AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Civic Poll Results 2021: ಮೊದಲ ಪ್ರಯತ್ನದಲ್ಲೇ ಮೋದಿ ನಾಡಿಗೆ ಭರ್ಜರಿ ಪ್ರವೇಶ ಪಡೆದ ‘ಜನಸಾಮಾನ್ಯ’

Gujarat Civic Poll Results 2021: ಸೂರತ್​ನಲ್ಲಿ ಈ ಹಿಂದೆ 36 ಸ್ಥಾನಗಳಲ್ಲಿ ಜಯಗಳಿಸಿದ್ದ ಕಾಂಗ್ರೆಸ್​ನದ್ದು ಈ ಬಾರಿ ಶೂನ್ಯ ಸಂಪಾದನೆ. ಕಳಪೆ ಪ್ರದರ್ಶನದ ಹೊಣೆ ಹೊತ್ತು ಸೂರತ್ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಾಬು ರಾಯ್ಕಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Gujarat Civic Poll Results 2021: ಮೊದಲ ಪ್ರಯತ್ನದಲ್ಲೇ ಮೋದಿ ನಾಡಿಗೆ ಭರ್ಜರಿ ಪ್ರವೇಶ ಪಡೆದ ‘ಜನಸಾಮಾನ್ಯ’
ಸೂರತ್ ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ 27 ಸ್ಥಾನಗಳಲ್ಲಿ ಆಮ್​ಆದ್ಮಿ ಪಕ್ಷ ಗೆಲುವು ಸಾಧಿಸಿದೆ.
guruganesh bhat
| Edited By: |

Updated on:Feb 23, 2021 | 7:38 PM

Share

ಸೂರತ್: ತನ್ನ ಚೊಚ್ಚಿಲ ಪ್ರಯತ್ನದಲ್ಲೇ ಸೂರತ್ ಸ್ಥಳೀಯ ನಗರ ಪಾಲಿಕೆ ಚುನಾವಣೆಯಲ್ಲಿ ಆಮ್​ಆದ್ಮಿ ಪಕ್ಷ 27 ಕ್ಷೇತ್ರಗಳನ್ನು ತನ್ನ ಜೇಬಿಗೆ ಇಳಿಸಿಕೊಂಡಿದೆ. ಇಂದು ನಡೆದ 6 ಮಹಾನಗರ ಕ್ಷೇತ್ರಗಳ ಮತ ಎಣಿಕೆಯಲ್ಲಿ ಸೂರತ್ ಕ್ಷೇತ್ರದ ಎಲ್ಲ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಇದೇ ಮೊದಲ ಬಾರಿಗೆ ಗುಜರಾತ್ ಸ್ಥಳೀಯ ಸಂಸ್ಥೆಗಳಿಗೆ ಸ್ಪರ್ಧಿಸಿದ್ದ ಆಮ್​ಆದ್ಮಿ ಪಾಲಿಗೆ ಸಿಹಿ ದೊರೆತಿದೆ.

ಒಟ್ಟು 120 ಸ್ಥಾನಗಳ ಪೈಕಿ 97ರಲ್ಲಿ ಬಿಜೆಪಿ ಗೆಲುವು ಪಡೆದಿದ್ದು, ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದೆ. ಕಳೆದ ಚುನಾವಣೆಯಲ್ಲಿ 36 ಸ್ಥಾನಗಳನ್ನು ಹೊಂದಿದ್ದ ಕಾಂಗ್ರೆಸ್​ಗೆ ಈ ಬಾರಿ ತೀವ್ರ ಮುಖಭಂಗವಾದಂತಾಗಿದೆ. ಒಂದೇ ಒಂದು ಸ್ಥಾನದಲ್ಲಿ ಗೆಲುವಿನ ನಗು ಬೀರಲು ಸಾಧ್ಯವಾಗದೇ, ಇರುವ 36 ಸ್ಥಾನಗಳನ್ನೂ ಕಳೆದುಕೊಂಡು ಖಾಲಿ ಕೈಯಲ್ಲಿ ಕೂರುವಂತಾಗಿದೆ. ಕಳೆದ ಚುನಾವಣೆಯಲ್ಲಿ ಎರಡು ಸ್ಥಾನಗಳಲ್ಲಿ ಗೆದ್ದಿದ್ದ ಸ್ವತಂತ್ರ ಅಭ್ಯರ್ಥಿಗಳು ಸಹ ಒಂದು ಸ್ಥಾನಗಳಲ್ಲಿ ಗೆಲ್ಲಲಾರದೇ ನಿರಾಶೆ ಪಟ್ಟಿದ್ದಾರೆ.

ಗೆಲುವು ಸಂಭ್ರಮಿಸಿದ ಅರವಿಂದ ಕೇಜ್ರಿವಾಲ್ ಸೂರತ್​ನಲ್ಲಿ ಮೊದಲ ಪ್ರಯತ್ನದಲ್ಲೇ 27 ಸ್ಥಾನಗಳಲ್ಲಿ ನಗು ಬೀರಿದ ಹರ್ಷದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮೂಲಕ ಗುಜರಾತಿನ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಗುಜರಾತ್ ರಾಜ್ಯದಲ್ಲಿ ಹೊಸ ಆಡಳಿತವನ್ನು ಪರಿಚಯಿಸಿದ್ದಕ್ಕಾಗಿ ಧನ್ಯವಾದಗಳು ಎಂದು ಅವರು ಟ್ವೀಟ್ ಮಾಡಿದ್ದಾರೆ.ಅಲ್ಲದೇ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಫೆಬ್ರವರಿ 26ರಂದು ಗುಜರಾತ್​ಗೆ ಆಗಮಿಸಿ ಸಾರ್ವಜನಿಕ ಮೆರವಣಿಗೆ ನಡೆಸಲಿದ್ದಾರೆ ಎಂದು ಆಮ್​ಆದ್ಮಿ ಪಕ್ಷ ತಿಳಿಸಿದೆ.

ಈ ಗೆಲುವು ಸಾಧಿಸಿದ ಕೆಲ ಕ್ಷಣಗಳಲ್ಲೇ ಗುಜರಾತ್ ಬಿಜೆಪಿ ಮುಖ್ಯಸ್ಥ ಸಿ.ಆರ್. ಪಾಟೀಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ‘ಕೇಂದ್ರೀಯ ನಾಯಕತ್ವದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಆಮ್​ಆದ್ಮಿ ಪಕ್ಷ ತನ್ನ ಹುಸಿ ಭರವಸೆಗಳಿಂದ 27 ಕ್ಷೇತ್ರಗಳನ್ನು ಬಾಚಿಕೊಂಡಿದೆ’ ಎಂದು ಹೇಳಿಕೆ ನೀಡಿದ್ದಾರೆ.

ಪಕ್ಷದ ತೀವ್ರ ಕಳಪೆ ಪ್ರದರ್ಶನದ ಜವಾಬ್ದಾರಿ ಹೊತ್ತ ಕಾಂಗ್ರೆಸ್​ನ ಸೂರತ್ ನಗರ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಬಾಬು ರಾಯ್ಕಾ ತನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:Gujarat Civic Poll Results 2021: ಗುಜರಾತ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 294 ಸೀಟು ಗೆದ್ದ ಬಿಜೆಪಿ, ಸಂಭ್ರಮಾಚರಣೆ ಶುರು

Gujarat BJP: ಭರೂಚ್ ಸ್ಥಳೀಯ ಪಾಲಿಕೆ ಚುನಾವಣೆ; ಅತಿ ಹೆಚ್ಚು ಮುಸ್ಲಿಂ ಅಭ್ಯರ್ಥಿಗಳಿಗೆ ಮಣೆ ಹಾಕಿದ ಬಿಜೆಪಿ

Published On - 7:36 pm, Tue, 23 February 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ