ನು ಹುರಿದುಂಬಿಸಲಾಗಿದೆ ಎಂದು ಮೆನನ್ ಹೇಳಿದರು. ಎಎಪಿ ರಾಷ್ಟ್ರೀಯ ಪಕ್ಷವಾಗಿದ್ದು, ಅರವಿಂದ್ ಕೇಜ್ರಿವಾಲ್ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಜನಾಂದೋಲನದಿಂದ ಹೊರಹೊಮ್ಮಿದೆ. ಈಗ ದೆಹಲಿ ಮತ್ತು ಪಂಜಾಬ್‌ನಲ್ಲಿ ಆಪ್ ಅಧಿಕಾರದಲ್ಲಿದೆ. ಆದರೆ ಗೋವಾ ಮತ್ತು ಗುಜರಾತ್‌ನಲ್ಲಿ ಶಾಸಕರು ಮತ್ತು ಸಂಸದರನ್ನು ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಆಮ್ ಆದ್ಮಿ ನಾಯಕರೊಂದಿಗೆ ನಾಳೆ ಬಿಜೆಪಿ ಕಚೇರಿಗೆ ಬರುತ್ತೇನೆ, ಬಂಧಿಸಿ ನೋಡೋಣ; ಕೇಜ್ರಿವಾಲ್

ಬಿಜೆಪಿ ಮಹಾರಾಷ್ಟ್ರ ಮತ್ತು ಮುಂಬೈ ವಿರೋಧಿ ಪಕ್ಷವಾಗಿದ್ದು, ಏಕನಾಥ್ ಶಿಂಧೆ ಸರ್ಕಾರಕ್ಕೆ ಸಾರ್ವಜನಿಕ ಕಲ್ಯಾಣಕ್ಕಾಗಿ ಸಮಯವಿಲ್ಲ. ಅದು ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡುವುದರಲ್ಲಿ ನಿರತವಾಗಿದೆ ಎಂದು ಅವರು ಆರೋಪಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್