ದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ(money laundering case) ಆಮ್ ಆದ್ಮಿ ಪಕ್ಷದ (AAP) ನಾಯಕ ಸತ್ಯೇಂದ್ರ ಜೈನ್(Satyendar Jain) ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ. ಜೈನ್ ಅವರ ಮನವಿಯ ಜೊತೆಗೆ, ಪ್ರಕರಣದ ಇಬ್ಬರು ಸಹ-ಆರೋಪಿಗಳಾದ ವೈಭವ್ ಜೈನ್ ಮತ್ತು ಅಂಕುಶ್ ಜೈನ್ ಅವರ ಜಾಮೀನು ಅರ್ಜಿಗಳನ್ನು ಸಹ ನ್ಯಾಯಾಲಯವು ವಜಾಗೊಳಿಸಿದೆ. 58ರ ಹರೆಯದ ದೆಹಲಿ ಸಚಿವರನ್ನು ಜಾರಿ ನಿರ್ದೇಶನಾಲಯವು ಮೇ 30 ರಂದು ಬಂಧಿಸಿತ್ತು. ಆಗಸ್ಟ್ 24, 2017 ರಂದು ಸಿಬಿಐ ದಾಖಲಿಸಿದ ಪ್ರಥಮ ಮಾಹಿತಿ ವರದಿ ಅಥವಾ ಎಫ್‌ಐಆರ್ ಆಧಾರದ ಮೇಲೆ ತನಿಖಾ ಸಂಸ್ಥೆ ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಯನ್ನು ಆರಂಭಿಸಿತ್ತು. ಜೈನ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿರುವುದು ಇದು ಎರಡನೇ ಬಾರಿ. ಆರೋಪದ ಗಂಭೀರತೆಯ ದೃಷ್ಟಿಯಿಂದ ಜೈನ್ ಅವರ ಜಾಮೀನು ಅರ್ಜಿಯನ್ನು ಜೂನ್‌ನಲ್ಲಿ ತಿರಸ್ಕರಿಸಲಾಗಿತ್ತು. ಜಾಮೀನು ಅರ್ಜಿಯನ್ನು ವಿರೋಧಿಸಿದ ಜಾರಿ ನಿರ್ದೇಶನಾಲಯ, ಸತ್ಯೇಂದ್ರ ಜೈನ್ ಅವರು ಏಜೆನ್ಸಿಯನ್ನು ದಾರಿತಪ್ಪಿಸಿದ್ದಾರೆ ಮತ್ತು ಅಸಹಕಾರ ಹೊಂದಿದ್ದಾರೆ ನ್ಯಾಯಾಲಯದಲ್ಲಿ ಹೇಳಿತ್ತು.
ಈ ವಾರದ ಆರಂಭದಲ್ಲಿ ಸಚಿವರಿಗೆ ವಿಐಪಿ ರೀತಿಯಲ್ಲಿ ಸೌಕರ್ಯ ನೀಡಿದ್ದಕ್ಕಾಗಿ ದೆಹಲಿಯ ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ನ್ನು ಅಮಾನತುಗೊಳಿಸಲಾಗಿದೆ.
ಜೈನ್ ಐಷಾರಾಮಿ ಜೀವನಶೈಲಿಯನ್ನು ಆನಂದಿಸುತ್ತಿದ್ದಾರೆ ಮತ್ತು ಪ್ರಕರಣದ ಸಹ-ಆರೋಪಿಗಳನ್ನು ನಿಯಮಿತವಾಗಿ ಭೇಟಿ ಮಾಡುವ ಮೂಲಕ ತನಿಖೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯವು ಸಿಸಿಟಿವಿ ದೃಶ್ಯಾವಳಿಗಳನ್ನು ಸಲ್ಲಿಸಿದ ನಂತರ ಕ್ರಮ ತೆಗೆದುಕೊಳ್ಳಲಾಗಿದೆ.
ಸತ್ಯೇಂದ್ರ ಜೈನ್ ಅವರ ಪತ್ನಿ ಪೂನಂ ಜೈನ್ ಅವರ ಸೆಲ್‌ಗೆ ಆಗಾಗ್ಗೆ ಭೇಟಿ ನೀಡುತ್ತಿದ್ದರು, ಇದು ಜೈಲು ನಿಯಮಗಳಿಗೆ ವಿರುದ್ಧವಾಗಿದೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:03 pm, Thu, 17 November 22