AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ನ್ಯಾಯಾಲಯ

ಆಗಸ್ಟ್ 24, 2017 ರಂದು ಸಿಬಿಐ ದಾಖಲಿಸಿದ ಪ್ರಥಮ ಮಾಹಿತಿ ವರದಿ ಅಥವಾ ಎಫ್‌ಐಆರ್ ಆಧಾರದ ಮೇಲೆ ತನಿಖಾ ಸಂಸ್ಥೆ ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಯನ್ನು ಆರಂಭಿಸಿತ್ತು.

ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ನ್ಯಾಯಾಲಯ
ಸತ್ಯೇಂದರ್ ಜೈನ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Nov 17, 2022 | 6:05 PM

Share

ದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ(money laundering case) ಆಮ್ ಆದ್ಮಿ ಪಕ್ಷದ (AAP) ನಾಯಕ ಸತ್ಯೇಂದ್ರ ಜೈನ್(Satyendar Jain) ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ. ಜೈನ್ ಅವರ ಮನವಿಯ ಜೊತೆಗೆ, ಪ್ರಕರಣದ ಇಬ್ಬರು ಸಹ-ಆರೋಪಿಗಳಾದ ವೈಭವ್ ಜೈನ್ ಮತ್ತು ಅಂಕುಶ್ ಜೈನ್ ಅವರ ಜಾಮೀನು ಅರ್ಜಿಗಳನ್ನು ಸಹ ನ್ಯಾಯಾಲಯವು ವಜಾಗೊಳಿಸಿದೆ. 58ರ ಹರೆಯದ ದೆಹಲಿ ಸಚಿವರನ್ನು ಜಾರಿ ನಿರ್ದೇಶನಾಲಯವು ಮೇ 30 ರಂದು ಬಂಧಿಸಿತ್ತು. ಆಗಸ್ಟ್ 24, 2017 ರಂದು ಸಿಬಿಐ ದಾಖಲಿಸಿದ ಪ್ರಥಮ ಮಾಹಿತಿ ವರದಿ ಅಥವಾ ಎಫ್‌ಐಆರ್ ಆಧಾರದ ಮೇಲೆ ತನಿಖಾ ಸಂಸ್ಥೆ ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಯನ್ನು ಆರಂಭಿಸಿತ್ತು. ಜೈನ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿರುವುದು ಇದು ಎರಡನೇ ಬಾರಿ. ಆರೋಪದ ಗಂಭೀರತೆಯ ದೃಷ್ಟಿಯಿಂದ ಜೈನ್ ಅವರ ಜಾಮೀನು ಅರ್ಜಿಯನ್ನು ಜೂನ್‌ನಲ್ಲಿ ತಿರಸ್ಕರಿಸಲಾಗಿತ್ತು. ಜಾಮೀನು ಅರ್ಜಿಯನ್ನು ವಿರೋಧಿಸಿದ ಜಾರಿ ನಿರ್ದೇಶನಾಲಯ, ಸತ್ಯೇಂದ್ರ ಜೈನ್ ಅವರು ಏಜೆನ್ಸಿಯನ್ನು ದಾರಿತಪ್ಪಿಸಿದ್ದಾರೆ ಮತ್ತು ಅಸಹಕಾರ ಹೊಂದಿದ್ದಾರೆ ನ್ಯಾಯಾಲಯದಲ್ಲಿ ಹೇಳಿತ್ತು.

ಈ ವಾರದ ಆರಂಭದಲ್ಲಿ ಸಚಿವರಿಗೆ ವಿಐಪಿ ರೀತಿಯಲ್ಲಿ ಸೌಕರ್ಯ ನೀಡಿದ್ದಕ್ಕಾಗಿ ದೆಹಲಿಯ ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ನ್ನು ಅಮಾನತುಗೊಳಿಸಲಾಗಿದೆ.

ಜೈನ್ ಐಷಾರಾಮಿ ಜೀವನಶೈಲಿಯನ್ನು ಆನಂದಿಸುತ್ತಿದ್ದಾರೆ ಮತ್ತು ಪ್ರಕರಣದ ಸಹ-ಆರೋಪಿಗಳನ್ನು ನಿಯಮಿತವಾಗಿ ಭೇಟಿ ಮಾಡುವ ಮೂಲಕ ತನಿಖೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯವು ಸಿಸಿಟಿವಿ ದೃಶ್ಯಾವಳಿಗಳನ್ನು ಸಲ್ಲಿಸಿದ ನಂತರ ಕ್ರಮ ತೆಗೆದುಕೊಳ್ಳಲಾಗಿದೆ.

ಸತ್ಯೇಂದ್ರ ಜೈನ್ ಅವರ ಪತ್ನಿ ಪೂನಂ ಜೈನ್ ಅವರ ಸೆಲ್‌ಗೆ ಆಗಾಗ್ಗೆ ಭೇಟಿ ನೀಡುತ್ತಿದ್ದರು, ಇದು ಜೈಲು ನಿಯಮಗಳಿಗೆ ವಿರುದ್ಧವಾಗಿದೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Thu, 17 November 22

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್