ದೆಹಲಿಯಲ್ಲಿ ಸೇವೆಗಳ ಮೇಲೆ ಕೇಂದ್ರದ ನಿಯಂತ್ರಣ: ಸುಗ್ರೀವಾಜ್ಞೆಯನ್ನು ಸುಪ್ರೀಂನಲ್ಲಿ ಪ್ರಶ್ನಿಸಿದ ಎಎಪಿ ಸರ್ಕಾರ

|

Updated on: Jun 30, 2023 | 8:03 PM

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಜುಲೈ 3 ರಂದು ಕೇಂದ್ರ ದೆಹಲಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಕೇಂದ್ರದ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡಲಿದ್ದಾರೆ ಎಂದು ಎಎಪಿ ಹೇಳಿದೆ.

ದೆಹಲಿಯಲ್ಲಿ ಸೇವೆಗಳ ಮೇಲೆ ಕೇಂದ್ರದ ನಿಯಂತ್ರಣ: ಸುಗ್ರೀವಾಜ್ಞೆಯನ್ನು ಸುಪ್ರೀಂನಲ್ಲಿ ಪ್ರಶ್ನಿಸಿದ ಎಎಪಿ ಸರ್ಕಾರ
ಸುಪ್ರೀಂಕೋರ್ಟ್
Follow us on

ಆಮ್ ಆದ್ಮಿ ಪಕ್ಷ (APP) ನೇತೃತ್ವದ ದೆಹಲಿ (Delhi) ಸರ್ಕಾರವು ರಾಷ್ಟ್ರ ರಾಜಧಾನಿಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಗ್ರೂಪ್ ಎ ಅಧಿಕಾರಿಗಳು ಮತ್ತು DANICS ಅಧಿಕಾರಿಗಳ ವರ್ಗಾವಣೆ, ನೇಮಕ ಮಾಡುವ ಶಿಫಾರಸು ಅಧಿಕಾರವನ್ನು ಹೊಂದಿರುವ ರಾಷ್ಟ್ರೀಯ ರಾಜಧಾನಿ ನಾಗರಿಕ ಸೇವಾ ಪ್ರಾಧಿಕಾರವನ್ನು ರಚಿಸುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯನ್ನು ಸುಪ್ರೀಂಕೋರ್ಟ್‌ನಲ್ಲಿ (Supreme Court) ಪ್ರಶ್ನಿಸಿದೆ. ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ (ತಿದ್ದುಪಡಿ) ಸುಗ್ರೀವಾಜ್ಞೆ, 2023 ಫೆಡರಲ್, ಪ್ರಜಾಸತ್ತಾತ್ಮಕ ಆಡಳಿತವನ್ನು ಉಲ್ಲಂಘಿಸುತ್ತದೆ. ರಾಷ್ಟ್ರೀಯ ರಾಜಧಾನಿ ಪ್ರದೇಶದ ದೆಹಲಿ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳ ಮೇಲಿನ ನಿಯಂತ್ರಣವನ್ನು ಕೇಂದ್ರ ಸರ್ಕಾರ ಕಸಿದುಕೊಳ್ಳುತ್ತಿದೆ ಎಂದು ಆಪ್ ಸರ್ಕಾರ ಹೇಳಿದೆ.

ಪೊಲೀಸ್, ಕಾನೂನು ಮತ್ತು ಸುವ್ಯವಸ್ಥೆ,ಕಂದಾಯ ಇಲಾಖೆ ಹೊರತುಪಡಿಸಿ ದೆಹಲಿಯಲ್ಲಿನ ಸರ್ಕಾರಿ ಸೇವೆಗಳ ನಿಯಂತ್ರಣವನ್ನು ಚುನಾಯಿತ ಸರ್ಕಾರಕ್ಕೆ ವಹಿಸಿ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಅಂದಹಾಗೆ ಸುಪ್ರೀಂಕೋರ್ಟ್ ತೀರ್ಪನ್ನು ನಿರಾಕರಿಸಲು ಕೇಂದ್ರ ಸರ್ಕಾರ ಈ ಸುಗ್ರೀವಾಜ್ಞೆಯನ್ನು ತಂದಿದೆ ಎಂದು ಎಎಪಿ ಹೇಳಿದೆ.

ಮೇ 11 ರಂದು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ ಜನರಿಂದ ಆಯ್ಕೆಯಾದ ಸರ್ಕಾರವು ಅಧಿಕಾರಶಾಹಿಗಳ ಮೇಲೆ ನಿಯಂತ್ರಣವನ್ನು ಹೊಂದಿಲ್ಲದಿದ್ದರೆ ಸಾಮೂಹಿಕ ಜವಾಬ್ದಾರಿಯ ತತ್ವದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಹೇಳಿತ್ತು. ಕೇಂದ್ರ ಸರ್ಕಾರವು ತನ್ನ ಮೇ 11 ರ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದೆ.

ಜುಲೈ 3 ರಂದು ಪಕ್ಷದ ಕಚೇರಿಯಲ್ಲಿ ಕೇಂದ್ರದ ಸುಗ್ರೀವಾಜ್ಞೆಯ ಪ್ರತಿಯನ್ನು ಸುಡಲಿದೆ ಆಪ್

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಜುಲೈ 3 ರಂದು ಕೇಂದ್ರ ದೆಹಲಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಕೇಂದ್ರದ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡಲಿದ್ದಾರೆ ಎಂದು ಎಎಪಿ ಹೇಳಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್, ರಾಷ್ಟ್ರ ರಾಜಧಾನಿಯ 70 ವಿಧಾನಸಭಾ ಕ್ಷೇತ್ರಗಳಲ್ಲಿ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡಲಾಗುತ್ತದೆ. ಜುಲೈ 3 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಕ್ಯಾಬಿನೆಟ್ ಸಚಿವರು ಮತ್ತು ಎಲ್ಲಾ ಶಾಸಕರು ಐಟಿಒ ಪಕ್ಷದ ಕಚೇರಿಯಲ್ಲಿ ಕಪ್ಪು ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡುತ್ತಾರೆ.

ಜುಲೈ 5 ರಂದು, ಎಲ್ಲಾ 70 ಸಂಸದೀಯ ಕ್ಷೇತ್ರಗಳಲ್ಲಿ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡಲಾಗುತ್ತದೆ. ಜುಲೈ 6 ಮತ್ತು ಜುಲೈ 13 ರ ನಡುವೆ, ದೆಹಲಿಯ ಮೂಲೆ ಮೂಲೆಗಳಲ್ಲಿ ಸುಗ್ರೀವಾಜ್ಞೆಯ ಪ್ರತಿಗಳಿಗೆ ಬೆಂಕಿ ಹಚ್ಚಲಾಗುತ್ತದೆ. ಏಳು ಉಪಾಧ್ಯಕ್ಷರು ದೆಹಲಿಯ ಪ್ರತಿಯೊಂದು ಪ್ರದೇಶದಲ್ಲಿ ಅವುಗಳನ್ನು ಸುಟ್ಟುಹಾಕಲಾಗಿದೆ ಎಂದು ಖಚಿತಪಡಿಸಿಕೊಳ್ಳಿ ಎಂದು ಭಾರದ್ವಾಜ್ ಹೇಳಿದರು.

ಇದನ್ನೂ ಓದಿ: ಅರವಿಂದ ಕೇಜ್ರಿವಾಲ್ ಮನೆ ನವೀಕರಣ ವಿವಾದ: ಸಿಎಜಿ ಲೆಕ್ಕಪರಿಶೋಧನೆಗೆ ಗೃಹ ಸಚಿವಾಲಯ ಒಪ್ಪಿಗೆ

ಕಪ್ಪು ಸುಗ್ರೀವಾಜ್ಞೆ ಮೂಲಕ ದೆಹಲಿಯ ಮೇಲೆ ಅಕ್ರಮ ನಿಯಂತ್ರಣವನ್ನು ತೆಗೆದುಕೊಳ್ಳಲು ಕೇಂದ್ರ ಪ್ರಯತ್ನಿಸುತ್ತಿದೆ ಎಂದು ಭಾರದ್ವಾಜ್ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಏಳು ಉಪಾಧ್ಯಕ್ಷರಾದ ದಿಲೀಪ್ ಪಾಂಡೆ, ಜರ್ನೈಲ್ ಸಿಂಗ್, ಗುಲಾಬ್ ಸಿಂಗ್, ಜಿತೇಂದರ್ ತೋಮರ್, ರಿತುರಾಜ್ ಝಾ, ರಾಜೇಶ್ ಗುಪ್ತಾ ಮತ್ತು ಕುಲದೀಪ್ ಕುಮಾರ್ ಉಪಸ್ಥಿತರಿದ್ದರು. ಪಕ್ಷವು ಜೂನ್ 11 ರಂದು ಸುಗ್ರೀವಾಜ್ಞೆಯ ವಿರುದ್ಧ ಮಹಾ-ರ್ಯಾಲಿಯನ್ನು ಆಯೋಜಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 7:56 pm, Fri, 30 June 23