AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿಸಿ, ಜಂತರ್​ ಮಂತರ್​ನಲ್ಲಿ ಉಪವಾಸ ಸತ್ಯಾಗ್ರಹ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರು ಮತ್ತು ಕಾರ್ಯಕರ್ತರು ಭಾನುವಾರ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.   ಇಂದು ದೇಶ ಹಾಗೂ ಜಗತ್ತಿನಾದ್ಯಂತ ಸಿಎಂ ಕೇಜ್ರಿವಾಲ್ ಬೆಂಬಲಿಗರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಕಾರ್ಯಕರ್ತರು ತಿಳಿಸಿದ್ದಾರೆ.

ದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿಸಿ, ಜಂತರ್​ ಮಂತರ್​ನಲ್ಲಿ ಉಪವಾಸ ಸತ್ಯಾಗ್ರಹ
ಆಮ್​ ಆದ್ಮಿ ಪಕ್ಷದ ಕಾರ್ಯಕರ್ತರುImage Credit source: India TV
ನಯನಾ ರಾಜೀವ್
|

Updated on: Apr 07, 2024 | 9:33 AM

Share

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರು ಮತ್ತು ಕಾರ್ಯಕರ್ತರು ಭಾನುವಾರ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.   ಇಂದು ದೇಶ ಹಾಗೂ ಜಗತ್ತಿನಾದ್ಯಂತ ಸಿಎಂ ಕೇಜ್ರಿವಾಲ್ ಬೆಂಬಲಿಗರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಕಾರ್ಯಕರ್ತರು ತಿಳಿಸಿದ್ದಾರೆ.

ಉಪವಾಸ ಬೆಳಗ್ಗೆ 11ರಿಂದ ಸಂಜೆ 5ರವರೆಗೆ ನಡೆಯಲಿದೆ. ದೆಹಲಿ ಸರ್ಕಾರದ ಸಚಿವ ಗೋಪಾಲ್ ರೈ ಪ್ರಕಾರ, ಆಮ್ ಆದ್ಮಿ ಪಕ್ಷದ ಶಾಸಕರು, ಸಚಿವರು, ಸಂಸದರು ಮತ್ತು ಕೌನ್ಸಿಲರ್‌ಗಳು ದೆಹಲಿಯ ಜಂತರ್ ಮಂತರ್ ಮತ್ತು ಪಂಜಾಬ್‌ನ ಶಾಹೀದ್ ಭಗತ್ ಸಿಂಗ್ ಅವರ ಹಳ್ಳಿಯಾದ ಖತ್ಖರ್ಕಲನ್‌ನಲ್ಲಿ ಸಾಮೂಹಿಕ ಉಪವಾಸವನ್ನು ನಡೆಸಲಿದ್ದಾರೆ.

ಉತ್ತರಪ್ರದೇಶ, ಹರಿಯಾಣ, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ದೇಶದ 25 ರಾಜ್ಯಗಳ ರಾಜಧಾನಿಗಳು, ಜಿಲ್ಲಾ ಮತ್ತು ಬ್ಲಾಕ್ ಕೇಂದ್ರಗಳು, ಗ್ರಾಮಗಳು ಮತ್ತು ಪಟ್ಟಣಗಳಲ್ಲಿ ಸಾಮೂಹಿಕ ಉಪವಾಸ ಮಾಡುವ ಮೂಲಕ ಜನರು ಕೇಜ್ರಿವಾಲ್ ಅವರನ್ನು ಆಶೀರ್ವದಿಸಲಿದ್ದಾರೆ.

ಮತ್ತಷ್ಟು ಓದಿ: ತಿಹಾರ್​ ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್​ಗೆ ಅನಾರೋಗ್ಯ, 4.5 ಕೆಜಿ ತೂಕ ಕಳೆದುಕೊಂಡ ದೆಹಲಿ ಸಿಎಂ

ಭಾರತದ ಹೊರತಾಗಿ, ನ್ಯೂಯಾರ್ಕ್, ಬೋಸ್ಟನ್, ಲಾಸ್ ಏಂಜಲೀಸ್, ಯುಎಸ್‌ನ ವಾಷಿಂಗ್ಟನ್ ಡಿಸಿ, ಕೆನಡಾದ ಟೊರೊಂಟೊ, ಆಸ್ಟ್ರೇಲಿಯಾದ ಮೆಲ್ಬೋರ್ನ್, ಯುಕೆ ಯ ಲಂಡನ್ ಸೇರಿದಂತೆ ವಿದೇಶದ ಅನೇಕ ನಗರಗಳಲ್ಲಿ ಜನರು ಸಾಮೂಹಿಕ ಉಪವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಬಂಧಿತ ಮುಖ್ಯಮಂತ್ರಿ ಅಧಿಕಾರದಲ್ಲಿರುವುದನ್ನು ನಿಷೇಧಿಸುವ ಯಾವುದೇ ಕಾನೂನು ತಡೆಯನ್ನು ತೋರಿಸಲು ಅರ್ಜಿದಾರರು ವಿಫಲರಾಗಿದ್ದಾರೆ ಎಂದು ಗಮನಿಸಿದ ಪೀಠವು ಇದೇ ರೀತಿಯ ಪಿಐಎಲ್ ಅನ್ನು ವಜಾಗೊಳಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ